< ಯೆಶಾಯನು 53 >

1 ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?
מִ֥י הֶאֱמִ֖ין לִשְׁמֻעָתֵ֑נוּ וּזְר֥וֹעַ יְהוָ֖ה עַל־מִ֥י נִגְלָֽתָה׃
2 ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.
וַיַּ֨עַל כַּיּוֹנֵ֜ק לְפָנָ֗יו וְכַשֹּׁ֙רֶשׁ֙ מֵאֶ֣רֶץ צִיָּ֔ה לֹא־תֹ֥אַר ל֖וֹ וְלֹ֣א הָדָ֑ר וְנִרְאֵ֥הוּ וְלֹֽא־מַרְאֶ֖ה וְנֶחְמְדֵֽהוּ׃
3 ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
נִבְזֶה֙ וַחֲדַ֣ל אִישִׁ֔ים אִ֥ישׁ מַכְאֹב֖וֹת וִיד֣וּעַ חֹ֑לִי וּכְמַסְתֵּ֤ר פָּנִים֙ מִמֶּ֔נּוּ נִבְזֶ֖ה וְלֹ֥א חֲשַׁבְנֻֽהוּ׃
4 ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.
אָכֵ֤ן חֳלָיֵ֙נוּ֙ ה֣וּא נָשָׂ֔א וּמַכְאֹבֵ֖ינוּ סְבָלָ֑ם וַאֲנַ֣חְנוּ חֲשַׁבְנֻ֔הוּ נָג֛וּעַ מֻכֵּ֥ה אֱלֹהִ֖ים וּמְעֻנֶּֽה׃
5 ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
וְהוּא֙ מְחֹלָ֣ל מִפְּשָׁעֵ֔נוּ מְדֻכָּ֖א מֵעֲוֺנֹתֵ֑ינוּ מוּסַ֤ר שְׁלוֹמֵ֙נוּ֙ עָלָ֔יו וּבַחֲבֻרָת֖וֹ נִרְפָּא־לָֽנוּ׃
6 ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.
כֻּלָּ֙נוּ֙ כַּצֹּ֣אן תָּעִ֔ינוּ אִ֥ישׁ לְדַרְכּ֖וֹ פָּנִ֑ינוּ וַֽיהוָה֙ הִפְגִּ֣יעַ בּ֔וֹ אֵ֖ת עֲוֺ֥ן כֻּלָּֽנוּ׃
7 ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.
נִגַּ֨שׂ וְה֣וּא נַעֲנֶה֮ וְלֹ֣א יִפְתַּח־פִּיו֒ כַּשֶּׂה֙ לַטֶּ֣בַח יוּבָ֔ל וּכְרָחֵ֕ל לִפְנֵ֥י גֹזְזֶ֖יהָ נֶאֱלָ֑מָה וְלֹ֥א יִפְתַּ֖ח פִּֽיו׃
8 ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?
מֵעֹ֤צֶר וּמִמִּשְׁפָּט֙ לֻקָּ֔ח וְאֶת־דּוֹר֖וֹ מִ֣י יְשׂוֹחֵ֑חַ כִּ֤י נִגְזַר֙ מֵאֶ֣רֶץ חַיִּ֔ים מִפֶּ֥שַׁע עַמִּ֖י נֶ֥גַע לָֽמוֹ׃
9 ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.
וַיִּתֵּ֤ן אֶת־רְשָׁעִים֙ קִבְר֔וֹ וְאֶת־עָשִׁ֖יר בְּמֹתָ֑יו עַ֚ל לֹא־חָמָ֣ס עָשָׂ֔ה וְלֹ֥א מִרְמָ֖ה בְּפִֽיו׃
10 ೧೦ ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
וַיהוָ֞ה חָפֵ֤ץ דַּכְּאוֹ֙ הֶֽחֱלִ֔י אִם־תָּשִׂ֤ים אָשָׁם֙ נַפְשׁ֔וֹ יִרְאֶ֥ה זֶ֖רַע יַאֲרִ֣יךְ יָמִ֑ים וְחֵ֥פֶץ יְהוָ֖ה בְּיָד֥וֹ יִצְלָֽח׃
11 ೧೧ ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
מֵעֲמַ֤ל נַפְשׁוֹ֙ יִרְאֶ֣ה יִשְׂבָּ֔ע בְּדַעְתּ֗וֹ יַצְדִּ֥יק צַדִּ֛יק עַבְדִּ֖י לָֽרַבִּ֑ים וַעֲוֺנֹתָ֖ם ה֥וּא יִסְבֹּֽל׃
12 ೧೨ ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.
לָכֵ֞ן אֲחַלֶּק־ל֣וֹ בָרַבִּ֗ים וְאֶת־עֲצוּמִים֮ יְחַלֵּ֣ק שָׁלָל֒ תַּ֗חַת אֲשֶׁ֨ר הֶעֱרָ֤ה לַמָּ֙וֶת֙ נַפְשׁ֔וֹ וְאֶת־פֹּשְׁעִ֖ים נִמְנָ֑ה וְהוּא֙ חֵטְא־רַבִּ֣ים נָשָׂ֔א וְלַפֹּשְׁעִ֖ים יַפְגִּֽיעַ׃ ס

< ಯೆಶಾಯನು 53 >