< ಯೆಶಾಯನು 36 >
1 ೧ ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದೊಳಗೆ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
और हिज़क़ियाह बादशाह की सल्तनत के चौदहवें बरस यूँ हुआ कि शाह — ए — असूर सनहेरिब ने यहूदाह के सब फ़सीलदार शहरों पर चढ़ाई की और उनको ले लिया।
2 ೨ ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬುವವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಅಗಸರ ಹೊಲದ ಕಡೆಯಿಂದ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.
और शाह — ए — असूर ने रबशाक़ी को एक बड़े लश्कर के साथ लकीस से हिज़क़ियाह के पास येरूशलेम को भेजा, और उसने ऊपर के तालाब की नाली पर धोबियों के मैदान की राह में मक़ाम किया।
3 ೩ ಆ ಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಬಂದರು.
तब इलियाक़ीम बिन ख़िलक़ियाह जो घर का दीवान था, और शबनाह मुंशी और मुहर्रिर यूआख़ बिन आसिफ़ निकल कर उसके पास आए।
4 ೪ ರಬ್ಷಾಕೆಯು ಅವರಿಗೆ, “ನೀವು ಹೋಗಿ, ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ, ‘ಈ ನಿನ್ನ ಭರವಸೆಗೆ ಯಾವ ಆಧಾರವುಂಟು?
और रबशाक़ी ने उनसे कहा, तुम हिज़क़ियाह से कहो: कि मलिक — ए — मु'अज़म शाह — ए — असूर यूँ फ़रमाता है कि तू क्या एतमाद किए बैठा है?
5 ೫ ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿ ಮಾತೇ ಎಂದು ನಾನು ಹೇಳಬಲ್ಲೆ, ನೀನು ಯಾರನ್ನು ನಂಬಿಕೊಂಡು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದೀ?’
क्या मशवरत और जंग की ताक़त मुँह की बातें ही हैं आख़िर किस के भरोसे पर तूने मुझ से सरकशी की है?
6 ೬ “‘ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು.
देख, तुझे उस मसले हुए सरकंडे के 'असा या'नी मिस्र पर भरोसा है; उस पर अगर कोई टेक लगाए, तो वह उसके हाथ में गड़ जाएगा और उसे छेद देगा। शाह — ए — मिस्र फ़िर'औन उन सब के लिए, जो उस पर भरोसा करते हैं ऐसा ही है।
7 ೭ ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!
फ़िर अगर तू मुझ से यूँ कहे कि हमारा तवक्कुल ख़ुदावन्द हमारे ख़ुदा पर है, तो क्या वह वही नहीं है जिसके ऊँचे मक़ामों और मज़बहों को ढाकर हिज़क़ियाह ने यहूदाह और येरूशलेम से कहा है कि तुम इस मज़बह के आगे सिज्दा किया करो।
8 ೮ “ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?
इसलिए अब ज़रा मेरे आक़ा शाह — ए — असूर के साथ शर्त बाँध और मैं तुझे दो हज़ार घोड़े दूँगा, बशर्ते कि तू अपनी तरफ़ से उन पर सवार चढ़ा सके।
9 ೯ “ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.
भला तू क्यूँकर मेरे आक़ा के कमतरीन मुलाज़िमों में से एक सरदार का भी मुँह फेर सकता है? और तू रथों और सवारों के लिए मिस्र पर भरोसा करता है?
10 ೧೦ ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳು ಮಾಡಿಬಿಡು’ ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎನ್ನುವ ಅರಸನ ಮಾತುಗಳನ್ನು ತಿಳಿಸಿರಿ” ಎಂದು ಹೇಳಿದನು.
और क्या अब मैंने ख़ुदावन्द के बे कहे ही इस मक़ाम को ग़ारत करने के लिए इस पर चढ़ाई की है? ख़ुदावन्द ही ने तो मुझ से कहा कि इस मुल्क पर चढ़ाई कर और इसे ग़ारत करदे
11 ೧೧ ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.
