< ಯೆಶಾಯನು 63 >

1 ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.
מִי־זֶ֣ה ׀ בָּ֣א מֵאֱדֹ֗ום חֲמ֤וּץ בְּגָדִים֙ מִבָּצְרָ֔ה זֶ֚ה הָד֣וּר בִּלְבוּשֹׁ֔ו צֹעֶ֖ה בְּרֹ֣ב כֹּחֹ֑ו אֲנִ֛י מְדַבֵּ֥ר בִּצְדָקָ֖ה רַ֥ב לְהֹושִֽׁיעַ׃
2 ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷಿಯನ್ನು ತುಳಿಯುವವನ ಬಟ್ಟೆಯ ಹಾಗಿರುವುದು ಏಕೆ?
מַדּ֥וּעַ אָדֹ֖ם לִלְבוּשֶׁ֑ךָ וּבְגָדֶ֖יךָ כְּדֹרֵ֥ךְ בְּגַֽת׃
3 ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.
פּוּרָ֣ה ׀ דָּרַ֣כְתִּי לְבַדִּ֗י וּמֵֽעַמִּים֙ אֵֽין־אִ֣ישׁ אִתִּ֔י וְאֶדְרְכֵ֣ם בְּאַפִּ֔י וְאֶרְמְסֵ֖ם בַּחֲמָתִ֑י וְיֵ֤ז נִצְחָם֙ עַל־בְּגָדַ֔י וְכָל־מַלְבּוּשַׁ֖י אֶגְאָֽלְתִּי׃
4 ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.
כִּ֛י יֹ֥ום נָקָ֖ם בְּלִבִּ֑י וּשְׁנַ֥ת גְּאוּלַ֖י בָּֽאָה׃
5 ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣಾಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.
וְאַבִּיט֙ וְאֵ֣ין עֹזֵ֔ר וְאֶשְׁתֹּומֵ֖ם וְאֵ֣ין סֹומֵ֑ךְ וַתֹּ֤ושַֽׁע לִי֙ זְרֹעִ֔י וַחֲמָתִ֖י הִ֥יא סְמָכָֽתְנִי׃
6 ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ, ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.
וְאָב֤וּס עַמִּים֙ בְּאַפִּ֔י וַאֲשַׁכְּרֵ֖ם בַּחֲמָתִ֑י וְאֹורִ֥יד לָאָ֖רֶץ נִצְחָֽם׃ ס
7 ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.
חַֽסְדֵ֨י יְהוָ֤ה ׀ אַזְכִּיר֙ תְּהִלֹּ֣ת יְהוָ֔ה כְּעַ֕ל כֹּ֥ל אֲשֶׁר־גְּמָלָ֖נוּ יְהוָ֑ה וְרַב־טוּב֙ לְבֵ֣ית יִשְׂרָאֵ֔ל אֲשֶׁר־גְּמָלָ֥ם כְּֽרַחֲמָ֖יו וּכְרֹ֥ב חֲסָדָֽיו׃
8 “ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.
וַיֹּ֙אמֶר֙ אַךְ־עַמִּ֣י הֵ֔מָּה בָּנִ֖ים לֹ֣א יְשַׁקֵּ֑רוּ וַיְהִ֥י לָהֶ֖ם לְמֹושִֽׁיעַ׃
9 ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
בְּֽכָל־צָרָתָ֣ם ׀ לֹא (לֹ֣ו) צָ֗ר וּמַלְאַ֤ךְ פָּנָיו֙ הֹֽושִׁיעָ֔ם בְּאַהֲבָתֹ֥ו וּבְחֶמְלָתֹ֖ו ה֣וּא גְאָלָ֑ם וַֽיְנַטְּלֵ֥ם וַֽיְנַשְּׂאֵ֖ם כָּל־יְמֵ֥י עֹולָֽם׃
10 ೧೦ ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.
וְהֵ֛מָּה מָר֥וּ וְעִצְּב֖וּ אֶת־ר֣וּחַ קָדְשֹׁ֑ו וַיֵּהָפֵ֥ךְ לָהֶ֛ם לְאֹויֵ֖ב ה֥וּא נִלְחַם־בָּֽם׃
11 ೧೧ ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?
