< ಯೆಶಾಯನು 5 >
1 ೧ ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.
ᾄσω δὴ τῷ ἠγαπημένῳ ᾆσμα τοῦ ἀγαπητοῦ τῷ ἀμπελῶνί μου ἀμπελὼν ἐγενήθη τῷ ἠγαπημένῳ ἐν κέρατι ἐν τόπῳ πίονι
2 ೨ ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.
καὶ φραγμὸν περιέθηκα καὶ ἐχαράκωσα καὶ ἐφύτευσα ἄμπελον σωρηχ καὶ ᾠκοδόμησα πύργον ἐν μέσῳ αὐτοῦ καὶ προλήνιον ὤρυξα ἐν αὐτῷ καὶ ἔμεινα τοῦ ποιῆσαι σταφυλήν ἐποίησεν δὲ ἀκάνθας
3 ೩ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ.
καὶ νῦν ἄνθρωπος τοῦ Ιουδα καὶ οἱ ἐνοικοῦντες ἐν Ιερουσαλημ κρίνατε ἐν ἐμοὶ καὶ ἀνὰ μέσον τοῦ ἀμπελῶνός μου
4 ೪ ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?
τί ποιήσω ἔτι τῷ ἀμπελῶνί μου καὶ οὐκ ἐποίησα αὐτῷ διότι ἔμεινα τοῦ ποιῆσαι σταφυλήν ἐποίησεν δὲ ἀκάνθας
5 ೫ ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.
νῦν δὲ ἀναγγελῶ ὑμῖν τί ποιήσω τῷ ἀμπελῶνί μου ἀφελῶ τὸν φραγμὸν αὐτοῦ καὶ ἔσται εἰς διαρπαγήν καὶ καθελῶ τὸν τοῖχον αὐτοῦ καὶ ἔσται εἰς καταπάτημα
6 ೬ ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.
καὶ ἀνήσω τὸν ἀμπελῶνά μου καὶ οὐ μὴ τμηθῇ οὐδὲ μὴ σκαφῇ καὶ ἀναβήσεται εἰς αὐτὸν ὡς εἰς χέρσον ἄκανθα καὶ ταῖς νεφέλαις ἐντελοῦμαι τοῦ μὴ βρέξαι εἰς αὐτὸν ὑετόν
7 ೭ ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.
ὁ γὰρ ἀμπελὼν κυρίου σαβαωθ οἶκος τοῦ Ισραηλ ἐστίν καὶ ἄνθρωπος τοῦ Ιουδα νεόφυτον ἠγαπημένον ἔμεινα τοῦ ποιῆσαι κρίσιν ἐποίησεν δὲ ἀνομίαν καὶ οὐ δικαιοσύνην ἀλλὰ κραυγήν
8 ೮ ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು, ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!
οὐαὶ οἱ συνάπτοντες οἰκίαν πρὸς οἰκίαν καὶ ἀγρὸν πρὸς ἀγρὸν ἐγγίζοντες ἵνα τοῦ πλησίον ἀφέλωνταί τι μὴ οἰκήσετε μόνοι ἐπὶ τῆς γῆς
9 ೯ ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.
ἠκούσθη γὰρ εἰς τὰ ὦτα κυρίου σαβαωθ ταῦτα ἐὰν γὰρ γένωνται οἰκίαι πολλαί εἰς ἔρημον ἔσονται μεγάλαι καὶ καλαί καὶ οὐκ ἔσονται οἱ ἐνοικοῦντες ἐν αὐταῖς
10 ೧೦ ಏಕೆಂದರೆ ಹತ್ತು ಎಕರೆ ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ ಬೀಜದಿಂದ ಕಡಿಮೆ ದವಸವು ಬರುವುದು.
οὗ γὰρ ἐργῶνται δέκα ζεύγη βοῶν ποιήσει κεράμιον ἕν καὶ ὁ σπείρων ἀρτάβας ἓξ ποιήσει μέτρα τρία
11 ೧೧ ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!
οὐαὶ οἱ ἐγειρόμενοι τὸ πρωὶ καὶ τὸ σικερα διώκοντες οἱ μένοντες τὸ ὀψέ ὁ γὰρ οἶνος αὐτοὺς συγκαύσει
12 ೧೨ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.
μετὰ γὰρ κιθάρας καὶ ψαλτηρίου καὶ τυμπάνων καὶ αὐλῶν τὸν οἶνον πίνουσιν τὰ δὲ ἔργα κυρίου οὐκ ἐμβλέπουσιν καὶ τὰ ἔργα τῶν χειρῶν αὐτοῦ οὐ κατανοοῦσιν
13 ೧೩ ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.
τοίνυν αἰχμάλωτος ὁ λαός μου ἐγενήθη διὰ τὸ μὴ εἰδέναι αὐτοὺς τὸν κύριον καὶ πλῆθος ἐγενήθη νεκρῶν διὰ λιμὸν καὶ δίψαν ὕδατος
14 ೧೪ ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು. (Sheol )
καὶ ἐπλάτυνεν ὁ ᾅδης τὴν ψυχὴν αὐτοῦ καὶ διήνοιξεν τὸ στόμα αὐτοῦ τοῦ μὴ διαλιπεῖν καὶ καταβήσονται οἱ ἔνδοξοι καὶ οἱ μεγάλοι καὶ οἱ πλούσιοι καὶ οἱ λοιμοὶ αὐτῆς (Sheol )
15 ೧೫ ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
καὶ ταπεινωθήσεται ἄνθρωπος καὶ ἀτιμασθήσεται ἀνήρ καὶ οἱ ὀφθαλμοὶ οἱ μετέωροι ταπεινωθήσονται
16 ೧೬ ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.
