< ಯೆಶಾಯನು 53 >
1 ೧ ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?
Któż uwierzył kazaniu naszemu, a ramię Pańskie komu objawione jest?
2 ೨ ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.
Bo wyrósł jako latorostka przed nim, a jako korzeń z ziemi suchej, nie mając kształtu ani piękności; i widzieliśmy go; ale nic nie było widzieć, czemubyśmy go żądać mieli.
3 ೩ ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
Najwzgardzeńszy był, i najpodlejszy z ludzi, mąż boleści, a świadomy niemocy, i jako zakrywający twarz swoję; najwzgardzeńszy mówię, skądeśmy go za nic nie mieli.
4 ೪ ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.
Zaiste on niemocy nasze wziął na się, a boleści nasze własne nosił; a myśmy mniemali, że jest zraniony, ubity od Boga i utrapiony.
5 ೫ ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
Lecz on zraniony jest dla występków naszych, starty jest dla nieprawości naszych; kaźń pokoju naszego jest na nim, a sinością jego jesteśmy uzdrowieni.
6 ೬ ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.
Wszyscyśmy jako owce zbłądzili, każdy na drogę swą obróciliśmy się, a Pan włożył nań nieprawość wszystkich nas.
7 ೭ ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.
Uciśniony jest i utrapiony, a nie otworzył ust swoich; jako baranek na zabicie wiedziony był, i jako owca przed tymi, którzy ją strzygą, oniemiał, i nie otworzył ust swoich.
8 ೮ ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?
Z więzienia i z sądu wyjęty jest; przetoż rodzaj jego któż wypowie? Albowiem wycięty jest z ziemi żyjących, a zraniony dla przestępstwa ludu mojego;
9 ೯ ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.
Który to lud podał niezbożnym grób jego, a bogatemu śmierć jego, choć jednak nieprawości nie uczynił, ani zdrada znaleziona jest w ustach jego.
10 ೧೦ ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
Takci się Panu upodobało zetrzeć go, i niemocą utrapić, aby położywszy ofiarą za grzech duszę swą, ujrzał nasienie swoje, przedłużył dni swoich; a to, co się podoba Panu, przez rękę jego aby się szczęśliwie wykonało.
11 ೧೧ ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
Z pracy duszy swej ujrzy owoc, którym nasycon będzie. Znajomością swoją wielu usprawiedliwi sprawiedliwy sługa mój; bo nieprawości ich on sam poniesie.
12 ೧೨ ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.
Przetoż mu dam dział dla wielu, aby się dzielił korzyścią z mocarzami, ponieważ wylał na śmierć duszę swoję, a z przestępcami policzon będąc, on sam grzech wielu odniósł, i za przestępców się modlił.