< ಯೆಶಾಯನು 35 >
1 ೧ ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು.
जंगल और वीराना शादमान होंगे दश्त ख़ुशी करेगा और नरगिस की तरह शगुफ़्ता होगा।
2 ೨ ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.
उसमें कसरत से कलियाँ निकलेंगी, वह शादमानी से गा कर ख़ुशी करेगा। लुबनान की शौकत और कर्मिल और शारून की ज़ीनत उसे दी जाएगी; वह ख़ुदावन्द का जलाल और हमारे ख़ुदा की हश्मत देखेंगे।
3 ೩ ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.
कमज़ोर हाथों को ताक़त और नातवान घुटनों को तवानाई दो।
4 ೪ ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.
उनको जो घबराने वाले हैं कहो, हिम्मत बांधो मत डरो देखो तुम्हारा ख़ुदा सज़ा और जज़ा लिए आता है। हाँ, ख़ुदा ही आएगा और तुम को बचाएगा।
5 ೫ ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.
उस वक़्त अन्धों की आँखें खोली जायेगी और बहरों के कान खोले जाएँगे।
6 ೬ ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.
तब लंगड़े हिरन की तरह चौकड़ियाँ भरेंगे और गूँगे की ज़बान गाएगी क्यूँकि वीरान में पानी और दश्त में नदियाँ फूट निकलेंगी।
7 ೭ ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.
बल्कि सराब तालाब हो जाएगा और प्यासी ज़मीन चश्मा बन जाएगी; गीदड़ों की मान्दों में जहाँ वह पड़े थे ने और नल का ठिकाना होगा।
8 ೮ ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
और वहाँ एक शाहराह और गुज़रगाह होगी जो पाक राह कहलाएगी; जिससे कोई नापाक गुज़र न करेगा लेकिन ये मुसाफ़िरों के लिए होगी, बेवक़ूफ़ भी उसमें गुमराह न होंगे।
9 ೯ ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು.
वहाँ शेर बबर न होगा और न कोई दरिन्दा उस पर चढ़ेगा न वहाँ पाया जाएगा; लेकिन जिनका फ़िदया दिया गया वहाँ सैर करेंगे।
10 ೧೦ ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.
और जिनको ख़ुदावन्द ने मख़लसी बख़्शी लौटेंगे और सिय्यून में गाते हुए आएँगे, और हमेशा सुरूर उनके सिरों पर होगा वह ख़ुशी और शादमानी हासिल करेंगे, और ग़म व अंदोह काफू़र हो जाएँगे।