< ಯೆಶಾಯನು 57 >
1 ೧ ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.
義人死亡, 無人放在心上; 虔誠人被收去, 無人思念。 這義人被收去是免了將來的禍患;
2 ೨ ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ; ನೀತಿಯುಳ್ಳವನಾಗಿ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾನೆ.
他們得享平安。 素行正直的,各人在墳裏安歇。
3 ೩ ಮಾಟಗಾತಿಯ ಮಕ್ಕಳೇ, ವ್ಯಭಿಚಾರ ಮತ್ತು ವ್ಯಭಿಚಾರಿಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ!
你們這些巫婆的兒子, 姦夫和妓女的種子, 都要前來!
4 ೪ ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ? ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ?
你們向誰戲笑? 向誰張口吐舌呢? 你們豈不是悖逆的兒女, 虛謊的種類呢?
5 ೫ ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು, ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ.
你們在橡樹中間,在各青翠樹下慾火攻心; 在山谷間,在石穴下殺了兒女;
6 ೬ ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?
在谷中光滑石頭裏有你的分。 這些就是你所得的分; 你也向他澆了奠祭,獻了供物, 因這事我豈能容忍嗎?
7 ೭ ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ.
你在高而又高的山上安設床榻, 也上那裏去獻祭。
8 ೮ ಬಾಗಿಲಿನ ಮತ್ತು ನಿಲುವಿನ ಹಿಂಭಾಗದಲ್ಲಿ ನೀನು ವಿಗ್ರಹವನ್ನು ಇಟ್ಟುಕೊಂಡಿದ್ದಿ; ನನ್ನನ್ನು ಬಿಟ್ಟುಬಿಟ್ಟು, ನಿನ್ನ ಮಂಚದ ಗವಸಣಿಗೆಯನ್ನು ತೆಗೆದು, ಅದನ್ನು ಹತ್ತಿ ಅದರಲ್ಲಿ ಅನ್ಯರಿಗೆ ಸ್ಥಳಕೊಟ್ಟು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಿ. ಅವರ ಸಂಗಮವನ್ನು ಆಶಿಸಿ, ನಿನ್ನನ್ನು ತೋರ್ಪಡಿಸಿಕೊಂಡಿದ್ದಿ.
你在門後,在門框後, 立起你的紀念; 向外人赤露,又上去擴張床榻, 與他們立約; 你在那裏看見他們的床就甚喜愛。
9 ೯ ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ. (Sheol )
你把油帶到王那裏, 又多加香料, 打發使者往遠方去, 自卑自賤直到陰間, (Sheol )
10 ೧೦ ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; ಹೊಸ ಬಲವನ್ನು ತಂದುಕೊಂಡಿ; ಆದುದರಿಂದ ನೀನು ಸೋತುಹೋಗಲಿಲ್ಲ.
你因路遠疲倦, 卻不說這是枉然; 你以為有復興之力, 所以不覺疲憊。
11 ೧೧ ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?
你怕誰?因誰恐懼? 竟說謊,不記念我, 又不將這事放在心上。 我不是許久閉口不言, 你仍不怕我嗎?
12 ೧೨ ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ.
我要指明你的公義; 至於你所行的都必與你無益。
13 ೧೩ ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು. ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
你哀求的時候, 讓你所聚集的拯救你吧! 風要把他們颳散, 一口氣要把他們都吹去。 但那投靠我的必得地土, 必承受我的聖山為業。
14 ೧೪ “ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.
耶和華要說: 你們修築修築,預備道路, 將絆腳石從我百姓的路中除掉。
15 ೧೫ ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.
因為那至高至上、永遠長存 名為聖者的如此說: 我住在至高至聖的所在, 也與心靈痛悔謙卑的人同居; 要使謙卑人的靈甦醒, 也使痛悔人的心甦醒。
16 ೧೬ ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.
我必不永遠相爭,也不長久發怒, 恐怕我所造的人與靈性都必發昏。
17 ೧೭ ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.
因他貪婪的罪孽,我就發怒擊打他; 我向他掩面發怒, 他卻仍然隨心背道。
18 ೧೮ ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”
我看見他所行的道,也要醫治他; 又要引導他, 使他和那一同傷心的人再得安慰。
19 ೧೯ ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.
我造就嘴唇的果子; 願平安康泰歸與遠處的人, 也歸與近處的人; 並且我要醫治他。 這是耶和華說的。
20 ೨೦ ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ.
惟獨惡人,好像翻騰的海, 不得平靜; 其中的水常湧出污穢和淤泥來。
21 ೨೧ “ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ನನ್ನ ದೇವರು ನುಡಿಯುತ್ತಾನೆ.
我的上帝說:惡人必不得平安!