< ಯೆಶಾಯನು 37 >
1 ೧ ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
Ikawa siku hiyo mfalme Hezekia aliposika taarifa zao, alichana mavazi yake, na kujifunika nguo za magunia, na akaenda kwenye nyumba ya Yahwe.
2 ೨ ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.
Na alimtuma Eliakimu, ambae ni kiongozi wa kaya na Shebna mwandishi, na wazee wa makuhani, wote walijifunika nguo za magunia, kwa Isaya mtoto wa Amozi, nabii.
3 ೩ ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.
Wakamwambia yeye, Hezekia akasema hivi, 'Siku hii ni siku ya dhiki, kukemewa, na aibu, ni kama mtoto aliye tayari kuzaliwa lakini mama yake hana nguvu za kumsukuma mtoto.
4 ೪ ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.
Itakuwa Yahwe Mungu wenu atasikia maneno ya kamanda mkuu, ambao mfalme wa Asira Bwana wake alimtuma kumpinga Mungu anayeishi, na atakemea maneno ambayo Yahwe Mungu wenu ameyasikia. Sasa inueni maombi yenu juu mabaki yaliyoobakia hapa.''
5 ೫ ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ,
Sasa watumishi wa mfalme Hezekia walikuja kwa Isaya,
6 ೬ “ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ.
na Isaya akawambia, ''Mwambieni Bwana wenu: 'Yahwe amesma, ''Msiogope kwa maneno mliyoyasikia, maneno ambayo mfalme wa Asiria amenitusi mimi.
7 ೭ ಇಗೋ, ನಾನು ಅವನ ಮೇಲೆ ಭಯದ ಆತ್ಮವನ್ನು ಬರ ಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ, ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ” ಎಂಬುದಾಗಿ ಉತ್ತರಕೊಟ್ಟನು.
Tazama nitaiweka roho yangu ndani yake na atasikiliiza taarifa fulani na atarudi kwenye nchi yake mwenyewe. Na nitamfanya anguke kwa upanga katika nchi yake mwenyewe.''
8 ೮ ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
Basi kamanda mkuu alirudi na kumkuta mfalme wa Asira anapigana dhidi ya Libna, Maana aliskia kwamba mfalme amekwenda mbali kutoka Lachishi.
9 ೯ ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನ್ನ ವಿರುದ್ಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನಾದ ಸನ್ಹೇರೀಬನು ಕೇಳಿ, ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿ,
Halafu Sennacheribi alisikia kwamba Tirkhaka mfalme wa Ethiopia na Misri wamehamasishana kupigna dhidi yake. Hivyo akamtuma mjumbe mara nyingine kwa Hezekia apeleke ujumbe:
10 ೧೦ “ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.’
''Mwambie Hezekia, mfalme wa Yuda, 'Usimruhusu Mungu unayemwamini akudanganye, ''Yerusalemu haitatiwa mikononi mwa mfalme wa Asiria.''
11 ೧೧ ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ?
umesikia kitu ambacho mfalme wa Asiria alichokifanya kwa nchi yote kwa kuiangamiza kabisa. Je utawaokoa?
12 ೧೨ ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
Je miungu ya mataifa imewakomboa? taifa ambalo baba yangu aliliangamiza: Gozani, Harani, Rezefi na watu wa Edeni katika Telassari?
13 ೧೩ ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
Yuko wapi mfalme wa Hamathi, mfalme wa Arpadi, mfalme wa miji ya Sefarvaaimi, wa Hema na Ivva?''
14 ೧೪ ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
Hezekia alipokea barua hii kutoka mikononi mwa mjumbe na kisoma. Halafu akaenda juu kwenye nyumba ya Yahwe na kuusoma mbele yake.
15 ೧೫ ಹಿಜ್ಕೀಯನು ಯೆಹೋವನನ್ನು ಕುರಿತು
Hezekia alimuomba Mungu:
16 ೧೬ “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.
Yahwe wa majeshi, Mungu wa Israeli, wewe ambae uko juu ya makerubi, wewe ni Mungu mwenywe juu falme zote za dunia. umezifanya mbingu na nchi.
17 ೧೭ ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.
Jeuza masikio yako, Yahwe, na sikiliza. Fungua macho yako, Ee Yahwe na uone, na usikilize maneno ya Sanacheribi, ambayo ameyatuma kumfanyia mzadha Mungu anayeishi.
18 ೧೮ ಯೆಹೋವನೇ, ಅಶ್ಶೂರದ ಅರಸರು ಸಕಲ ಜನಾಂಗಗಳನ್ನೂ, ಅವರ ದೇಶಗಳನ್ನೂ ಹಾಳು ಮಾಡಿದ್ದು ನಿಜ.
Ni kweli Yahwe, mfalme wa Asiria ameangamiza mataifa yote na aridhi yao.
19 ೧೯ ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.
Wameiweka miungu yao katika moto, maana haikuwa miungu lakini kazi ya mikono ya wanadamu, ni kuni na jiwe tu.
