< ಯೆಶಾಯನು 61 >
1 ೧ ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
O espírito do Senhor Jehovah está sobre mim; porque o Senhor me ungiu, para pregar boas novas aos mansos: enviou-me a restaurar os contritos de coração, a apregoar liberdade aos cativos, e a abertura de prisão aos presos;
2 ೨ ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,
A apregoar o ano acceitável do Senhor e o dia da vingança do nosso Deus, a consolar todos os tristes;
3 ೩ ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
A ordenar aos tristes de Sião que se lhes dê ornamento por cinza, óleo de gozo por tristeza, vestidura de louvor por espírito angustiado; para que se chamem carvalhos de justiça, plantados do Senhor, para que seja glorificado.
4 ೪ ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು, ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು.
E edificarão os lugares antigamente assolados, e restaurarão os de antes destruídos, e renovarão as cidades assoladas, destruídas de geração em geração.
5 ೫ ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು.
E haverá estrangeiros, e apascentarão os vossos rebanhos: e estranhos serão os vossos lavradores e os vossos vinheiros.
6 ೬ ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.
Porém vós sereis chamados sacerdotes do Senhor, e vos chamarão ministros de nosso Deus: comereis a abundância das nações, e na sua glória vos glóriareis.
7 ೭ ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು.
Por vossa dupla vergonha, e afronta, exultarão sobre a sua parte; pelo que na sua terra possuirão o dobro, e terão perpétua alegria.
8 ೮ ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.
Porque eu, o Senhor, amo o juízo, aborreço a rapina no holocausto; e farei que a sua obra seja em verdade; e farei um concerto eterno com eles.
9 ೯ ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.
E a sua semente será conhecida entre as nações, e os seus descendentes no meio dos povos; todos quantos os virem os conhecerão, que são a semente bendita do Senhor.
10 ೧೦ ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.
Gozo-me muito no Senhor, a minha alma se alegra no meu Deus: porque me vestiu de vestidos de salvação, me cobriu com o manto de justiça, como quando o noivo se orna com atavio sacerdotal, e como a noiva se enfeita com as suas jóias.
11 ೧೧ ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.
Porque, como a terra produz os seus renovos, e como o horto faz brotar o que nele se semeia, assim o Senhor Jehovah fará brotar a justiça e o louvor para todas as nações.