< ಯೆಶಾಯನು 6 >
1 ೧ ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.
Et l'année où mourut le roi Ozias, je vis le Seigneur assis sur un trône élevé au plus haut des cieux, et le temple était plein de sa gloire.
2 ೨ ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
Et des Séraphins étaient debout autour de lui, et chacun avait six ailes; de deux ailes ils se voilaient la face, et de deux autres les pieds; des deux dernières ils volaient.
3 ೩ ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.
Et ils criaient l'un à l'autre, et ils disaient: Saint, saint, saint est le Seigneur des armées; toute la terre est pleine de sa gloire.
4 ೪ ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು.
Et au retentissement de leurs voix le portique se souleva, et le temple se remplit de fumée.
5 ೫ ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,
Et je dis: Malheur à moi, parce que je suis percé de douleur, parce que je suis homme, et que j'ai des lèvres impures; j'habite au milieu d'un peuple dont les lèvres sont impures; et le Roi, Seigneur des armées, je l'ai vu de mes yeux.
6 ೬ ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,
Et l'un des Séraphins me fut envoyé, et dans sa main il tenait un charbon qu'avec des pinces il avait pris sur l'autel.
7 ೭ ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು.
Et il m'en toucha la bouche, et il dit: Maintenant que ceci a touché tes lèvres; tes péchés te seront remis, et tu seras purifié de tes iniquités.
8 ೮ ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.
Et j'entendis la voix du Seigneur, disant: Qui enverrai-je? qui donc ira trouver ce peuple? Et je dis: Me voici, envoyez-moi.
9 ೯ ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
Et il dit: Pars, et dis à ce peuple: Vous entendrez de vos oreilles, et ne comprendrez point; vous regarderez de vos yeux, et ne verrez point;
10 ೧೦ ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.
Car le cœur de ce peuple s'est endurci; et ils ont fait la sourde oreille, et ils ont fermé les yeux, de peur que leurs yeux ne voient, que leurs oreilles n'entendent, que leur cœur ne comprenne, qu'ils ne se convertissent à moi, et que je ne les guérisse.
11 ೧೧ ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.
Et je dis: Jusques à quand, Seigneur? Et il dit: Jusqu'à ce que leurs villes soient désertes faute d'habitants, leurs maisons désertes faute d'hommes, et que leur terre soit abandonnée comme un désert.
12 ೧೨ ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು.
Et après cela Dieu en bannira au loin les hommes; mais ceux qui seront restés sur cette terre se multiplieront;
13 ೧೩ ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.
Et l'on y offrira encore la dîme; et de nouveau elle sera bonne à piller, comme le térébinthe, et comme le gland, quand il est tombé de son enveloppe.