< ಯೆಶಾಯನು 48 >
1 ೧ ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.
ASCOLTATE questo, o casa di Giacobbe, che siete nominati del nome d'Israele, e siete usciti delle acque di Giuda; che giurate per lo Nome del Signore, e mentovate l'Iddio d'Israele; [benchè] non in verità, nè in giustizia.
2 ೨ ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.
Perciocchè essi si nominano della città santa, si appoggiano sopra l'Iddio d'Israele, il cui Nome è: Il Signor degli eserciti.
3 ೩ ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
Io annunziai già ab antico le cose di prima, e quelle uscirono della mia bocca, ed io le feci intendere; [poi] di subito [le] ho fatte, e sono avvenute.
4 ೪ ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.
Perciocchè io so che tu [sei] indurato, e che il tuo collo è un nerbo di ferro, e che la tua fronte [è] di rame.
5 ೫ ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.
Perciò ti annunziai [quelle cose] già anticamente; io te [le] feci intendere, avanti che fossero avvenute; che talora tu non dicessi: Il mio idolo le ha fatte, e la mia scultura, e la mia statua di getto le ha ordinate.
6 ೬ ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.
Tu hai udite tutte queste cose, considerale; e non le annunziereste voi? da ora io ti ho fatte intendere cose nuove, e riserbate, le quali tu non sapevi.
7 ೭ ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು, ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ.
Ora sono state create, e non ab antico, nè avanti [questo] giorno; e tu non [ne] avevi udito nulla; che talora tu non dica: Ecco, io le sapeva.
8 ೮ ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.
Tu non [le] hai nè udite, nè sapute; [ed] anche in alcun tempo non ti è stato aperto l'orecchio; perciocchè io sapeva che del tutto tu ti porteresti dislealmente, e che tu sei chiamato: Prevaricator fin dal ventre.
9 ೯ ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು, ನನ್ನ ಕೀರ್ತಿಗೆ ಕಳಂಕ ಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ಸಹಿಸಿಕೊಳ್ಳುವೆನು.
Per amor del mio Nome, io rallenterò la mia ira; e [per amor del]la mia lode, io mi ratterrò inverso te, per non distruggerti.
10 ೧೦ ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.
Ecco, io ti ho posto al cimento, ma non già come l'argento; io ti ho affinato nel fornello dell'afflizione.
11 ೧೧ ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು? ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.
Per amor di me stesso, per amor di me stesso, io farò [questo]; perciocchè, come sarebbe profanato [il mio Nome] ed io non darò la mia gloria ad alcun altro.
12 ೧೨ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ
Ascoltami, o Giacobbe, e [tu], o Israele, che sei chiamato da me. Io [son] desso; io [sono] il primo; io [sono] anche l'ultimo.
13 ೧೩ ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.
La mia mano ha eziandio fondata la terra, e la mia destra ha misurati i cieli col palmo; quando io li chiamo, tutti quanti compariscono.
14 ೧೪ ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.
Voi tutti, adunatevi, ed ascoltate: Chi, d'infra coloro, ha annunziate queste cose? Il Signore ha amato colui; egli metterà ad esecuzione la sua volontà contro a Babilonia, e il suo braccio sopra i Caldei.
15 ೧೫ ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.
Io, io ho parlato, ed anche l'ho chiamato; io l'ho fatto venire, e le sue imprese son prosperate.
16 ೧೬ ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.
Accostatevi a me, [ed] ascoltate questo; dal principio io non ho parlato di nascosto; dal tempo che la cosa è stata io vi [sono stato]; ed ora il Signore Iddio, e il suo Spirito, mi ha mandato.
17 ೧೭ ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.
Così ha detto il Signore, il tuo Redentore, il Santo d'Israele: Io [sono] il Signore Iddio tuo, che ti ammaestro per util tuo, che ti guido per la via, [per la quale] tu devi camminare.
18 ೧೮ ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.
Oh avessi tu pure atteso a' miei comandamenti! la tua pace sarebbe stata come un fiume, e la tua giustizia come le onde del mare.
19 ೧೯ ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.
E la tua progenie sarebbe stata come la rena, e quelli che sarebbero usciti delle tue interiora come la ghiaia di quello; il suo nome non sarebbe stato sterminato, nè spento dal mio cospetto.
20 ೨೦ ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.
Uscite di Babilonia, fuggitevene dai Caldei, con voce di giubilo; annunziate, bandite questo; datene fuori voce fino alle estremità della terra; dite: Il Signore ha riscattato Giacobbe, suo servitore.
21 ೨೧ ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.
Ed essi non hanno avuto sete, [mentre] egli li ha condotti per li deserti; egli ha fatta loro stillar dell'acqua dalla roccia; egli ha fesso il sasso, e ne è colata dell'acqua.
22 ೨೨ “ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.
Non [vi è] alcuna pace per gli empi, ha detto il Signore.