< ಯೆಶಾಯನು 7 >

1 ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.
U dane judejskoga kralja Ahaza, sina Jotamova, sina Uzijina, aramski kralj Rason i izraelski kralj Pekah, sin Remalijin, zavojštiše na Jeruzalem, ali ga ne mogoše zauzeti.
2 ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.
Tada dojaviše domu Davidovu: “Aramci se utaborili u Efrajimu.” Na tu vijest uzdrhta srce kraljevo i srce svega naroda, kao što u šumi drveće ustrepti od vjetra.
3 ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,
I Jahve reče Izaiji: “Iziđi pred Ahaza, ti i sin tvoj Šear Jašub, do nakraj vodovoda gornjeg ribnjaka na putu u Valjarevo polje.
4 ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”
Reci mu: 'Pazi, smiri se, ne boj se, i nek' ti ne premire srce od ovih dvaju ugaraka zadimljenih, od raspaljenog bijesa Rasona aramskog i sina Remalijina,
5 ಅರಾಮ್ಯರೂ, ಎಫ್ರಾಯೀಮ್ಯರೂ ಮತ್ತು ರೆಮಲ್ಯನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆ ಮಾಡಿ,
jer Aram, Efrajim i sin Remalijin smisliše tvoju propast.'
6 “ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ.
Pođimo, rekoše, na Judeju, uplašimo je i osvojimo da u njoj zakraljimo sina Tabelova.
7 ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ.
Ovako govori Jahve Gospod: 'To se neće zbiti: toga biti neće!
8 ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.
[8a] Damask je glava Aramcima, a Damasku je glava Rason;
9 ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.
Samarija je glava Efrajimcima, a Samariji glava je Remalija. [8b]Još šezdeset i pet godina, i Efrajim, razoren, neće više biti narod. [9b] Ako se na me ne oslonite, održat' se nećete!”
10 ೧೦ ಮತ್ತೆ ಯೆಹೋವನು ಆಹಾಜನಿಗೆ,
Jahve opet progovori Ahazu i reče mu:
11 ೧೧ “ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು. (Sheol h7585)
“Zaišti od Jahve, Boga svoga, jedan znak za sebe iz dubine Podzemlja ili gore iz visina.” (Sheol h7585)
12 ೧೨ ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು.
Ali Ahaz odgovori: “Ne, neću iskati i neću iskušavati Jahvu.”
13 ೧೩ ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?
Tada reče Izaija: “Čujte, dome Davidov. Zar vam je malo dodijavati ljudima, pa i Bogu mom dodijavate!
14 ೧೪ ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
Zato, sam će vam Gospodin dati znak: Evo, začet će djevica i roditi sina i nadjenut će mu ime Emanuel!
15 ೧೫ ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು.
Vrhnjem i medom on će se hraniti dok ne nauči odbacivat' zlo i birati dobro.
16 ೧೬ “ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.
Jer prije nego dječak nauči odbacivat' zlo i birati dobro, opustjet će zemlja, zbog koje strepiš, od dvaju kraljeva.
17 ೧೭ ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”
Protiv tebe i protiv tvog naroda i protiv kuće oca tvojega dovest će Jahve dane kakvih ne bijaše otkad se Efrajim odvoji od Jude - kralja asirskoga.
18 ೧೮ ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ, ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು.
U dan onaj zazviždat će Jahve muhama na ušću egipatskih rijeka i pčelama u zemlji asirskoj
19 ೧೯ ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.
da dođu i popadaju po strmim dolovima, po rasjelinama stijena, po svim trnjacima i svim pojilištima.
20 ೨೦ ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.
U dan onaj Gospod će obrijati britvom najmljenom s onu stranu Eufrata - kraljem asirskim - kosu s glave, dlake s nogu i bradu s obraza.
21 ೨೧ ಆ ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
U dan onaj svatko će hraniti po kravu i dvije ovce
22 ೨೨ ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.
i od obilja mlijeka koje će mu dati hranit će se vrhnjem; vrhnjem i medom hranit će se koji god u zemlji preostanu.
23 ೨೩ ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.
U dan onaj gdje god bijaše tisuću čokota, vrijednih tisuću srebrnika, izrast će drač i trnje.
24 ೨೪ ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.
Onamo će polaziti sa strijelom i lukom, jer sva će zemlja u drač i trnje zarasti.
25 ೨೫ ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ. ಆದರೆ ಅದು ದನಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.
A po svim gorama gdje se motikom kopalo nitko više neće ići, strašeći se trnja i drača: onuda će goveda pasti i gaziti ovce.”

< ಯೆಶಾಯನು 7 >