< ಯೆಶಾಯನು 38 >
1 ೧ ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು.
V tistih dneh je bil Ezekíja na smrt bolan. Amócov sin, prerok Izaija, je prišel k njemu ter mu rekel: »Tako govori Gospod: ›Postavi svojo hišo v red, kajti umrl boš in ne živel.‹«
2 ೨ ಇದನ್ನು ಕೇಳಿದೊಡನೆ ಹಿಜ್ಕೀಯನು ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವನನ್ನು ಪ್ರಾರ್ಥಿಸಿದನು.
Potem je Ezekíja svoj obraz obrnil k steni, molil h Gospodu
3 ೩ ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.
in rekel: »Spomni se sedaj, oh Gospod, rotim te, kako sem hodil pred teboj v resnici in s popolnim srcem in delal to, kar je dobro v tvojem pogledu.« In Ezekíja je bridko zajokal.
4 ೪ ಆಗ ಯೆಹೋವನು ಯೆಶಾಯನಿಗೆ,
Potem je prišla Gospodova beseda k Izaiju, rekoč:
5 ೫ “ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.
»Pojdi in povej Ezekíju: ›Tako govori Gospod, Bog tvojega očeta Davida: ›Slišal sem tvojo molitev, videl sem tvoje solze. Glej, tvojim dnevom bom dodal petnajst let.
6 ೬ ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು, ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು.
Tebe in to mesto bom osvobodil iz roke asirskega kralja in jaz bom branil to mesto.
7 ೭ ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬುದಕ್ಕೆ ಒಂದು ಗುರುತನ್ನು ಕಾಣುವಿ.
To ti bo znamenje od Gospoda, da bo Gospod storil to stvar, ki jo je govoril:
8 ೮ ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡುವೆನು’ ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬುದಾಗಿ ತಿಳಿಸು” ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂತು.
›Glej, senco stopinj, ki se je na Aházovi sončni uri spustila, bom ponovno privedel deset stopinj nazaj.‹« Tako se je sonce vrnilo [za] deset stopinj, po stopinjah, po katerih se je spustilo.
9 ೯ ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಆರೋಗ್ಯವನ್ನು ಹೊಂದಿದ ನಂತರ ಬರೆದದ್ದು.
Pisanje Judovega kralja Ezekíja, ko je bil bolan in je okreval od svoje bolezni:
10 ೧೦ ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು. (Sheol )
»Rekel sem o preostanku svojih dni: ›Šel bom do velikih vrat groba. Prikrajšan sem preostanka svojih let.‹ (Sheol )
11 ೧೧ ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲಿ ಒಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನು.
Rekel sem: ›Ne bom videl Gospoda, celó Gospoda, v deželi živih. Ne bom več gledal človeka s prebivalci sveta.
12 ೧೨ ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ. ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.
Moja starost je odšla in od mene je odstranjena kakor pastirski šotor. Kakor tkalec sem odrezal svoje življenje. Odrezal me bo z mučno boleznijo. Od dneva, celo do noči boš naredil moj konec.
13 ೧೩ ನಾನು ಬೆಳಗಿನ ತನಕ ಕೂಗಿಕೊಂಡೇ ಇದ್ದೆನು. ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.
Štel sem do jutra, da bo, tako kakor lev, zlomil vse moje kosti. Od dneva, celó do noči boš iz mene naredil konec.
14 ೧೪ ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಆಶ್ರಯವಾಗು ಎಂದು ನಿನ್ನನು ದೃಷ್ಟಿಸುತ್ತಾ ಕಂಗೆಟ್ಟೆನು.
Kakor žerjav ali lastovka, tako sem žvrgolel. Žaloval sem kakor golobica. Moje oči pešajo z gledanjem navzgor. Oh Gospod, zatiran sem, zavzemi se zame.
15 ೧೫ ನಾನು ಏನು ಹೇಳಲಿ! ಆತನು ನನಗೆ ಮಾತುಕೊಟ್ಟು ಅದರಂತೆ ತಾನೇ ನೆರವೇರಿಸಿದ್ದಾನೆ! ನನ್ನ ಆತ್ಮಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು.
Kaj naj rečem? On mi je tako govoril in sam je to storil. Vsa svoja leta bom mirno hodil v grenkobi svoje duše.
16 ೧೬ ಯೆಹೋವನೇ, ಇಂಥಾ ಸಂಭವಗಳಿಂದ ಮನುಷ್ಯರು ಬದುಕುತ್ತಾರೆ. ಅವುಗಳಿಂದಲೇ ನನ್ನ ಆತ್ಮವು ಜೀವಿಸುತ್ತದೆ. ಈಗ ನನ್ನನ್ನು ಸ್ವಸ್ಥಮಾಡಿ ಬದುಕುವಂತೆ ಮಾಡಿದೆ.
Oh Gospod, po teh stvareh ljudje živijo in v vseh teh stvareh je življenje mojega duha. Tako me boš obnovil in me pripravil, da živim.
17 ೧೭ ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.
Glej, za mir sem imel veliko grenkobo, toda ti si v ljubezni do moje duše le-to osvobodil iz jame izprijenosti, kajti vse moje grehe si vrgel za svoj hrbet.
18 ೧೮ ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ. (Sheol )
Kajti grob te ne more hvaliti, smrt te ne more proslavljati. Tisti, ki gredo dol v jamo, ne morejo upati na tvojo resnico. (Sheol )
19 ೧೯ ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.
Živeči, živeči, ta te bo hvalil, kakor danes počnem jaz. Oče bo otrokom dal spoznati tvojo resnico.
20 ೨೦ ಯೆಹೋವನು ನನಗೆ ರಕ್ಷಣಾಪರನಾಗಿದ್ದಾನೆ. ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.”
Gospod je bil pripravljen, da me reši. Zato bomo peli moje pesmi, na glasbila na strune, vse dni našega življenja v hiši Gospodovi.‹«
21 ೨೧ ಯೆಶಾಯನು, “ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು” ಎಂದು ಅಪ್ಪಣೆಕೊಟ್ಟನು.
Kajti Izaija je rekel: »Naj vzamejo kepo fig in jo položijo za pomirjevalo na vnetje in okreval bo.«
22 ೨೨ ಹಿಜ್ಕೀಯನು, “ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದ್ದನು.
Ezekíja je tudi rekel: »Kaj je znamenje, da bom šel gor, h Gospodovi hiši?«