< ಯೆಶಾಯನು 50 >

1 ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.
主はこう言われる、「わたしがあなたがたの母を去らせたその離縁状は、どこにあるか。わたしはどの債主にあなたがたを売りわたしたか。見よ、あなたがたは、その不義のために売られ、あなたがたの母は、あなたがたのとがのために出されたのだ。
2 ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.
わたしが来たとき、なぜひとりもいなかったか。わたしが呼んだとき、なぜひとりも答える者がなかったか。わたしの手が短くて、あがなうことができないのか。わたしは救う力を持たないのか。見よ、わたしが、しかると海はかれ、川は荒野となり、その中の魚は水がないために、かわき死んで悪臭を放つ。
3 ನಾನು ಆಕಾಶಕ್ಕೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.”
わたしは黒い衣を天に着せ、荒布をもってそのおおいとする」。
4 ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.
主なる神は教をうけた者の舌をわたしに与えて、疲れた者を言葉をもって助けることを知らせ、また朝ごとにさまし、わたしの耳をさまして、教をうけた者のように聞かせられる。
5 ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.
主なる神はわたしの耳を開かれた。わたしは、そむくことをせず、退くことをしなかった。
6 ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.
わたしを打つ者に、わたしの背をまかせ、わたしのひげを抜く者に、わたしのほおをまかせ、恥とつばきとを避けるために、顔をかくさなかった。
7 ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.
しかし主なる神はわたしを助けられる。それゆえ、わたしは恥じることがなかった。それゆえ、わたしは顔を火打石のようにした。わたしは決してはずかしめられないことを知る。
8 ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ.
わたしを義とする者が近くおられる。だれがわたしと争うだろうか、われわれは共に立とう。わたしのあだはだれか、わたしの所へ近くこさせよ。
9 ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು.
見よ、主なる神はわたしを助けられる。だれがわたしを罪に定めるだろうか。見よ、彼らは皆衣のようにふるび、しみのために食いつくされる。
10 ೧೦ ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.
あなたがたのうち主を恐れ、そのしもべの声に聞き従い、暗い中を歩いて光を得なくても、なお主の名を頼み、おのれの神にたよる者はだれか。
11 ೧೧ ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.”
見よ、火を燃やし、たいまつをともす者よ、皆その火の炎の中を歩め、またその燃やした、たいまつの中を歩め。あなたがたは、これをわたしの手から受けて、苦しみのうちに伏し倒れる。

< ಯೆಶಾಯನು 50 >