< ಯೆಶಾಯನು 43 >

1 ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
וְעַתָּ֞ה כֹּֽה־אָמַ֤ר יְהוָה֙ בֹּרַאֲךָ֣ יַעֲקֹ֔ב וְיֹצֶרְךָ֖ יִשְׂרָאֵ֑ל אַל־תִּירָא֙ כִּ֣י גְאַלְתִּ֔יךָ קָרָ֥אתִי בְשִׁמְךָ֖ לִי־אָֽתָּה׃
2 ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.
כִּֽי־תַעֲבֹ֤ר בַּמַּ֙יִם֙ אִתְּךָ־אָ֔נִי וּבַנְּהָרֹ֖ות לֹ֣א יִשְׁטְפ֑וּךָ כִּֽי־תֵלֵ֤ךְ בְּמֹו־אֵשׁ֙ לֹ֣א תִכָּוֶ֔ה וְלֶהָבָ֖ה לֹ֥א תִבְעַר־בָּֽךְ׃
3 ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.
כִּ֗י אֲנִי֙ יְהוָ֣ה אֱלֹהֶ֔יךָ קְדֹ֥ושׁ יִשְׂרָאֵ֖ל מֹושִׁיעֶ֑ךָ נָתַ֤תִּי כָפְרְךָ֙ מִצְרַ֔יִם כּ֥וּשׁ וּסְבָ֖א תַּחְתֶּֽיךָ׃
4 ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ, ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.
מֵאֲשֶׁ֨ר יָקַ֧רְתָּ בְעֵינַ֛י נִכְבַּ֖דְתָּ וַאֲנִ֣י אֲהַבְתִּ֑יךָ וְאֶתֵּ֤ן אָדָם֙ תַּחְתֶּ֔יךָ וּלְאֻמִּ֖ים תַּ֥חַת נַפְשֶֽׁךָ׃
5 ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.
אַל־תִּירָ֖א כִּ֣י אִתְּךָ־אָ֑נִי מִמִּזְרָח֙ אָבִ֣יא זַרְעֶ֔ךָ וּמִֽמַּעֲרָ֖ב אֲקַבְּצֶֽךָּ׃
6 ‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,
אֹמַ֤ר לַצָּפֹון֙ תֵּ֔נִי וּלְתֵימָ֖ן אַל־תִּכְלָ֑אִי הָבִ֤יאִי בָנַי֙ מֵרָחֹ֔וק וּבְנֹותַ֖י מִקְצֵ֥ה הָאָֽרֶץ׃
7 ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.
כֹּ֚ל הַנִּקְרָ֣א בִשְׁמִ֔י וְלִכְבֹודִ֖י בְּרָאתִ֑יו יְצַרְתִּ֖יו אַף־עֲשִׂיתִֽיו׃
8 ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.
הֹוצִ֥יא עַם־עִוֵּ֖ר וְעֵינַ֣יִם יֵ֑שׁ וְחֵרְשִׁ֖ים וְאָזְנַ֥יִם לָֽמֹו׃
9 ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ.
כָּֽל־הַגֹּויִ֞ם נִקְבְּצ֣וּ יַחְדָּ֗ו וְיֵאָֽסְפוּ֙ לְאֻמִּ֔ים מִ֤י בָהֶם֙ יַגִּ֣יד זֹ֔את וְרִֽאשֹׁנֹ֖ות יַשְׁמִיעֻ֑נוּ יִתְּנ֤וּ עֵֽדֵיהֶם֙ וְיִצְדָּ֔קוּ וְיִשְׁמְע֖וּ וְיֹאמְר֥וּ אֱמֶֽת׃
10 ೧೦ ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.
אַתֶּ֤ם עֵדַי֙ נְאֻם־יְהוָ֔ה וְעַבְדִּ֖י אֲשֶׁ֣ר בָּחָ֑רְתִּי לְמַ֣עַן תֵּ֠דְעוּ וְתַאֲמִ֨ינוּ לִ֤י וְתָבִ֙ינוּ֙ כִּֽי־אֲנִ֣י ה֔וּא לְפָנַי֙ לֹא־נֹ֣וצַר אֵ֔ל וְאַחֲרַ֖י לֹ֥א יִהְיֶֽה׃ ס
11 ೧೧ ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
אָנֹכִ֥י אָנֹכִ֖י יְהוָ֑ה וְאֵ֥ין מִבַּלְעָדַ֖י מֹושִֽׁיעַ׃
12 ೧೨ ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ; ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು.
אָנֹכִ֞י הִגַּ֤דְתִּי וְהֹושַׁ֙עְתִּי֙ וְהִשְׁמַ֔עְתִּי וְאֵ֥ין בָּכֶ֖ם זָ֑ר וְאַתֶּ֥ם עֵדַ֛י נְאֻם־יְהוָ֖ה וַֽאֲנִי־אֵֽל׃
13 ೧೩ ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು.
גַּם־מִיֹּום֙ אֲנִ֣י ה֔וּא וְאֵ֥ין מִיָּדִ֖י מַצִּ֑יל אֶפְעַ֖ל וּמִ֥י יְשִׁיבֶֽנָּה׃ ס
14 ೧೪ ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.
כֹּֽה־אָמַ֧ר יְהוָ֛ה גֹּאַלְכֶ֖ם קְדֹ֣ושׁ יִשְׂרָאֵ֑ל לְמַעַנְכֶ֞ם שִׁלַּ֣חְתִּי בָבֶ֗לָה וְהֹורַדְתִּ֤י בָֽרִיחִים֙ כֻּלָּ֔ם וְכַשְׂדִּ֖ים בָּאֳנִיֹּ֥ות רִנָּתָֽם׃
15 ೧೫ ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ.
