< ಯೆಶಾಯನು 42 >
1 ೧ ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
Se min Tjener, ved hvem jeg min udvalgte, hvem jeg har kær! På ham har jeg lagt min Ånd, han skal udbrede Ret til Folkene.
2 ೨ ಇವನು ಕೂಗಾಡುವುದಿಲ್ಲ, ಆರ್ಭಟಿಸುವುದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವುದಿಲ್ಲ.
Han råber og skriger ikke, løfter ej Røsten på Gaden,
3 ೩ ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ, ಸದ್ಧರ್ಮವನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು.
bryder ej knækket Rør og slukker ej rygende Tande. Han udbreder Ret med Troskab,
4 ೪ ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.
vansmægter, udmattes ikke, før han får sat Ret på Jorden; og fjerne Strande bier på hans Lov.
5 ೫ ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,
Så siger Gud HERREN, som skabte og udspændte Himlen, udbredte Jorden med dens Grøde, gav Folkene på den Åndedræt og dem, som vandrer der, Ånde.
6 ೬ “ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
Jeg, HERREN, har kaldet dig i Retfærd og grebet dig fast om Hånd; jeg vogter dig, og jeg gør dig til Folkepagt, til Hedningelys
7 ೭ ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.
for at åbne de blinde Øjne og føre de fangne fra Fængslet, fra Fangehullet Mørkets Gæster.
8 ೮ ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.
Jeg er HERREN, så lyder mit Navn. Jeg giver ej andre min Ære, ej Gudebilleder min Pris.
9 ೯ ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”
Hvad jeg forudsagde, se, det er sket, jeg forkynder nu nye Ting, kundgør dem, før de spirer frem.
10 ೧೦ ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.
Syng HERREN en ny Sang, hans Pris over Jorden vide; Havet og dets Fylde skal juble, fjerne Strande og de, som bebor dem;
11 ೧೧ ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.
Ørkenen og dens Byer stemmer i, de Lejre, hvor Kedar bor; Klippeboerne jubler, råber fra Bjergenes Tinder;
12 ೧೨ ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.
HERREN giver de Ære, forkynder hans Pris på fjerne Strande.
13 ೧೩ ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.
HERREN drager ud som en Helt, han vækker som en Stridsmand sin Kamplyst, han udstøder Krigsskrig, han brøler, æsker sine Fjender til Strid.
14 ೧೪ ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿ ಹಿಡಿದಿದ್ದೆನು. ಈಗ ಹೆರುವವಳಂತೆ ಕೂಗುವೆನು. ನಿಟ್ಟುಸಿರಿನೊಡನೆ ಏದುವೆನು.
En Evighed lang har jeg tiet, været tavs og lagt Bånd på mig selv; nu skriger jeg som Kvinde i Barnsnød, stønner og snapper efter Luft.
15 ೧೫ ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ, ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು.
Jeg gør Bjerge og Høje tørre, afsvider alt deres Grønt, gør Strømme til udtørret Land, og Sumpe lægger jeg tørre.
16 ೧೬ ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.
Jeg fører blinde ad ukendt Vej, leder dem ad ukendte Stier, gør Mørket foran dem til Lys og Bakkelandet til Slette. Det er de Ting, jeg gør, og dem går jeg ikke fra.
17 ೧೭ ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.
Vige og dybt beskæmmes skal de, som stoler på Billeder, som siger til støbte Billeder: "I er vore Guder!"
18 ೧೮ ಕಿವುಡರೇ, ಕೇಳಿರಿ! ಕುರುಡರೇ, ನೀವು ಕಣ್ಣಿಟ್ಟು ನೋಡಿರಿ!
I, som er døve, hør, løft Blikket, I blinde, og se!
19 ೧೯ ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?
Hvo er blind, om ikke min Tjener, og døv som Budet, jeg sendte? Hvo er blind som min håndgangne Mand, blind som HERRENs Tjener?
20 ೨೦ ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.
Meget så han, men ænsed det ikke, trods åbne Ører hørte han ej.
21 ೨೧ ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.
For sin Retfærds Skyld vilde HERREN løfte Loven til Højhed og Ære.
22 ೨೨ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.
Men Folket er plyndret og hærget; de er alle bundet i Huler, skjult i Fangers Huse, til Ran blev de, ingen redder, til Plyndring, ingen siger: "Slip dem!"
23 ೨೩ ನಿಮ್ಮಲ್ಲಿ ಯಾರು ಈ ಮಾತಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?
Hvem af jer vil lytte til dette, mærke sig og fremtidig høre det:
24 ೨೪ ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ
Hvo hengav Jakob til Plyndring, gav Israel hen til Ransmænd? Mon ikke HERREN: mod hvem vi synded, hvis Veje de ej vilde vandre, hvis Lov de ikke hørte?
25 ೨೫ ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.
Han udgød over det Harme, sin Vrede og Krigens Vælde; den luede om det, det ænsed det ej, den sved det, det tog sig det ikke til Hjerte.