< ಯೆಶಾಯನು 38 >

1 ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು.
בַּיָּמִ֣ים הָהֵ֔ם חָלָ֥ה חִזְקִיָּ֖הוּ לָמ֑וּת וַיָּב֣וֹא אֵ֠לָיו יְשַׁעְיָ֨הוּ בֶן־אָמ֜וֹץ הַנָּבִ֗יא וַיֹּ֨אמֶר אֵלָ֜יו כֹּֽה־אָמַ֤ר יְהוָה֙ צַ֣ו לְבֵיתֶ֔ךָ כִּ֛י מֵ֥ת אַתָּ֖ה וְלֹ֥א תִֽחְיֶֽה׃
2 ಇದನ್ನು ಕೇಳಿದೊಡನೆ ಹಿಜ್ಕೀಯನು ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವನನ್ನು ಪ್ರಾರ್ಥಿಸಿದನು.
וַיַּסֵּ֧ב חִזְקִיָּ֛הוּ פָּנָ֖יו אֶל־הַקִּ֑יר וַיִּתְפַּלֵּ֖ל אֶל־יְהוָֽה׃
3 ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.
וַיֹּאמַ֗ר אָנָּ֤ה יְהוָה֙ זְכָר־נָ֞א אֵ֣ת אֲשֶׁ֧ר הִתְהַלַּ֣כְתִּי לְפָנֶ֗יךָ בֶּֽאֱמֶת֙ וּבְלֵ֣ב שָׁלֵ֔ם וְהַטּ֥וֹב בְּעֵינֶ֖יךָ עָשִׂ֑יתִי וַיֵּ֥בְךְּ חִזְקִיָּ֖הוּ בְּכִ֥י גָדֽוֹל׃ ס
4 ಆಗ ಯೆಹೋವನು ಯೆಶಾಯನಿಗೆ,
וַֽיְהִי֙ דְּבַר־יְהוָ֔ה אֶֽל־יְשַׁעְיָ֖הוּ לֵאמֹֽר׃
5 “ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.
הָל֞וֹךְ וְאָמַרְתָּ֣ אֶל־חִזְקִיָּ֗הוּ כֹּֽה־אָמַ֤ר יְהוָה֙ אֱלֹהֵי֙ דָּוִ֣ד אָבִ֔יךָ שָׁמַ֙עְתִּי֙ אֶת־תְּפִלָּתֶ֔ךָ רָאִ֖יתִי אֶת־דִּמְעָתֶ֑ךָ הִנְנִי֙ יוֹסִ֣ף עַל־יָמֶ֔יךָ חֲמֵ֥שׁ עֶשְׂרֵ֖ה שָׁנָֽה׃
6 ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು, ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು.
וּמִכַּ֤ף מֶֽלֶךְ־אַשּׁוּר֙ אַצִּ֣ילְךָ֔ וְאֵ֖ת הָעִ֣יר הַזֹּ֑את וְגַנּוֹתִ֖י עַל־הָעִ֥יר הַזֹּֽאת׃
7 ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬುದಕ್ಕೆ ಒಂದು ಗುರುತನ್ನು ಕಾಣುವಿ.
וְזֶה־לְּךָ֥ הָא֖וֹת מֵאֵ֣ת יְהוָ֑ה אֲשֶׁר֙ יַעֲשֶׂ֣ה יְהוָ֔ה אֶת־הַדָּבָ֥ר הַזֶּ֖ה אֲשֶׁ֥ר דִּבֵּֽר׃
8 ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡುವೆನು’ ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬುದಾಗಿ ತಿಳಿಸು” ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂತು.
הִנְנִ֣י מֵשִׁ֣יב אֶת־צֵ֣ל הַֽמַּעֲל֡וֹת אֲשֶׁ֣ר יָרְדָה֩ בְמַעֲל֨וֹת אָחָ֥ז בַּשֶּׁ֛מֶשׁ אֲחֹרַנִּ֖ית עֶ֣שֶׂר מַעֲל֑וֹת וַתָּ֤שָׁב הַשֶּׁ֙מֶשׁ֙ עֶ֣שֶׂר מַעֲל֔וֹת בַּֽמַּעֲל֖וֹת אֲשֶׁ֥ר יָרָֽדָה׃ ס
9 ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಆರೋಗ್ಯವನ್ನು ಹೊಂದಿದ ನಂತರ ಬರೆದದ್ದು.
מִכְתָּ֖ב לְחִזְקִיָּ֣הוּ מֶֽלֶךְ־יְהוּדָ֑ה בַּחֲלֹת֕וֹ וַיְחִ֖י מֵחָלְיֽוֹ׃
10 ೧೦ ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು. (Sheol h7585)
אֲנִ֣י אָמַ֗רְתִּי בִּדְמִ֥י יָמַ֛י אֵלֵ֖כָה בְּשַׁעֲרֵ֣י שְׁא֑וֹל פֻּקַּ֖דְתִּי יֶ֥תֶר שְׁנוֹתָֽי׃ (Sheol h7585)
11 ೧೧ ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲಿ ಒಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನು.
אָמַ֙רְתִּי֙ לֹא־אֶרְאֶ֣ה יָ֔הּ יָ֖הּ בְּאֶ֣רֶץ הַחַיִּ֑ים לֹא־אַבִּ֥יט אָדָ֛ם ע֖וֹד עִם־י֥וֹשְׁבֵי חָֽדֶל׃
12 ೧೨ ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ. ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.
