< ಯೆಶಾಯನು 59 >
1 ೧ ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.
Kitaenyo! Dakayo nga Israelita, saan a naababa ti ima ni Yahweh tapno saan a makaisalakan; wenno saan a tuleng ti lapayagna tapno saan a makangngeg.
2 ೨ ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.
Nupay kasta, ti kinamanagbasolyo nga Israelita ket isu ti nangisina kadakayo manipud iti Diosyo, ken gapu kadagiti basolyo ket tinallikudannakayo ken saannakayo a dinengngeg.
3 ೩ ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.
Ta dagiti imayo ket namantsaan iti dara kasta met dagiti ramayyo ket namantsaan iti basol. Agsasao dagiti bibigyo iti inuulbod ken agkakadakes ti ibalbalikas ti dilayo.
4 ೪ ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.
Awan iti agar-aramid iti nalinteg, ken awan iti mangikalkalintegan iti kasasaadna iti kinapudno. Agtaltalekda iti ubbaw a sasao, ken inuulbod ti ibagbagada; isikogda ti riribuk ket impasngayda ti basol.
5 ೫ ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.
Pagpissaenda dagiti itlog ti nagita nga uleg ken lagaenda ti sapot ti lawwalawwa. Siasinoman a mangan kadagiti itlogda ket matay, ken no adda mabittak nga itlog, rummuar ti nagita nga uleg.
6 ೬ ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.
Saan a mabalin nga aramiden a lupot dagiti sapotda, ken saanda a mabalin a lengdan dagiti bagbagida kadagiti trabahoda. Dagiti trabahoda ket trabaho ti kinadakes, ken aramid ti kinaranggas ti adda kadagiti imada.
7 ೭ ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;
Tartarayenda ti kinadakes, ket agtarayda tapno mangpasayasayda iti dara iti awan basolna. Dagiti kapanunotanda ket dakes a kapanunotan; kinaranggas ken pannakadadael ti pagpagnaanda a kalsada.
8 ೮ ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.
Saanda nga ammo ti dalan ti kappia, ken awan iti hustisia kadagiti dalanda. Nagaramidda kadagiti killo a dalan; siasinoman nga agdaliasat kadagitoy a dalan ket saanna nga ammo ti kappia.
9 ೯ ಆದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.
Isu nga adayo kadakami ti hustisia, uray ti kinalinteg ket saan a dimmanon kadakami. Agur-uraykami iti lawag, ngem kinasipnget ti makitami; sapsapulenmi ti kinaraniag, ngem magmagnakami iti kasipngetan.
10 ೧೦ ಕುರುಡರಂತೆ ಗೋಡೆಯನ್ನು ತಡವರಿಸಿ ನಡೆಯುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡಕಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.
Ar-arikapenmi ti pader a kas iti bulsek, kas kadagiti saan a makakita. Maitubtublakkami iti tengnga ti aldaw nga arigna't sumipngeten; kadagiti napipigsa, kasla kami la natay a tattao.
11 ೧೧ ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.
Agngerngerngerkami a kas kadagiti oso ken umas-asugkami a kas kadagiti kalapati; agur-uraykami para iti hustisia, ngem awan; agur-uraykami iti mangispal, ngem adayo daytoy kadakami.
12 ೧೨ ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.
Ta dagiti adu a nagbasolanmi ket adda iti sangoanam, ken mangpaneknek dagiti basolmi maibusor kadakami; ta nagbasolkami, ket bigbigenmi dagiti basbasolmi.
13 ೧೩ ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.
Nagsukirkami, inliblibakmi ni Yahweh ken immadayokami iti panangsurot iti Diosmi. Nangidadaneskami iti panagsaomi ket pasig nga ulbod ti adda iti pusomi ket inuulbod dagiti sasaomi.
14 ೧೪ ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು.
Nabaliktad ti hustisia, ket adayo ti ayan iti kinalinteg; ta naitublak ti kinapudno iti paguummongan a disso, ket saan a makagteng ti husto.
15 ೧೫ ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.
Napukawen ti kinamatalek, ken ti tao a nagsardengen nga agar-aramid iti dakes ket pinagbalinna a biktima ti bagina. Nakita ni Yahweh daytoy ket saan isuna a naragsakan nga awan iti hustisia.
16 ೧೬ ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.
Nakita ni Yahweh nga awan ti uray maysa a tao a timmulong ket nasdaaw isuna. Ngarud, isuna a mismo ti nangisalakan kenkuana, ket pinagballigi isuna iti kinalintegna.
17 ೧೭ ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.
Insuotna ti kinalinteg a kas kabal ken inkabilna iti ulona ti helmet ti pannakaisalakan. Kinawesanna ti bagina kadagiti pagan-anay iti panagibales ken insuotna ti tatak a kas iti maysa a nagayad a lupot.
18 ೧೮ ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.
Sinupapakanna ida segun iti inaramidda, naunget a panangikeddeng kadagiti kabusorna, panangibales kadagiti kabusorna, ti pannakadusa kadagiti isla a kas gunggonada.
19 ೧೯ ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.
Isu nga agbutengdanto iti nagan ni Yahweh manipud iti laud, ken iti dayagna manipud iti pagsingsingisingan ti init; ta umayto isuna a kasla iti napegges a waig, nga iturturong ti anges ni Yahweh.
20 ೨೦ “ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.
“Umayto ti mannubbot idiay Sion ken umayto isuna para kadagiti kaputotan ni Jacob a nangtallikud kadagiti kinasukirda — kastoy ti pakaammo ni Yahweh.
21 ೨೧ ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.
Ket para kaniak, daytoy ti katulagak kadakuada — kuna ni Yahweh — ti espirituk nga adda kadakayo, ken dagiti sasaok nga inkabilko kadagiti ngiwatyo, ket saanto a maikkat kadagiti ngiwatyo wenno rummuar manipud kadagiti ngiwat dagiti annakyo, wenno rummuar manipud kadagiti ngiwat ti appokoyo manipud ita ken iti agnanayon, kuna ni Yahweh.”