< ಯೆಶಾಯನು 34 >

1 ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.
Набли́зьтеся, люди, щоб чути, наро́ди ж, послухайте! Хай почує земля та все те, що на ній, вселе́нна й наща́дки її!
2 ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ.
Господній бо гнів на всі люди, а лютість на все їхнє ві́йсько: Він їх учинив за закля́ття, віддав їх на різь!
3 ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು.
І їхні побиті розки́дані будуть, а з трупів їхніх зді́йметься смо́рід, розто́пляться го́ри від їхньої кро́ви.
4 ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.
І небесні світи́ла усі позника́ють, а небо, як звій книжкови́й, буде зви́нене, і всі його зо́рі попа́дають, як спадає оте виногра́дове листя, й як спадає з фіґо́вниці плід недозрі́лий!.
5 ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.
Бо на небі напо́єний меч Мій, — оце він на Едома спускається та на закля́тий народ Мій на суд:
6 ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.
меч Господній напо́внився кров'ю, став ситий від лою, від крови теля́т та козлі́в, від лою бара́нячих ни́рок, бо Господу жертва в Боцрі й різани́на велика в едо́мській землі.
7 ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಮತ್ತು ಹೋರಿಗೂಳಿಗಳೂ ಹತವಾಗುವವು. ಆ ದೇಶವು ರಕ್ತದಿಂದ ತೊಯಿದಿರುವುದು, ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.
І бу́йволи зі́йдуть із ними, і телиці з бика́ми, і напо́їться кров'ю їхній край і наси́титься ту́ком їхній порох, —
8 ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.
бо це буде день помсти Господньої, рік заплати за за́колот проти Сіону!
9 ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು.
І перемі́няться в смо́лу пото́ки його, його ж порох — у сірку, і смолою палю́чою стане їхній край,
10 ೧೦ ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.
Не погасне вночі ані вдень, дим його підійма́тися буде пові́к, з роду в рід опусто́шений буде, на віки віків не пере́йде по ньому ніхто.
11 ೧೧ ಆದರೆ ಕಾಡಿನ ಪಕ್ಷಿಗಳು, ಪ್ರಾಣಿಗಳು ಅಲ್ಲಿ ವಾಸಿಸುವವು. ಗೂಬೆ ಮತ್ತು ಕಾಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ನಾಶ ಎಂಬ ನೂಲನ್ನೂ ಪಾಳು ಎಂಬ ಮಟ್ಟಗೋಲನ್ನೂ ಎಳೆಯುವನು.
І пося́де його пеліка́н та їжа́к, і перебува́тимуть в ньому сова́ та ворона, і над ним Він розтя́гне міри́льного шнура спусто́шення та виска зни́щення.
12 ೧೨ ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕುವುದಿಲ್ಲ; ದೇಶದಲ್ಲಿ ಪ್ರಧಾನರೇ ಇಲ್ಲದಂತಾಗುವರು.
Не буде шляхе́тних у ньому, щоб царство там проголоси́ти, і стануть нічи́м усі князі його.
13 ೧೩ ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.
І буде терни́на рости по пала́тах його, кропи́ва й будя́ччя в тверди́нях його, і він стане мешка́нням шака́лів, подвір'ям для стру́сів.
14 ೧೪ ಕಾಡುಮೃಗಗಳು ಮತ್ತು ನರಿಗಳು ಅಲ್ಲಿ ಸಂಧಿಸುವವು, ಕಾಡಿನ ಆಡುಗಳು ತನ್ನ ಜೊತೆಯನ್ನು ಕೂಗುವುದು, ಭೂತ ಪ್ರೇತಗಳು ಅಲ್ಲಿ ಹಾಯಾಗಿ ವಿಶ್ರಮಿಸಿಕೊಂಡು, ಆಸರೆಯನ್ನು ಕಂಡುಕೊಳ್ಳುವುದು.
І будуть стрічатися там дикі звірі пустинні з гієнами, а польови́к буде кликати друга свого́; Ліліт тільки там заспоко́їться і зна́йде собі відпочи́нок!
15 ೧೫ ಅಲ್ಲಿ ಗೂಬೆಯೂ ಗೂಡನ್ನು ಮಾಡಿಕೊಂಡು ಮೊಟ್ಟೆಯಿಟ್ಟು, ಮರಿಮಾಡಿ ಮರೆಯಲ್ಲಿ ಕೂಡಿಸಿಕೊಳ್ಳುವುದು. ಹೌದು, ಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವವು.
Там ку́блитись буде скаку́ча гадюка й склада́тиме я́йця, і виси́джувати буде та вигріва́тиме яйця свої. Там теж я́струби будуть збиратись один до одно́го.
16 ೧೬ ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು.
Пошукайте у книзі Господній й читайте: Із них не забракне ні о́дного, не будуть шукати один о́дного, бо у́ста Його — то вони наказали, а Дух Його — Він їх зібрав!
17 ೧೭ ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
І Він кинув для них жеребка́, а рука Його шнуром міри́льним його поділила для них, і пося́дуть його аж повік, з роду в рід будуть в нім пробува́ти!

< ಯೆಶಾಯನು 34 >