< ಯೆಶಾಯನು 35 >

1 ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು.
荒野と、かわいた地とは楽しみ、さばくは喜びて花咲き、さふらんのように、
2 ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.
さかんに花咲き、かつ喜び楽しみ、かつ歌う。これにレバノンの栄えが与えられ、カルメルおよびシャロンの麗しさが与えられる。彼らは主の栄光を見、われわれの神の麗しさを見る。
3 ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.
あなたがたは弱った手を強くし、よろめくひざを健やかにせよ。
4 ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.
心おののく者に言え、「強くあれ、恐れてはならない。見よ、あなたがたの神は報復をもって臨み、神の報いをもってこられる。神は来て、あなたがたを救われる」と。
5 ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.
その時、目しいの目は開かれ、耳しいの耳はあけられる。
6 ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.
その時、足なえは、しかのように飛び走り、おしの舌は喜び歌う。それは荒野に水がわきいで、さばくに川が流れるからである。
7 ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.
焼けた砂は池となり、かわいた地は水の源となり、山犬の伏したすみかは、葦、よしの茂りあう所となる。
8 ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
そこに大路があり、その道は聖なる道ととなえられる。汚れた者はこれを通り過ぎることはできない、愚かなる者はそこに迷い入ることはない。
9 ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು.
そこには、ししはおらず、飢えた獣も、その道にのぼることはなく、その所でこれに会うことはない。ただ、あがなわれた者のみ、そこを歩む。
10 ೧೦ ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.
主にあがなわれた者は帰ってきて、その頭に、とこしえの喜びをいただき、歌うたいつつ、シオンに来る。彼らは楽しみと喜びとを得、悲しみと嘆きとは逃げ去る。

< ಯೆಶಾಯನು 35 >