וַיִּזְכֹּ֥ר יְמֵֽי־עֹולָ֖ם מֹשֶׁ֣ה עַמֹּ֑ו אַיֵּ֣ה ׀ הַֽמַּעֲלֵ֣ם מִיָּ֗ם אֵ֚ת רֹעֵ֣י צֹאנֹ֔ו אַיֵּ֛ה הַשָּׂ֥ם בְּקִרְבֹּ֖ו אֶת־ר֥וּחַ קָדְשֹֽׁו׃
12 ೧೨ ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?
מֹולִיךְ֙ לִימִ֣ין מֹשֶׁ֔ה זְרֹ֖ועַ תִּפְאַרְתֹּ֑ו בֹּ֤וקֵֽעַ מַ֙יִם֙ מִפְּנֵיהֶ֔ם לַעֲשֹׂ֥ות לֹ֖ו שֵׁ֥ם עֹולָֽם׃
13 ೧೩ ಸಾಗರದ ತಳಕ್ಕೆ ಅವರನ್ನು ನಡೆಸಿದಾತನು ಎಲ್ಲಿ? ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಅವರು ಮುಗ್ಗರಿಸಲಿಲ್ಲ.
מֹולִיכָ֖ם בַּתְּהֹמֹ֑ות כַּסּ֥וּס בַּמִּדְבָּ֖ר לֹ֥א יִכָּשֵֽׁלוּ׃
14 ೧೪ ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವುದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ.
כַּבְּהֵמָה֙ בַּבִּקְעָ֣ה תֵרֵ֔ד ר֥וּחַ יְהוָ֖ה תְּנִיחֶ֑נּוּ כֵּ֚ן נִהַ֣גְתָּ עַמְּךָ֔ לַעֲשֹׂ֥ות לְךָ֖ שֵׁ֥ם תִּפְאָֽרֶת׃
15 ೧೫ ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.
הַבֵּ֤ט מִשָּׁמַ֙יִם֙ וּרְאֵ֔ה מִזְּבֻ֥ל קָדְשְׁךָ֖ וְתִפְאַרְתֶּ֑ךָ אַיֵּ֤ה קִנְאֽ͏ָתְךָ֙ וּגְב֣וּרֹתֶ֔ךָ הֲמֹ֥ון מֵעֶ֛יךָ וְֽרַחֲמֶ֖יךָ אֵלַ֥י הִתְאַפָּֽקוּ׃
16 ೧೬ ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.
כִּֽי־אַתָּ֣ה אָבִ֔ינוּ כִּ֤י אַבְרָהָם֙ לֹ֣א יְדָעָ֔נוּ וְיִשְׂרָאֵ֖ל לֹ֣א יַכִּירָ֑נוּ אַתָּ֤ה יְהוָה֙ אָבִ֔ינוּ גֹּאֲלֵ֥נוּ מֵֽעֹולָ֖ם שְׁמֶֽךָ׃
17 ೧೭ ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.
לָ֣מָּה תַתְעֵ֤נוּ יְהוָה֙ מִדְּרָכֶ֔יךָ תַּקְשִׁ֥יחַ לִבֵּ֖נוּ מִיִּרְאָתֶ֑ךָ שׁ֚וּב לְמַ֣עַן עֲבָדֶ֔יךָ שִׁבְטֵ֖י נַחֲלָתֶֽךָ׃
18 ೧೮ ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.
לַמִּצְעָ֕ר יָרְשׁ֖וּ עַם־קָדְשֶׁ֑ךָ צָרֵ֕ינוּ בֹּוסְס֖וּ מִקְדָּשֶֽׁךָ׃
19 ೧೯ ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.
הָיִ֗ינוּ מֵֽעֹולָם֙ לֹֽא־מָשַׁ֣לְתָּ בָּ֔ם לֹֽא־נִקְרָ֥א שִׁמְךָ֖ עֲלֵיהֶ֑ם לוּא־קָרַ֤עְתָּ שָׁמַ֙יִם֙ יָרַ֔דְתָּ מִפָּנֶ֖יךָ הָרִ֥ים נָזֹֽלּוּ׃

< ಯೆಶಾಯನು 63 >