< ಯೆಶಾಯನು 52 >
1 ೧ ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
Vuka, vuka, wembathe amandla akho, Ziyoni! Yembatha izembatho zakho ezinhle, Jerusalema, muzi ongcwele! Ngoba kakusayikungena kuwe futhi ongasokanga longcolileyo.
2 ೨ ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!
Zithintithe usuke othulini, sukuma, uhlale phansi, Jerusalema! Zikhululekuzibopho zentamo yakho, ndodakazi ethunjiweyo yeZiyoni!
3 ೩ ಯೆಹೋವನ ಈ ಮಾತನ್ನು ಕೇಳಿರಿ, “ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆಮಾಡುವೆನು.”
Ngoba itsho njalo iNkosi: Lathengiswa ngeze; njalo lizahlengwa ngaphandle kwemali.
4 ೪ ಕರ್ತನಾದ ಯೆಹೋವನು ಹೀಗೆಂದುಕೊಳ್ಳುತ್ತಾನೆ, “ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ ಅಲ್ಲಿ ಸೆರೆಯಾದರು. ಅಶ್ಶೂರ್ಯರು ಕಾರಣವಿಲ್ಲದೆ ಅವರನ್ನು ಬಾಧೆಪಡಿಸಿದರು.”
Ngoba itsho njalo iNkosi uJehova: Abantu bami behlela eGibhithe esikhathini sendulo ukuhlala njengabezizwe khona, njalo iAsiriya yabacindezela ngaphandle kwesizatho.
5 ೫ ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.
Khathesi-ke, ngilani lapha, itsho iNkosi, ukuthi abantu bami bathethwe ngeze? Labo abababusayo babenza baqhinqe isililo, itsho iNkosi, lebizo lami liqhubeka lihlanjazwa lonke usuku.
6 ೬ ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಅವರ ಸಂಗಡ ಮಾತನಾಡಿದವನು ನಾನೇ. ಹೌದು ನಾನೇ” ಎಂದು ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು.
Ngakho abantu bami bazalazi ibizo lami; ngakho ngalolosuku bazakwazi ukuthi yimi engikhulumayo; khangela, yimi.
7 ೭ ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.
Zinhle kangakanani phezu kwezintaba inyawo zalowo oletha izindaba ezinhle, omemezela ukuthula, oletha indaba ezinhle zokulunga, ozwakalisa usindiso, othi kuyo iZiyoni: UNkulunkulu wakho uyabusa.
8 ೮ ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.
Ilizwi labalindi bakho! Bazaphakamisa ilizwi, bahlabele kakhulu kanyekanye, ngoba bazabona ilihlo ngelihlo, lapho iNkosi izabuyisa iZiyoni.
9 ೯ ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.
Qhamukani ngentokozo, lihlabelele kanyekanye, lina manxiwa eJerusalema, ngoba iNkosi isibaduduzile abantu bayo, iyihlengile iJerusalema.
10 ೧೦ ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.
INkosi yembule ingalo yayo engcwele emehlweni azo zonke izizwe, njalo imikhawulo yonke yomhlaba izabona usindiso lukaNkulunkulu wethu.
11 ೧೧ ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!
Sukani, sukani, liphume lapha, lingathinti okungcolileyo, phumani phakathi kwayo, banini ngabahlambulukileyo, lina elithwala izitsha zeNkosi.
12 ೧೨ ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ. ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು. ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು.
Ngoba kaliyikuphuma ngokuphangisa, kumbe lihambe ngokubaleka, ngoba iNkosi izahamba phambi kwenu, loNkulunkulu kaIsrayeli uzakuba ngumvikeli wenu ngasemuva.
13 ೧೩ ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.
Khangela, inceku yami izakwenza ngenhlakanipho, iphakeme njalo iphakanyisiwe, iphakeme kakhulu.
14 ೧೪ ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ,
Njengoba abanengi babethithibele ngawe; ukukhangeleka kwayo kwakonakele kangaka, okwedlula loba nguwuphi, lesimo sayo okwedlula amadodana abantu.
15 ೧೫ ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.
Ngokunjalo izafafaza izizwe ezinengi; amakhosi azayivalela umlomo wawo; ngoba lokho abangakulandiselwanga bazakubona, lalokho abangakuzwanga bazakuqedisisa.