אֲנִ֥י יְהוָ֖ה קְדֹֽושְׁכֶ֑ם בֹּורֵ֥א יִשְׂרָאֵ֖ל מַלְכְּכֶֽם׃ ס
16 ೧೬ ಯಾರು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,
כֹּ֚ה אָמַ֣ר יְהוָ֔ה הַנֹּותֵ֥ן בַּיָּ֖ם דָּ֑רֶךְ וּבְמַ֥יִם עַזִּ֖ים נְתִיבָֽה׃
17 ೧೭ ಯಾರು ರಥಗಳನ್ನು, ಕುದರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಬಿದ್ದು ಏಳಲಾರದಂತೆಯೂ, ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದವನು” ಯೆಹೋವನು ಹೀಗೆನ್ನುತ್ತಾನೆ,
הַמֹּוצִ֥יא רֶֽכֶב־וָס֖וּס חַ֣יִל וְעִזּ֑וּז יַחְדָּ֤ו יִשְׁכְּבוּ֙ בַּל־יָק֔וּמוּ דָּעֲכ֖וּ כַּפִּשְׁתָּ֥ה כָבֽוּ׃
18 ೧೮ ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ.
אַֽל־תִּזְכְּר֖וּ רִֽאשֹׁנֹ֑ות וְקַדְמֹנִיֹּ֖ות אַל־תִּתְבֹּנָֽנוּ׃
19 ೧೯ ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.
הִנְנִ֨י עֹשֶׂ֤ה חֲדָשָׁה֙ עַתָּ֣ה תִצְמָ֔ח הֲלֹ֖וא תֵֽדָע֑וּהָ אַ֣ף אָשִׂ֤ים בַּמִּדְבָּר֙ דֶּ֔רֶךְ בִּֽישִׁמֹ֖ון נְהָרֹֽות׃
20 ೨೦ ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು. ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,
תְּכַבְּדֵ֙נִי֙ חַיַּ֣ת הַשָּׂדֶ֔ה תַּנִּ֖ים וּבְנֹ֣ות יַֽעֲנָ֑ה כִּֽי־נָתַ֨תִּי בַמִּדְבָּ֜ר מַ֗יִם נְהָרֹות֙ בִּֽישִׁימֹ֔ן לְהַשְׁקֹ֖ות עַמִּ֥י בְחִירִֽי׃
21 ೨೧ ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.
עַם־זוּ֙ יָצַ֣רְתִּי לִ֔י תְּהִלָּתִ֖י יְסַפֵּֽרוּ׃ ס
22 ೨೨ “ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದಿ.
וְלֹא־אֹתִ֥י קָרָ֖אתָ יַֽעֲקֹ֑ב כִּֽי־יָגַ֥עְתָּ בִּ֖י יִשְׂרָאֵֽל׃
23 ೨೩ ನೀನು ನನಗೆ ಹೋಮಕ್ಕಾಗಿ ಕುರಿ ಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ. ಕಾಣಿಕೆಗಳನ್ನು ಕೇಳಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.
לֹֽא־הֵבֵ֤יאתָ לִּי֙ שֵׂ֣ה עֹלֹתֶ֔יךָ וּזְבָחֶ֖יךָ לֹ֣א כִבַּדְתָּ֑נִי לֹ֤א הֶעֱבַדְתִּ֙יךָ֙ בְּמִנְחָ֔ה וְלֹ֥א הֹוגַעְתִּ֖יךָ בִּלְבֹונָֽה׃
24 ೨೪ ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.
לֹא־קָנִ֨יתָ לִּ֤י בַכֶּ֙סֶף֙ קָנֶ֔ה וְחֵ֥לֶב זְבָחֶ֖יךָ לֹ֣א הִרְוִיתָ֑נִי אַ֗ךְ הֶעֱבַדְתַּ֙נִי֙ בְּחַטֹּאותֶ֔יךָ הֹוגַעְתַּ֖נִי בַּעֲוֹנֹתֶֽיךָ׃ ס
25 ೨೫ ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.
אָנֹכִ֨י אָנֹכִ֥י ה֛וּא מֹחֶ֥ה פְשָׁעֶ֖יךָ לְמַעֲנִ֑י וְחַטֹּאתֶ֖יךָ לֹ֥א אֶזְכֹּֽר׃
26 ೨೬ ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.
הַזְכִּירֵ֕נִי נִשָּׁפְטָ֖ה יָ֑חַד סַפֵּ֥ר אַתָּ֖ה לְמַ֥עַן תִּצְדָּֽק׃
27 ೨೭ ನಿನ್ನ ಮೂಲಪಿತೃ ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ.
אָבִ֥יךָ הָרִאשֹׁ֖ון חָטָ֑א וּמְלִיצֶ֖יךָ פָּ֥שְׁעוּ בִֽי׃
28 ೨೮ ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.”
וַאֲחַלֵּ֖ל שָׂ֣רֵי קֹ֑דֶשׁ וְאֶתְּנָ֤ה לַחֵ֙רֶם֙ יַעֲקֹ֔ב וְיִשְׂרָאֵ֖ל לְגִדּוּפִֽים׃ ס

< ಯೆಶಾಯನು 43 >