20 ೨೦ ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”
Hivyo Waasira wameawaangamiza wao. hivyo saa Yahwe Mungu wetu, tuokoe kwa nguvu zako, ili falme zote za duniani zijue kwamba wewe ni Yahwe peke yako.''
21 ೨೧ ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.’
Basi Isaya mtoto wa Amozi alituma ujumbe kwa Hezekia, na kusema, Yahwe Mungu wa Israeli amesema, Kwa sababu umeomba kwangu kuhusu Sannacheribi mfalme wa Asiria,
22 ೨೨ ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, ‘ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.
Haya ndiyo maneno ambayo Yahwe amezungumza kuhusu yeye, ''Binti bikira wa Sayuni wanakudharau na kukucheka kwa dharau; mabinti wa Yerusalemu wanatingisha vichwa vyao kwa ajili yako.
23 ೨೩ ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’
Ni nani unayempinga na kumtusi? na dhidi ya nani unayenyanyua sauti yako na kunyanyua macho yako kwa kiburi? dhidi ya mtakatifu wa Israeli.
24 ೨೪ ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
Kwa kupitia watumishi wako umempinga Bwana na amesema, 'Kwa wingi wa gari nimepanda juu kwenye kilele cha milima, katika kilele cha mwuinuko wa Lebanoni. Nitaikata mierezi yake na kuchagua miti ya miseprasi pale, ni msitu uzao sana.
25 ೨೫ ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ.
Nimechimba kisima na kunywa maji; nimechimba mito yote ya Misri chini ya nyayo za miguu yangu.'
26 ೨೬ ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.
Je haujasikia jinsi nilivyoamua toka siku nyingi na nimelifanyia kazi toka kipindi cha kale? ninayaleta sasa ili yaweze kutimia. Mko hapa kuhiaribu miji imara na yenye ulinzi wa kutosha na kuwa chungu cha uharibifu.
27 ೨೭ ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು.
Wakazi wake, waliowadhaifu, waliokata tamaa na wenye aibu. Wanaotesha shambani, majani mabichi, majani juu paa au kwenye shamba kabla ya upepo wa mashariki.
28 ೨೮ ನೀನು ಕುಳಿತುಕೊಳ್ಳುವುದೂ, ಹೊರಗೆ ಹೋಗುವುದೂ, ಒಳಗೆ ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಶನಾಗಿರುವುದನ್ನೂ ಬಲ್ಲೆನು.
Lakini najua kukaa kwenu chini, kutoka kwenu nje, mnapoingia ndani, na mnapokuwa wakali dhidi yangu.
29 ೨೯ ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
Kwa sababu mnakuwa wakali dhidi yangu, maana kiburi chenu kimeyafikia masikio yangu, Nitaweka ndoano katika pua zenu, na sauti katika midomo yenu; Nitawageuza nyuma kwenye njia mliyokuja nayo.
30 ೩೦ ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
Hii itakuwa wimbo kwenu: mwaka huu mtakula kinachoota porini na mwaka pili mtakula kinachoota hapo hapo. Lakini mwaka wa tatu lazima mpande na mvune, pandeni mizabibu na mle matunda yake.
31 ೩೧ ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.
Mabaki ya nyumba ya Yuda ambao wanaishi watachukua mzizi tena na kuzalisha matunda.
32 ೩೨ ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
Maana katika Yerusalemu waliobaki watatoka; Kutoka kwenye mlima Sayuni waliobaki watakuja. Bidii ya Yahwe wa majeshi itafanikisha hili.''
33 ೩೩ ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ.
Hivyo basi Yahwe asema hivi kuhusu Asiria: ''Atakuja katika miji, wala kurusha mkuki hapa. Wala atakuja hapa mbele kwa ngao au kujenga uzio njia panda dhidi yao.
34 ೩೪ ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವುದೇ ಇಲ್ಲ.
Njia atakayojia itakuwa njia hiyo hiyo atakayorudia; ataingia katika mji huu. Hili ni Tamko ya Yahwe.
35 ೩೫ ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.
Maana nitaulinda huu mji na kuuokoa, kwa niaba yangu mimi mwenyewe na kwa niaba Daudi mtumishi wangu.''
36 ೩೬ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
Halafu malaika wa Yahwe alienda nje na kuvamia kambi ya Waasiria, na kuwauwa askari 185, 000. Watu walipoamka asubuhi na mapema, miili iliyokufa imelala kila mahali.
37 ೩೭ ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
Hivyo Sennacheribi mfalme wa Asiria aliiacha Israeli na kwenda nyumbani na akakaa Ninewi.
38 ೩೮ ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
Baadaye, na alipokuwa anabudu katika nyumba ya Nisrochi mungu wake, mtoto wake Adramaleki na Shareza alimuua kwa upanga. Halafu wakakimbilia kwenye nchi ya Ararati. Halafu Esarhadoni mtoto wake akatawala katika sehemu ya baba yake.