דּוֹרִ֗י נִסַּ֧ע וְנִגְלָ֛ה מִנִּ֖י כְּאֹ֣הֶל רֹעִ֑י קִפַּ֨דְתִּי כָאֹרֵ֤ג חַיַּי֙ מִדַּלָּ֣ה יְבַצְּעֵ֔נִי מִיּ֥וֹם עַד־לַ֖יְלָה תַּשְׁלִימֵֽנִי׃
13 ೧೩ ನಾನು ಬೆಳಗಿನ ತನಕ ಕೂಗಿಕೊಂಡೇ ಇದ್ದೆನು. ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.
שִׁוִּ֤יתִי עַד־בֹּ֙קֶר֙ כָּֽאֲרִ֔י כֵּ֥ן יְשַׁבֵּ֖ר כָּל־עַצְמוֹתָ֑י מִיּ֥וֹם עַד־לַ֖יְלָה תַּשְׁלִימֵֽנִי׃
14 ೧೪ ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಆಶ್ರಯವಾಗು ಎಂದು ನಿನ್ನನು ದೃಷ್ಟಿಸುತ್ತಾ ಕಂಗೆಟ್ಟೆನು.
כְּס֤וּס עָגוּר֙ כֵּ֣ן אֲצַפְצֵ֔ף אֶהְגֶּ֖ה כַּיּוֹנָ֑ה דַּלּ֤וּ עֵינַי֙ לַמָּר֔וֹם אֲדֹנָ֖י עָֽשְׁקָה־לִּ֥י עָרְבֵֽנִי׃
15 ೧೫ ನಾನು ಏನು ಹೇಳಲಿ! ಆತನು ನನಗೆ ಮಾತುಕೊಟ್ಟು ಅದರಂತೆ ತಾನೇ ನೆರವೇರಿಸಿದ್ದಾನೆ! ನನ್ನ ಆತ್ಮಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು.
מָֽה־אֲדַבֵּ֥ר וְאָֽמַר־לִ֖י וְה֣וּא עָשָׂ֑ה אֶדַּדֶּ֥ה כָל־שְׁנוֹתַ֖י עַל־מַ֥ר נַפְשִֽׁי׃
16 ೧೬ ಯೆಹೋವನೇ, ಇಂಥಾ ಸಂಭವಗಳಿಂದ ಮನುಷ್ಯರು ಬದುಕುತ್ತಾರೆ. ಅವುಗಳಿಂದಲೇ ನನ್ನ ಆತ್ಮವು ಜೀವಿಸುತ್ತದೆ. ಈಗ ನನ್ನನ್ನು ಸ್ವಸ್ಥಮಾಡಿ ಬದುಕುವಂತೆ ಮಾಡಿದೆ.
אֲדֹנָ֖י עֲלֵיהֶ֣ם יִֽחְי֑וּ וּלְכָל־בָּהֶן֙ חַיֵּ֣י רוּחִ֔י וְתַחֲלִימֵ֖נִי וְהַחֲיֵֽנִי׃
17 ೧೭ ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.
הִנֵּ֥ה לְשָׁל֖וֹם מַר־לִ֣י מָ֑ר וְאַתָּ֞ה חָשַׁ֤קְתָּ נַפְשִׁי֙ מִשַּׁ֣חַת בְּלִ֔י כִּ֥י הִשְׁלַ֛כְתָּ אַחֲרֵ֥י גֵוְךָ֖ כָּל־חֲטָאָֽי׃
18 ೧೮ ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ. (Sheol h7585)
כִּ֣י לֹ֥א שְׁא֛וֹל תּוֹדֶ֖ךָּ מָ֣וֶת יְהַלְלֶ֑ךָּ לֹֽא־יְשַׂבְּר֥וּ יֽוֹרְדֵי־ב֖וֹר אֶל־אֲמִתֶּֽךָ׃ (Sheol h7585)
19 ೧೯ ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.
חַ֥י חַ֛י ה֥וּא יוֹדֶ֖ךָ כָּמ֣וֹנִי הַיּ֑וֹם אָ֣ב לְבָנִ֔ים יוֹדִ֖יעַ אֶל־אֲמִתֶּֽךָ׃
20 ೨೦ ಯೆಹೋವನು ನನಗೆ ರಕ್ಷಣಾಪರನಾಗಿದ್ದಾನೆ. ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.”
יְהוָ֖ה לְהוֹשִׁיעֵ֑נִי וּנְגִנוֹתַ֧י נְנַגֵּ֛ן כָּל־יְמֵ֥י חַיֵּ֖ינוּ עַל־בֵּ֥ית יְהוָֽה׃
21 ೨೧ ಯೆಶಾಯನು, “ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು” ಎಂದು ಅಪ್ಪಣೆಕೊಟ್ಟನು.
וַיֹּ֣אמֶר יְשַׁעְיָ֔הוּ יִשְׂא֖וּ דְּבֶ֣לֶת תְּאֵנִ֑ים וְיִמְרְח֥וּ עַֽל־הַשְּׁחִ֖ין וְיֶֽחִי׃
22 ೨೨ ಹಿಜ್ಕೀಯನು, “ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದ್ದನು.
וַיֹּ֥אמֶר חִזְקִיָּ֖הוּ מָ֣ה א֑וֹת כִּ֥י אֶעֱלֶ֖ה בֵּ֥ית יְהוָֽה׃ ס

< ಯೆಶಾಯನು 38 >