< ಯೆಶಾಯನು 65 >
1 ೧ “ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.
I allowed myself to be sought by those that asked not; I let myself be found by those that sought me not: I said, Here am I, here am I, unto a nation that called itself not by my name.
2 ೨ ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು.
I spread out my hands all the time unto a rebellious people, that walk in the way which is not good, after their own thoughts;
3 ೩ ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.
[To] the people that provoke me to anger to my face continually; that sacrifice in gardens and burn incense upon [altars of] brick,
4 ೪ ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ, ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ.
That sit about among the graves, and lodge in the vaults, that eat the flesh of the swine, and [have] broth of abominations [in] their vessels;
5 ೫ ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.
That say, Stand by thyself, come not near to me; for I am holier than thou. These are a smoke in my nose, a fire that burneth all the time.
6 ೬ ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು;
Behold, it is written before me; I will not keep silence, till I have recompensed, yea, recompensed into their bosom.—
7 ೭ ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.
Your iniquities and the iniquities of your fathers together, saith the Lord, who have burnt incense upon the mountains, and upon the hills have blasphemed me: and I will measure out their work at first into their bosom.
8 ೮ ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,
Thus hath said the Lord, As the new wine is found in the cluster of grapes, and one saith, Destroy it not, for a blessing is in it; so will I do for the sake of my servants, that I will not destroy the whole;
9 ೯ ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.
And I let come forth out of Jacob a seed, and out of Judah an inheritor of my mountains; and my elect shall inherit it, and my servants shall dwell there.
10 ೧೦ ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ, ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.
And Sharon shall become a fold of flocks, and the valley of 'Achor a resting-place for herds, for my people that have sought me.
11 ೧೧ ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.
But ye who forsake the Lord, who forget my holy mountain, that set out a table for the god of Fortune, and that fill for Destiny the drink-offering.—
12 ೧೨ ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.”
Yea, I will destine you to the sword, and all of you shall kneel down to the slaughter; because when I called, ye did not answer; when I spoke, ye did not hear; but ye did what is evil in my eyes, and that wherein I had no delight did ye choose.
13 ೧೩ ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.
Therefore thus hath said the Lord Eternal, Behold, my servants shall eat, but ye shall be hungry; behold, my servants shall drink, but ye shall be thirsty; behold, my servants shall rejoice, but ye shall be made ashamed;
14 ೧೪ ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಹೃದಯದ ಯಾತನೆಯಿಂದ ಗೋಳಾಡುವಿರಿ.
Behold, my servants shall sing for joy of heart, but ye shall cry out from pain of heart, and from a broken spirit shall ye howl;
15 ೧೫ ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.
And ye shall leave behind your name for an oath unto my elect ones, when the Lord Eternal will slay thee; but his servants will he call by another name.
16 ೧೬ ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.
Whoever there be that blesseth himself on the earth shall bless himself by the true God; and that sweareth on the earth shall swear by the true God; because the former troubles are forgotten, and because they are hidden from my eyes.
17 ೧೭ “ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.
For, behold, I will create new heavens and a new earth; and the former shall not be remembered, nor come into mind;
18 ೧೮ ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.
But be ye glad and rejoice unto all eternity in what I create; for, behold, I will create Jerusalem for rejoicing, and her people for gladness.
19 ೧೯ ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.
And I will rejoice over Jerusalem, and be glad in my people: and there shall not be heard in her any more the voice of weeping, nor the voice of complaint.
20 ೨೦ ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ; ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು.
There shall no more come thence an infant of few days, nor an old man that shall not have the full length of his days; for as a lad shall one die a hundred years old; and as a sinner shall be accursed he who [dieth] at a hundred years old.
21 ೨೧ ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.
And they shall build houses, and inhabit them; and they shall plant vineyards, and eat their fruit.
22 ೨೨ ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.
They shall not build, and another inhabit; they shall not plant, and another eat; for as the days of a tree are the days of my people, and the work of their hands shall my elect wear out.
23 ೨೩ ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.
They shall not toil in vain, nor bring forth unto an early death; for the seed of the blessed of the Lord are they, and their offspring with them.
24 ೨೪ ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.
And it shall come to pass, that before yet they call will I answer; and while they are still speaking will I hear.
25 ೨೫ ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.
The wolf and the lamb shall feed together, and the lion shall like the bullock eat straw: and the serpent—dust shall be his food. They shall not hurt nor destroy in all my holy mountain, saith the Lord.