< ಯೆಶಾಯನು 4 >
1 ೧ ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.
१उस समय सात स्त्रियाँ एक पुरुष को पकड़कर कहेंगी, “रोटी तो हम अपनी ही खाएँगी, और वस्त्र अपने ही पहनेंगी, केवल हम तेरी कहलाएँ; हमारी नामधराई दूर कर।”
2 ೨ ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.
२उस समय इस्राएल के बचे हुओं के लिये यहोवा की डाली, भूषण और महिमा ठहरेगी, और भूमि की उपज, बड़ाई और शोभा ठहरेगी।
3 ೩ ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.
३और जो कोई सिय्योन में बचा रहे, और यरूशलेम में रहे, अर्थात् यरूशलेम में जितनों के नाम जीवनपत्र में लिखे हों, वे पवित्र कहलाएँगे।
4 ೪ ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು.
४यह तब होगा, जब प्रभु न्याय करनेवाली और भस्म करनेवाली आत्मा के द्वारा सिय्योन की स्त्रियों के मल को धो चुकेगा और यरूशलेम के खून को दूर कर चुकेगा।
5 ೫ ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.
५तब यहोवा सिय्योन पर्वत के एक-एक घर के ऊपर, और उसके सभास्थानों के ऊपर, दिन को तो धुएँ का बादल, और रात को धधकती आग का प्रकाश सिरजेगा, और समस्त वैभव के ऊपर एक मण्डप छाया रहेगा।
6 ೬ ಅದು ಹಗಲಿನ ಬಿಸಿಲಿನಲ್ಲಿ ನೆರಳನ್ನೂ, ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಗುಡಾರವಾಗಿರುವುದು.
६वह दिन को धूप से बचाने के लिये और आँधी–पानी और झड़ी में एक शरण और आड़ होगा।