< ಯೆಶಾಯನು 56 >
1 ೧ ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ; ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು.
Ovako govori Jahve: “Držite se prava i činite pravdu, jer će uskoro doći moj spas i objaviti se moja pravednost.”
2 ೨ ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು, ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.
Blago čovjeku koji čini tako i sinu čovječjem što se toga pridržava: koji poštuje subotu da je ne oskvrni i koji ruke svoje čuva od svakoga zla djela.
3 ೩ ಯೆಹೋವನನ್ನು ಅವಲಂಬಿಸಿದ ವಿದೇಶೀಯನು, ‘ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು’ ಎಂದು ಮಾತನಾಡದಿರಲಿ; ಮತ್ತು ನಪುಂಸಕನು, ‘ಅಯ್ಯೋ, ನಾನು ಗೊಡ್ಡುಮರ’” ಎಂದು ಅಂದುಕೊಳ್ಳದಿರಲಿ.
Neka sin tuđinčev koji je prionuo uz Jahvu ne govori: “Jamačno će me Jahve odvojiti od svojega naroda.” Neka uškopljenik ne govori: “Ja sam, evo, tek suho drvo.”
4 ೪ ಯೆಹೋವನು ಹೀಗೆನ್ನುತ್ತಾನೆ, “ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದುದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ
Jer ovako govori Jahve: “S uškopljenicima koji obdržavaju subotu, koji izabiru što je meni drago i ostanu postojani u Savezu mome -
5 ೫ ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.
podići ću u kući svojoj i među svojim zidovima spomenik i ime, bolje nego sinovima i kćerima, dat ću im vječno ime koje neće biti iskorijenjeno.
6 ೬ ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ
A sinove tuđinske koji pristadoše uz Jahvu da mu služe i da ljube ime Jahvino i da mu budu službenici, koji poštuju subotu i ne oskvrnjuju je i postojani su u Savezu mome,
7 ೭ ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.
njih ću dovesti na svoju svetu goru i razveseliti u svojem Domu molitve. Njihove žrtve paljenice i klanice bit će ugodne na mojem žrtveniku, jer će se Dom moj zvati Dom molitve za sve narode.”
8 ೮ ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.
Riječ je Gospoda Jahve koji sabire raspršene Izraelce: “Sabrat ću ih još povrh onih koji su već sabrani.”
9 ೯ ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವುದಕ್ಕೆ ಬನ್ನಿರಿ!
Sve zvijeri poljske, dođite jesti, i sve vi, zvijeri šumske!
10 ೧೦ ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.
Svi su mu stražari slijepi, i ništa ne shvaćaju. Svi su oni psi nijemi, ne mogu lajati. Sanjaju i drijemlju, najmilije im spavati.
11 ೧೧ ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.
Psi su to proždrljivi, nezasitni; pastiri su to bez razbora: svaki svojim putem okreće, svaki za dobitkom svojim.
12 ೧೨ “ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು.
“Dođite, donijet ću vina; napit ćemo se pića žestoka, i sutra će biti kao danas, izobilje veliko, preveliko!”