< ಯೆಶಾಯನು 45 >
1 ೧ ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,
Yahvé dice a su ungido, a Ciro, cuya mano derecha he sostenido para someter a las naciones ante él y despojar a los reyes de sus armaduras, que abra las puertas ante él, y que las puertas no se cierren:
2 ೨ “ನಾನು ನಿನ್ನ ಮುಂದೆ ಹೋಗಿ, ದಿಣ್ಣೆಗಳನ್ನು ಸಮಮಾಡುವೆನು. ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.
“Iré delante de ti y alisar las asperezas. Romperé las puertas de bronce en pedazos y cortar las barras de hierro.
3 ೩ ನಿನ್ನ ಹೆಸರು ಹಿಡಿದು ಕರೆಯುವ ಯೆಹೋವನು ನಾನೇ. ಇಸ್ರಾಯೇಲರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಯನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.
Te daré los tesoros de la oscuridad y las riquezas ocultas de los lugares secretos, para que sepas que soy yo, Yahvé, quien te llama por tu nombre, el Dios de Israel.
4 ೪ ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಬಿರುದನ್ನು ದಯಪಾಲಿಸಿದ್ದೇನೆ.
Por el bien de Jacob, mi siervo, e Israel mis elegidos, Te he llamado por tu nombre. Te he dado un título, aunque no me hayas conocido.
5 ೫ ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.
Yo soy Yahvé, y no hay nadie más. Además de mí, no hay ningún Dios. Te fortaleceré, aunque no me hayas conocido,
6 ೬ ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ, ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು.
para que sepan desde la salida del sol, y desde el oeste, que no hay nadie más que yo. Yo soy Yahvé, y no hay nadie más.
7 ೭ ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.
Formo la luz y crear oscuridad. Hago las paces y crear calamidades. Yo soy Yahvé, que hace todas estas cosas.
8 ೮ ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.
Llueve, cielos, desde arriba, y que los cielos derramen justicia. Que la tierra se abra, para que produzca la salvación, y que haga brotar la justicia con ella. Yo, Yahvé, lo he creado.
9 ೯ ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?
Ay de aquel que lucha con su Hacedor — ¡una olla de barro entre las ollas de barro de la tierra! ¿Preguntará el barro al que lo moldea: “Qué estás haciendo”? o su trabajo, ‘No tiene manos’?
10 ೧೦ ‘ನೀನು ಹುಟ್ಟಿಸುವುದೇನು’ ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ‘ನೀನು ಹೆರುವುದೇನು’ ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ!
Ay del que diga a un padre: “¿De qué te has convertido en padre?”. o a una madre: “¿Qué has dado a luz?”
11 ೧೧ ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.
Yahvé, el Santo de Israel y su Hacedor dice: “Me preguntas sobre las cosas que están por venir, sobre mis hijos, ¡y tú me mandas sobre la obra de mis manos!
12 ೧೨ ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ. ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.
Yo hice la tierra y creé al hombre sobre ella. Yo, hasta mis manos, he extendido los cielos. He comandado todo su ejército.
13 ೧೩ ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
Yo lo he resucitado en la justicia, y enderezaré todos sus caminos. Él construirá mi ciudad, y dejará libres a mis exiliados, no por precio ni por recompensa”, dice Yahvé de los Ejércitos.
14 ೧೪ ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”
Yahvé dice: “El trabajo de Egipto, y las mercancías de Etiopía, y los sabeos, hombres de talla, se acercarán a ti, y serán tuyos. Irán a por ti. Vendrán encadenados. Se inclinarán ante ti. Te harán una súplica: Ciertamente, Dios está en ti, y no hay nadie más. No hay otro dios.
15 ೧೫ ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.
Ciertamente eres un Dios que se ha escondido, Dios de Israel, el Salvador”.
16 ೧೬ ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.
Se sentirán decepcionados, sí, confundidos, todos ellos. Los que son fabricantes de ídolos irán juntos a la confusión.
17 ೧೭ ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.
Israel será salvado por Yahvé con una salvación eterna. No serás defraudado ni confundido por los siglos de los siglos.
18 ೧೮ ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.
Porque Yahvé, que creó los cielos, el Dios que formó la tierra y la hizo, que lo estableció y no lo creó un desperdicio, que lo formó para ser habitado dice: “Yo soy Yahvé. No hay otra.
19 ೧೯ ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.
No he hablado en secreto, en un lugar de la tierra de las tinieblas. No he dicho a la descendencia de Jacob: “Buscadme en vano”. Yo, Yahvé, hablo de justicia. Declaro cosas que son correctas.
20 ೨೦ ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.
“Reúnanse y vengan. Acercaos juntos, los que habéis escapado de las naciones. No tienen conocimiento los que llevan la madera de su imagen grabada, y rezar a un dios que no puede salvar.
21 ೨೧ ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.
Decláralo y preséntalo. Sí, que se asesoren juntos. ¿Quién lo ha demostrado desde la antigüedad? ¿Quién lo ha declarado de antiguo? ¿No es así, Yahvé? No hay otro Dios más que yo, un Dios justo y un Salvador. No hay nadie más que yo.
22 ೨೨ ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
“Miradme y salvaos, todos los confines de la tierra; porque yo soy Dios y no hay otro.
23 ೨೩ ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.
He jurado por mí mismo. La palabra ha salido de mi boca en justicia, y no será revocada, que ante mí se doblará toda rodilla, toda lengua prestará juramento.
24 ೨೪ ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.
Dirán de mí, ‘Sólo en Yahvé hay justicia y fuerza’”. Incluso a él vendrán los hombres. Todos los que se ensañaron con él se sentirán decepcionados.
25 ೨೫ ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.
Toda la descendencia de Israel será justificada en Yahvé, y se alegrará.