< ಯೆಶಾಯನು 40 >
1 ೧ “ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.
Comfort ye, comfort ye my people, saith your God.
2 ೨ ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.
Speak ye [comfort] to the heart of Jerusalem, and call out unto her, that her time of sorrow is accomplished, that her iniquity is atoned for; for she hath received from the hand of the Lord double for all her sins.
3 ೩ ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”
A voice calleth out, In the wilderness make ye clear the way of the Lord, make straight in the desert a highway for God.
4 ೪ ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು.
Every valley shall be raised, and every mountain and hill shall be made low; and the crooked shall be made a straight path, and the rough places a plain:
5 ೫ ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.
And the glory of the Lord shall be revealed; and all flesh shall see it together; for the mouth of the Lord hath spoken it.
6 ೬ ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.
A voice saith, Proclaim; and he saith, What shall I proclaim? all flesh is grass, and all its goodliness is as the flower of the field:
7 ೭ ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!
The grass withereth, the flower fadeth; because the breath of the Lord hath blown upon it; surely the people is grass.
8 ೮ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.
The grass withereth, the flower fadeth; but the word of our God will stand firm for ever.
9 ೯ ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!
Upon a high mountain get thee up, thou that bringest good tidings to Zion; lift up with strength thy voice, thou who bringest good tidings to Jerusalem; lift it up, be not afraid; say unto the cities of Judah, Behold, [here is] your God!
10 ೧೦ ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.
Behold, the Lord Eternal will come with might, and his arm ruleth for him: behold, his reward is with him, and his recompense before him.
11 ೧೧ ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
Like a shepherd will he feed his flock: with his arm will he gather the lambs, and in his bosom will he carry them, will he lead gently those that suckle their young.
12 ೧೨ ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ, ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?
Who hath measured in the hollow of his hand the waters, and meted out the heavens with the span, and comprised in a measure the dust of the earth, and weighed in the scale-beam the mountains, and the hills in balances?
13 ೧೩ ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?
Who hath meted out the Spirit of the Lord? and [who was] his counsellor that he could have given him information?
14 ೧೪ ಆತನು ಯಾರ ಆಲೋಚನೆಯನ್ನು ಕೇಳಿದನು? ಯಾರು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು? ಯಾರು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕ ಮಾರ್ಗವನ್ನು ತೋರಿಸಿದವನು?
With whom took he counsel, that he gave him understanding, and taught him the path of justice, and taught him knowledge, and caused him to know the way of understanding?
15 ೧೫ ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.
Behold, nations are as a drop out of a bucket, and as the small dust of the balance are they accounted: behold, isles are like the flying dust.
16 ೧೬ (ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು, ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು.
And Lebanon is not sufficient for burning, and its beasts do not suffice for burnt-offering.
17 ೧೭ ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.
All the nations are as naught before him; less than nothing, and vanity are they accounted to him.
18 ೧೮ ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?
To whom then will ye liken God? or what likeness will ye compare unto him?
19 ೧೯ ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.
The graven image the artificer hath cast and the goldsmith hath overspread it with gold, and fabricated [on it] silver chains.
20 ೨೦ (ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು, ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.
He that is skilled in the choice chooseth a wood that will not rot; he seeketh unto himself a skilful workman to prepare a graven image, that shall not be moved.
21 ೨೧ ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ?
Know ye not? hath it not been told you from the beginning? have ye not paid attention to the foundations of the earth?
22 ೨೨ ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.
[It is he] that dwelleth above the circle of the earth, while its inhabitants are as grasshoppers; that stretched out the heavens as a curtain, and spreadeth them out as a tent to dwell in;
23 ೨೩ ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.
That bringeth princes to naught; rendering the judges of the earth as vanity.
24 ೨೪ ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.
Yes, they were not yet planted; yea, they were not yet sown; yea, their stem had not yet taken root in the earth: when he but breathed upon them, and they withered, and the storm-wind carrieth them away as stubble.
25 ೨೫ ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಸದಮಲಸ್ವಾಮಿಯು ಕೇಳುತ್ತಾನೆ.
To whom then will ye liken me, that I should be equal to? saith the Holy One.
26 ೨೬ ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.
Lift up your eyes on high, and see who hath created these? he that bringeth out their host by number; that calleth them all by name; from the Mighty One not one escapeth.
27 ೨೭ ಯಾಕೋಬೇ, ಇಸ್ರಾಯೇಲೇ, “ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ” ಎಂದು ಏಕೆ ಅಂದುಕೊಳ್ಳುತ್ತೀ?
Why wilt thou say, O Jacob, and speak, O Israel, My way is hidden from the Lord, and my cause hath passed from the cognizance of my God?
28 ೨೮ ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.
Dost thou not know? hast thou not heard? The God of everlasting is the Lord, is the Creator of the ends of the earth; he will not be faint and weary; unsearchable is his understanding.
29 ೨೯ ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
He giveth to the faint strength; and to the powerless he imparteth much might.
30 ೩೦ ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.
Though youths should grow faint and be weary, and young men should utterly stumble:
31 ೩೧ ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.
Yet they that wait upon the Lord shall acquire new strength, they shall mount up with wings as eagles; they shall run and not be weary, they shall walk, and not become faint.