< ಯೆಶಾಯನು 64 >
1 ೧ ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!
О да би раздрал Ти небето, да би слязъл, Да биха се стопили планините от присъствието Ти,
2 ೨ ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!
Както кога огън гори храстите, И огън прави водата да клокочи, За да стане името Ти познато на противниците Ти, И да потреперят народите от присъствието Ти,
3 ೩ ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!
Когато вършиш ужасни дела каквито не очаквахме! О да би слязъл, да биха се стопили планините от присъствието Ти!
4 ೪ ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.
Защото от древността не се е чуло, До уши не е стигнало. Око не е видяло друг бог, освен Тебе. Да е извършил такива дела за ония, които го чакат.
5 ೫ ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?
Посрещаш с благост този, който радостно върши правда, Дори ония, които си спомнят за Тебе в пътищата Ти; Ето, Ти си се разгневил, защото ние съгрешихме; Но в Твоите пътища има трайност, и ние ще се спасим.
6 ೬ ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
Защото всички станахме като човек нечист, И всичката ни правда е като омърсена дреха; Ние всички вехнем като лист, И нашите беззакония ни завличат както вятъра.
7 ೭ ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.
И няма човек, който да призавава името Ти, Който да се пробуди, за да се хване за Тебе; Защото Ти си скрил лицето Си от нас, И стопил си ни, поради беззаконията ни.
8 ೮ ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.
Но сега Господи, Ти си наш Отец; Ние сме глината, а Ти грънчарят ни; И всички сме дело на Твоята ръка.
9 ೯ ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
Недей се гневи силно, Господи. Недей помни вечно беззаконието; Ето, погледни, молим Ти се, Че ние всички сме Твои люде.
10 ೧೦ ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.
Твоите свети градове запустяха; Сион запустя. Ерусалим е опустошен.
11 ೧೧ ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.
Нашият свет и красив дом, Гдето бащите ни Те славословеха, Биде изгорен с огън; И всичките драги нам неща запустяха.
12 ೧೨ ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?”
Пред вид на това, ще се въздържиш ли, Господи? Ще мълчиш ли и ще ни наскърбиш ли до крайност?