< ಯೆಶಾಯನು 39 >

1 ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
У то време Меродах-Валадан, син Валаданов, цар вавилонски, посла књигу с даром Језекији; јер беше чуо да је био болестан и оздравио.
2 ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದುದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
И Језекија се обрадова томе, и показа им све ризнице своје, сребро и злато и мирисе, и најбоље уље, и кућу где му беше оружје, и шта се год налажаше у ризницама његовим, не оста ништа да им не показа Језекија у кући својој и у свему господству свом.
3 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹುದೂರ ದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು” ಎಂದು ಉತ್ತರಕೊಟ್ಟನು.
Тада дође пророк Исаија к цару Језекији и рече му: Шта су говорили ти људи и одакле су дошли к теби? А Језекија рече: Из далеке земље дошли су к мени, из Вавилона.
4 ಯೆಶಾಯನು ತಿರುಗಿ ಹಿಜ್ಕೀಯನಿಗೆ, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರುವುದಿಲ್ಲ” ಎಂದನು.
А он рече: Шта су видели у твом двору? А Језекија рече: Видели су све што има у мом двору; није остало ништа у ризницама мојим да им нисам показао.
5 ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳು.
Тада рече Исаија Језекији: Чуј реч Господа над војскама.
6 ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ.
Ево доћи ће време кад ће се однети у Вавилон све што има у кући твојој, и што су сабирали оци твоји до данас, неће остати ништа, вели Господ.
7 “ಬಾಬೆಲಿನ ಅರಸನು ಬಂದು, ನೀನು ಪಡೆದ ಮಕ್ಕಳನ್ನು ತೆಗೆದುಕೊಂಡು ಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಅನ್ನುತ್ತಾನೆ” ಎಂದು ಹೇಳಿದನು.
И синове твоје, који ће изаћи од тебе, које ћеш родити, узеће да буду дворани у двору цара вавилонског.
8 “ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವುದು” ಎಂದುಕೊಂಡು ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ” ಎಂದು ಉತ್ತರಕೊಟ್ಟನು.
А Језекија рече Исаији: Добра је реч Господња коју си рекао. Још рече: Је ли? За мог века биће мир и вера?

< ಯೆಶಾಯನು 39 >