< ಯೆಶಾಯನು 58 >
1 ೧ ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.
Sauc pilnā kaklā, netaupi, pacel savu balsi kā bazūni, un pasludini Maniem ļaudīm viņu pārkāpumus un Jēkaba namam viņa grēkus.
2 ೨ ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.
Jo Tie Mani meklē ikdienas, tā kā tiem būtu labs prāts pie Manu ceļu atzīšanas. Kā ļaudis, kas darījuši taisnību un nebūtu atstājuši sava Dieva tiesu, tie prasa no Manis taisnības tiesu; tie grib, lai Dievs tiem tuvojās.
3 ೩ “ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.
Kāpēc (tā tie saka) mēs gavējam, un tu to neuzlūko? Kāpēc mēs mērdējam savu dvēseli, un tu to negribi zināt? Redzi, tai dienā, kad jūs gavējat, tad jūs ejat pēc savas peļņas un dzenat visus savus strādniekus.
4 ೪ ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.
Redzi, jūs gavējat bārdamies un riedamies un bezdievīgi kaudamies ar dūri. Jūs negavējat, kā pieklājās, lai jūsu balsis būtu dzirdamas augstībā.
5 ೫ ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?
Vai tāda ir gavēšana, kas Man patīk, diena, kur cilvēks savu dvēseli mērdē? Kad galvu nokar kā niedre un gulstas uz maisa un pelnos, vai jūs to saucat par gavēšanu un par dienu, kas Tam Kungam patīk?
6 ೬ ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,
Vai tā nav gavēšana, kas Man patīk: atraisīt no netaisnām saitēm, no jūga atsvabināt, spaidītus atlaist vaļā un salauzt ikkatru jūgu?
7 ೭ ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
Vai tā nepiederas, maizi lauzt izsalkušiem, namā ievest nabaga izdzītus, kailu ieraugot, to apsegt un neapslēpties no sava tuvāka?
8 ೮ ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.
Tad ausīs tava gaisma kā dienas blāzma, un tava dzīvība no jauna zels, un tava taisnība ies tavā priekšā, un Tā Kunga godība tevi pavadīs.
9 ೯ ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,
Tad tu sauksi, un Tas Kungs atbildēs, tu brēksi, un Viņš sacīs: redzi, še Es esmu. Ja no sava vidus izraidīsi varmācību, mitēsies ar pirkstiem rādīt un nerunāsi ļauna,
10 ೧೦ ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.
Un ja tu izsalkušam atdarīsi savu sirdi un paēdināsi apbēdināto dvēseli, tad tava gaisma atspīdēs tumsībā, un tava krēsla būs kā dienas vidus;
11 ೧೧ ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.
Un Tas Kungs tevi vadīs bez mitēšanās un pieēdinās tavu dvēseli tuksnesī un stiprinās tavus kaulus. Un tu būsi kā slacināts dārzs un kā ūdens avots, kam ūdens netrūkst.
12 ೧೨ ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು.
Un tavi bērni uzcels vecu vecās posta vietas, tu atjaunosi pagājušu cilšu pamatus un tevi sauks (par) plaisumu aizmūrētāju un ceļu atjaunotāju, kur var dzīvot.
13 ೧೩ ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,
Ja tu savu kāju savaldi svētdienā un nedari, kas tev patīk, Manā svētā dienā, un ja tu dusas dienu nosauci par līksmību, par Tā Kunga svēto (dienu), kas cienījama, un tu tā viņu godā turi, ka nestaigā savus ceļus nedz ej pēc savas pelņas nedz runā liekus vārdus.
14 ೧೪ ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.
Tad tu priecāsies iekš Tā Kunga, un Es tevi vadīšu pār zemes augstumiem, un Es tevi mielošu ar tava tēva Jēkaba mantību; jo Tā Kunga mute to runājusi.