< ಯೆಶಾಯನು 51 >
1 ೧ ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.
Listen to me, you who follow what is just and who seek the Lord. Pay attention to the rock from which you have been hewn, and to the walls of the pit from which you have been dug.
2 ೨ ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.
Pay attention to Abraham, your father, and to Sarah, who bore you. For I called him alone, and I blessed him, and I multiplied him.
3 ೩ ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.
Therefore, the Lord will console Zion, and he will console all its ruins. And he will turn her desert into a place of delights, and her wilderness into a garden of the Lord. Gladness and rejoicing will be found in her, thanksgiving and a voice of praise.
4 ೪ “ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.
Pay attention to me, my people, and listen to me, my tribes. For a law will go forth from me, and my judgment will rest as a light for the nations.
5 ೫ ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.
My just one is near. My savior has gone forth. And my arms will judge the people. The islands will hope in me, and they will patiently wait for my arm.
6 ೬ ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.
Lift up your eyes to heaven, and look down to the earth below. For the heavens will vanish like smoke, and the earth will be worn away like a garment, and its inhabitants will pass away in like manner. But my salvation will be forever, and my justice will not fail.
7 ೭ ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.
Listen to me, you who know what is just, my people who have my law in their heart. Do not be afraid of disgrace among men, and do not dread their blasphemies.
8 ೮ ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”
For the worm will consume them like a garment, and the moth will devour them like wool. But my salvation will be forever, and my justice will be from generation to generation.
9 ೯ ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?
Rise up, Rise up! Clothe yourself in strength, O arm of the Lord! Rise up as in the days of antiquity, as in generations long past. Have you not struck the arrogant one and wounded the dragon?
10 ೧೦ ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ, ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?
Have not you dried up the sea, the waters of the great abyss, and turned the depths of the sea into a road, so that the delivered could cross over it?
11 ೧೧ ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.
And now, those who have been redeemed by the Lord will return. And they will arrive in Zion, praising. And everlasting rejoicing will be upon their heads. They will take hold of gladness and rejoicing. Anguish and mourning will flee away.
12 ೧೨ ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
It is I, I myself, who will console you. Who are you that you would be afraid of a mortal man, and of a son of man, who will wither like the grass?
13 ೧೩ ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?
And have you forgotten the Lord, your Maker, who extended the heavens, and who founded the earth? And have you been in constant dread, all day long, at the face of his fury, of the one who afflicted you and who had prepared to destroy you? Where is the fury of the oppressor now?
14 ೧೪ ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ.
Advancing quickly, he will arrive to be revealed, and he will not kill unto utter destruction, nor will his bread fail.
15 ೧೫ ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ, ಸೇನಾಧೀಶ್ವರನಾದ ಯೆಹೋವನೆಂಬುದೇ ನನ್ನ ನಾಮಧೇಯ.
But I am the Lord, your God, who stirs up the sea, and who makes the waves swell. The Lord of hosts is my name.
16 ೧೬ ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.
I have placed my words in your mouth, and I have protected you in the shadow of my hand, so that you might plant the heavens, and found the earth, and so that you might say to Zion, “You are my people.”
17 ೧೭ ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.
Lift up, Lift up! Arise, O Jerusalem! You drank, from the hand of the Lord, the cup of his wrath. You drank, even to the bottom of the cup of deep sleep. And you were given to drink, all the way to the dregs.
18 ೧೮ ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ. ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.
There is no one who can uphold her, out of all the sons whom she has conceived. And there is no one who would take her by the hand, out of all the sons whom she has raised.
19 ೧೯ ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ? ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ. ನಾನು ನಿನ್ನನ್ನು ಹೇಗೆ ಸಂತೈಸಲಿ?
There are two things which have happened to you. Who will be saddened over you? There is devastation and destruction, and famine and sword. Who will console you?
20 ೨೦ ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.
Your sons have been cast out. They have slept at the head of all the roads, and they have been ensnared like a gazelle. They have been filled by the indignation of the Lord, by the rebuke of your God.
21 ೨೧ ನೀನು ಹಿಂಸೆಗೊಳಗಾಗಿದ್ದಿ. ಕುಡಿದು ಅಮಲೇರಿದ್ದಿ. ಆದರೆ ದ್ರಾಕ್ಷಾರಸದಿಂದಲ್ಲ. ಆದುದರಿಂದ ಈಗ ಇದನ್ನು ಕೇಳು.
Therefore, listen to this, O poor little ones, and you who have been inebriated, but not by wine.
22 ೨೨ ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.
Thus says your Sovereign, the Lord, and your God, who will fight on behalf of his people: Behold, I have taken the cup of deep sleep from your hand. You shall no longer drink from the bottom of the cup of my indignation.
23 ೨೩ ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.”
And I will set it in the hand of those who have humiliated you, and who have said to your soul: “Bow down, so that we pass over.” And you placed your body on the ground, as a path for them to pass over.