तब इलियाक़ीम और शबनाह और यूआख़ ने रबशाक़ी से 'अर्ज़ की कि अपने ख़ादिमों से अरामी ज़बान में बात कर, क्यूँकि हम उसे समझते हैं, और दीवार पर के लोगों के सुनते हुए यहूदियों की ज़बान में हम से बात न कर।
12 ೧೨ ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಈ ಮಾತುಗಳನ್ನು ಹೇಳುವುದಕ್ಕೆ ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನ್ನ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.
लेकिन रबशाक़ी ने कहा, क्या मेरे आक़ा ने मुझे ये बातें कहने को तेरे आक़ा के पास या तेरे पास भेजा है? क्या उसने मुझे उन लोगों के पास नहीं भेजा, जो तुम्हारे साथ अपनी ही नजासत खाने और अपना ही क़ारूरा पीने को दीवार पर बैठे हैं?
13 ೧೩ ಆಮೇಲೆ ರಬ್ಷಾಕೆಯು ಎದ್ದು ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.
फिर रबशाक़ी खड़ा हो गया और यहूदियों की ज़बान में बलन्द आवाज़ से यूँ कहने लगा, कि मुल्क — ए — मु'अज़म शाह — ए — असूर का कलाम सुनो!
14 ೧೪ ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸ ಹೋಗಬೇಡಿರಿ. ಅವನು ನಿಮ್ಮನ್ನು ಬಿಡಿಸಲಾರನು.’
बादशाह यूँ फ़रमाता है: कि हिज़क़ियाह तुम को धोखा न दे, क्यूँकि वह तुम को छुड़ा नहीं सकेगा।
15 ೧೫ ಹಿಜ್ಕೀಯನು ನಿಮಗೆ, ‘ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’” ಎಂಬುದಾಗಿ ಹೇಳಿದರೆ,
और न वह ये कह कर तुम से ख़ुदावन्द पर भरोसा कराए कि ख़ुदावन्द ज़रूर हम को छुड़ाएगा, और ये शहर शाह — ए — असूर के हवाले न किया जाएगा।
16 ೧೬ ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.
हिज़क़ियाह की न सुनो; क्यूँकि शाह — ए — असूर यूँ फ़रमाता है कि तुम मुझ से सुलह कर लो, और निकलकर मेरे पास आओ; तुम में से हर एक अपनी ताक और अपने अंजीर के दरख़्त का मेवा खाता और अपने हौज़ का पानी पीता रहे।
17 ೧೭ ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.”
जब तक कि मैं आकर तुम को ऐसे मुल्क में न ले जाऊँ, जो तुम्हारे मुल्क की तरह ग़ल्ला और मय का मुल्क, रोटी और ताकिस्तानों का मुल्क है।
18 ೧೮ “ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?
ख़बरदार ऐसा न हो कि हिज़क़ियाह तुम को ये कह कर तरग़ीब दे, कि ख़ुदावन्द हम को छुड़ाएगा। क्या क़ौमों के मा'बूदों में से किसी ने भी अपने मुल्क को शाह — ए — असूर के हाथ से छुड़ाया है?
19 ೧೯ ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಯಿಂದ ತಪ್ಪಿಸಿದವೋ?
हमात और अरफ़ाद के मा'बूद कहाँ हैं? सिफ़वाइम के मा'बूद कहाँ हैं? क्या उन्होंने सामरिया को मेरे हाथ से बचा लिया?
20 ೨೦ ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು.
इन मुल्कों के तमाम मा'बूदों में से किस किस ने अपना मुल्क मेरे हाथ से छुड़ा लिया, जो ख़ुदावन्द भी येरूशलेम को मेरे हाथ से छुड़ा लेगा?
21 ೨೧ ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು, ಏನು ಹೇಳಲಿಲ್ಲ.
लेकिन वह ख़ामोश रहे और उसके जवाब में उन्होंने एक बात भी न कही; क्यूँकि बादशाह का हुक्म ये था कि उसे जवाब न देना।
22 ೨೨ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
और इलियाक़ीम — बिन — ख़िलक़ियाह जो घर का दीवान था, और शबनाह मुंशी और यूआख़ — बिन — आसफ़ मुहर्रिर अपने कपड़े चाक किए हुए हिज़क़ियाह के पास आए और रबशाक़ी की बातें उसे सुनाई।