< ಯೆಶಾಯನು 62 >
1 ೧ ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.
シオンの義が朝日の輝きのようにあらわれいで、エルサレムの救が燃えるたいまつの様になるまで、わたしはシオンのために黙せず、エルサレムのために休まない。
2 ೨ ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು.
もろもろの国はあなたの義を見、もろもろの王は皆あなたの栄えを見る。そして、あなたは主の口が定められる新しい名をもってとなえられる。
3 ೩ ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ.
また、あなたは主の手にある麗しい冠となり、あなたの神の手にある王の冠となる。
4 ೪ ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.
あなたはもはや「捨てられた者」と言われず、あなたの地はもはや「荒れた者」と言われず、あなたは「わが喜びは彼女にある」ととなえられ、あなたの地は「配偶ある者」ととなえられる。主はあなたを喜ばれ、あなたの地は配偶を得るからである。
5 ೫ ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.
若い者が処女をめとるようにあなたの子らはあなたをめとり、花婿が花嫁を喜ぶようにあなたの神はあなたを喜ばれる。
6 ೬ ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,
エルサレムよ、わたしはあなたの城壁の上に見張人をおいて、昼も夜もたえず、もだすことのないようにしよう。主に思い出されることを求める者よ、みずから休んではならない。
7 ೭ ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ.
主がエルサレムを堅く立てて、全地に誉を得させられるまで、お休みにならぬようにせよ。
8 ೮ ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;
主はその右の手をさし、大能のかいなをさして誓われた、「わたしは再びあなたの穀物をあなたの敵に与えて食べさせない。また、あなたが労して得たぶどう酒を異邦人に与えて飲ませない。
9 ೯ ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ.
しかし、穀物を刈り入れた者はこれを食べて主をほめたたえ、ぶどうを集めた者はわが聖所の庭でこれを飲む」。
10 ೧೦ ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!
門を通って行け、通って行け。民の道を備えよ。土を盛り、土を盛って大路を設けよ。石を取りのけ。もろもろの民の上に旗をあげよ。
11 ೧೧ “ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.
見よ、主は地の果にまで告げて言われた、「シオンの娘に言え、『見よ、あなたの救は来る。見よ、その報いは主と共にあり、その働きの報いは、その前にある』と。
12 ೧೨ ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.
彼らは『聖なる民、主にあがなわれた者』ととなえられ、あなたは『人に尋ね求められる者、捨てられない町』ととなえられる」。