< ಯೆಶಾಯನು 63 >
1 ೧ ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.
"Siapa dia yang datang dari Edom, yang datang dari Bozra dengan baju yang merah, dia yang bersemarak dengan pakaiannya, yang melangkah dengan kekuatannya yang besar?" "Akulah yang menjanjikan keadilan dan yang berkuasa untuk menyelamatkan!"
2 ೨ ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷಿಯನ್ನು ತುಳಿಯುವವನ ಬಟ್ಟೆಯ ಹಾಗಿರುವುದು ಏಕೆ?
"Mengapakah pakaian-Mu semerah itu, dan baju-Mu seperti baju pengirik buah anggur?"
3 ೩ ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.
"Aku seorang dirilah yang melakukan pengirikan, dan dari antara umat-Ku tidak ada yang menemani Aku! Aku telah mengirik bangsa-bangsa dalam murka-Ku, dan Aku telah menginjak-injak mereka dalam kehangatan amarah-Ku; semburan darah mereka memercik kepada baju-Ku, dan seluruh pakaian-Ku telah cemar.
4 ೪ ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.
Sebab hari pembalasan telah Kurencanakan dan tahun penuntutan bela telah datang.
5 ೫ ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣಾಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.
Aku melayangkan pandangan-Ku: tidak ada yang menolong; Aku tertegun: tidak ada yang membantu. Lalu tangan-Ku memberi Aku pertolongan, dan kehangatan amarah-Ku, itulah yang membantu Aku.
6 ೬ ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ, ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.
Aku memijak-mijak bangsa-bangsa dalam murka-Ku, menghancurkan mereka dalam kehangatan amarah-Ku dan membuat semburan darah mereka mengalir ke tanah."
7 ೭ ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.
Aku hendak menyebut-nyebut perbuatan kasih setia TUHAN, perbuatan TUHAN yang masyhur, sesuai dengan segala yang dilakukan TUHAN kepada kita, dan kebajikan yang besar kepada kaum Israel yang dilakukan-Nya kepada mereka sesuai dengan kasih sayang-Nya dan sesuai dengan kasih setia-Nya yang besar.
8 ೮ “ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.
Bukankah Ia berfirman: "Sungguh, merekalah umat-Ku, anak-anak yang tidak akan berlaku curang," maka Ia menjadi Juruselamat mereka
9 ೯ ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
dalam segala kesesakan mereka. Bukan seorang duta atau utusan, melainkan Ia sendirilah yang menyelamatkan mereka; Dialah yang menebus mereka dalam kasih-Nya dan belas kasihan-Nya. Ia mengangkat dan menggendong mereka selama zaman dahulu kala.
10 ೧೦ ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.
Tetapi mereka memberontak dan mendukakan Roh Kudus-Nya; maka Ia berubah menjadi musuh mereka, dan Ia sendiri berperang melawan mereka.
11 ೧೧ ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?
Lalu teringatlah mereka kepada zaman dahulu kala, zaman Musa, hamba-Nya itu: Di manakah Dia yang membawa mereka naik dari laut bersama-sama dengan penggembala kambing domba-Nya? Di manakah Dia yang menaruh Roh Kudus-Nya dalam hati mereka;
12 ೧೨ ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?
yang dengan tangan-Nya yang agung menyertai Musa di sebelah kanan; yang membelah air di depan mereka untuk membuat nama abadi bagi-Nya;
13 ೧೩ ಸಾಗರದ ತಳಕ್ಕೆ ಅವರನ್ನು ನಡೆಸಿದಾತನು ಎಲ್ಲಿ? ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಅವರು ಮುಗ್ಗರಿಸಲಿಲ್ಲ.
yang menuntun mereka melintasi samudera raya seperti kuda melintasi padang gurun? Mereka tidak pernah tersandung,
14 ೧೪ ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವುದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ.
seperti ternak yang turun ke dalam lembah. Roh TUHAN membawa mereka ke tempat perhentian. Demikianlah Engkau memimpin umat-Mu untuk membuat nama yang agung bagi-Mu.
15 ೧೫ ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.
Pandanglah dari sorga dan lihatlah dari kediaman-Mu yang kudus dan agung! Di manakah kecemburuan-Mu dan keperkasaan-Mu, hati-Mu yang tergerak dan kasih sayang-Mu? Janganlah kiranya Engkau menahan diri!
16 ೧೬ ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.
Bukankah Engkau Bapa kami? Sungguh, Abraham tidak tahu apa-apa tentang kami, dan Israel tidak mengenal kami. Ya TUHAN, Engkau sendiri Bapa kami; nama-Mu ialah "Penebus kami" sejak dahulu kala.
17 ೧೭ ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.
Ya TUHAN, mengapa Engkau biarkan kami sesat dari jalan-Mu, dan mengapa Engkau tegarkan hati kami, sehingga tidak takut kepada-Mu? Kembalilah oleh karena hamba-hamba-Mu, oleh karena suku-suku milik kepunyaan-Mu!
18 ೧೮ ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.
Mengapa orang-orang fasik menghina tempat kudus-Mu, para lawan kami memijak-mijak bait kudus-Mu?
19 ೧೯ ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.
Keadaan kami seolah-olah kami dari dahulu kala tidak pernah berada di bawah pemerintahan-Mu, seolah-olah nama-Mu tidak pernah disebut atas kami.