καὶ ὑψωθήσεται κύριος σαβαωθ ἐν κρίματι καὶ ὁ θεὸς ὁ ἅγιος δοξασθήσεται ἐν δικαιοσύνῃ
17 ೧೭ ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.
καὶ βοσκηθήσονται οἱ διηρπασμένοι ὡς ταῦροι καὶ τὰς ἐρήμους τῶν ἀπειλημμένων ἄρνες φάγονται
18 ೧೮ ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,
οὐαὶ οἱ ἐπισπώμενοι τὰς ἁμαρτίας ὡς σχοινίῳ μακρῷ καὶ ὡς ζυγοῦ ἱμάντι δαμάλεως τὰς ἀνομίας
19 ೧೯ ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!
οἱ λέγοντες τὸ τάχος ἐγγισάτω ἃ ποιήσει ἵνα ἴδωμεν καὶ ἐλθάτω ἡ βουλὴ τοῦ ἁγίου Ισραηλ ἵνα γνῶμεν
20 ೨೦ ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!
οὐαὶ οἱ λέγοντες τὸ πονηρὸν καλὸν καὶ τὸ καλὸν πονηρόν οἱ τιθέντες τὸ σκότος φῶς καὶ τὸ φῶς σκότος οἱ τιθέντες τὸ πικρὸν γλυκὺ καὶ τὸ γλυκὺ πικρόν
21 ೨೧ ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!
οὐαὶ οἱ συνετοὶ ἐν ἑαυτοῖς καὶ ἐνώπιον ἑαυτῶν ἐπιστήμονες
22 ೨೨ ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;
οὐαὶ οἱ ἰσχύοντες ὑμῶν οἱ τὸν οἶνον πίνοντες καὶ οἱ δυνάσται οἱ κεραννύντες τὸ σικερα
23 ೨೩ ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!
οἱ δικαιοῦντες τὸν ἀσεβῆ ἕνεκεν δώρων καὶ τὸ δίκαιον τοῦ δικαίου αἴροντες
24 ೨೪ ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
διὰ τοῦτο ὃν τρόπον καυθήσεται καλάμη ὑπὸ ἄνθρακος πυρὸς καὶ συγκαυθήσεται ὑπὸ φλογὸς ἀνειμένης ἡ ῥίζα αὐτῶν ὡς χνοῦς ἔσται καὶ τὸ ἄνθος αὐτῶν ὡς κονιορτὸς ἀναβήσεται οὐ γὰρ ἠθέλησαν τὸν νόμον κυρίου σαβαωθ ἀλλὰ τὸ λόγιον τοῦ ἁγίου Ισραηλ παρώξυναν
25 ೨೫ ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.
καὶ ἐθυμώθη ὀργῇ κύριος σαβαωθ ἐπὶ τὸν λαὸν αὐτοῦ καὶ ἐπέβαλεν τὴν χεῖρα αὐτοῦ ἐπ’ αὐτοὺς καὶ ἐπάταξεν αὐτούς καὶ παρωξύνθη τὰ ὄρη καὶ ἐγενήθη τὰ θνησιμαῖα αὐτῶν ὡς κοπρία ἐν μέσῳ ὁδοῦ καὶ ἐν πᾶσι τούτοις οὐκ ἀπεστράφη ὁ θυμός ἀλλ’ ἔτι ἡ χεὶρ ὑψηλή
26 ೨೬ ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.
τοιγαροῦν ἀρεῖ σύσσημον ἐν τοῖς ἔθνεσιν τοῖς μακρὰν καὶ συριεῖ αὐτοῖς ἀπ’ ἄκρου τῆς γῆς καὶ ἰδοὺ ταχὺ κούφως ἔρχονται
27 ೨೭ ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ. ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ.
οὐ πεινάσουσιν οὐδὲ κοπιάσουσιν οὐδὲ νυστάξουσιν οὐδὲ κοιμηθήσονται οὐδὲ λύσουσιν τὰς ζώνας αὐτῶν ἀπὸ τῆς ὀσφύος αὐτῶν οὐδὲ μὴ ῥαγῶσιν οἱ ἱμάντες τῶν ὑποδημάτων αὐτῶν
28 ೨೮ ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ. ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.
ὧν τὰ βέλη ὀξεῖά ἐστιν καὶ τὰ τόξα αὐτῶν ἐντεταμένα οἱ πόδες τῶν ἵππων αὐτῶν ὡς στερεὰ πέτρα ἐλογίσθησαν οἱ τροχοὶ τῶν ἁρμάτων αὐτῶν ὡς καταιγίς
29 ೨೯ ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ. ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ಷಿಸುವವರು ಯಾರೂ ಇಲ್ಲ.
ὁρμῶσιν ὡς λέοντες καὶ παρέστηκαν ὡς σκύμνος λέοντος καὶ ἐπιλήμψεται καὶ βοήσει ὡς θηρίου καὶ ἐκβαλεῖ καὶ οὐκ ἔσται ὁ ῥυόμενος αὐτούς
30 ೩೦ ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.
καὶ βοήσει δῑ αὐτοὺς ἐν τῇ ἡμέρᾳ ἐκείνῃ ὡς φωνὴ θαλάσσης κυμαινούσης καὶ ἐμβλέψονται εἰς τὴν γῆν καὶ ἰδοὺ σκότος σκληρὸν ἐν τῇ ἀπορίᾳ αὐτῶν