< ಯೆಶಾಯನು 7 >
1 ೧ ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.
En la tempo de Aĥaz, filo de Jotam, filo de Uzija, reĝo de Judujo, eliris Recin, reĝo de Sirio, kaj Pekaĥ, filo de Remalja, reĝo de Izrael, kontraŭ Jerusalemon, por militi kontraŭ ĝi; sed ili ne povis konkeri ĝin.
2 ೨ ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.
Oni raportis al la domo de David, dirante: La Sirianoj stariĝis tendare en la lando de Efraim. Tiam ektremis lia koro kaj la koro de lia popolo, kiel la arboj de arbaro tremas de vento.
3 ೩ ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,
Sed la Eternulo diris al Jesaja: Iru renkonte al Aĥaz, vi kaj via filo Ŝear-Jaŝub, al la fino de la akvotubo de la supra lageto, ĉe la vojo al la kampo de fulistoj,
4 ೪ ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”
kaj diru al li: Gardu vin, kaj estu trankvila; ne timu, kaj via koro ne senkuraĝiĝu pro la du fumantaj brulŝtipoj, pro la furiozo de Recin kun la Sirianoj kaj de la filo de Remalja.
5 ೫ ಅರಾಮ್ಯರೂ, ಎಫ್ರಾಯೀಮ್ಯರೂ ಮತ್ತು ರೆಮಲ್ಯನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆ ಮಾಡಿ,
La Sirianoj, kun Efraim kaj kun la filo de Remalja, havas malbonan intencon kontraŭ vi, kaj diras:
6 ೬ “ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ.
Ni iru kontraŭ Judujon, ni malgrandigu ĝin, malkovru ĝin por ni, kaj ni starigu kiel reĝon super ĝi la filon de Tabeel.
7 ೭ ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ.
Tiele diris la Sinjoro, la Eternulo: Tio ne plenumiĝos, kaj tio ne estos.
8 ೮ ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.
Ĉar la kapo de Sirio estas Damasko, kaj la kapo de Damasko estas Recin, kaj post sesdek kvin jaroj Efraim ĉesos esti popolo.
9 ೯ ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.
Kaj la kapo de Efraim estas Samario, kaj la kapo de Samario estas la filo de Remalja. Se vi ne kredas, vi ne estas fidelaj.
10 ೧೦ ಮತ್ತೆ ಯೆಹೋವನು ಆಹಾಜನಿಗೆ,
Kaj plue diris la Eternulo: Diru al Aĥaz jene:
11 ೧೧ “ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು. (Sheol )
Petu por vi signon de la Eternulo, via Dio, ĉu profunde malsupre, ĉu alte supre. (Sheol )
12 ೧೨ ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು.
Sed Aĥaz diris: Mi ne petos, kaj mi ne incitos la Eternulon.
13 ೧೩ ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?
Kaj li diris: Aŭskultu, domo de David: ĉu ne sufiĉas al vi ĉagreni homojn, ke vi ĉagrenas eĉ mian Dion?
14 ೧೪ ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
Tial la Sinjoro mem donos al vi signon: jen virgulino gravediĝis, kaj ŝi naskos filon, kaj ŝi donos al li la nomon Emanuel.
15 ೧೫ ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು.
Buteron kaj mielon li manĝos, ĝis li povoscios forpuŝi malbonon kaj elekti bonon.
16 ೧೬ “ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.
Sed antaŭ ol la knabo povoscios forpuŝi malbonon kaj elekti bonon, estos forlasita tiu lando, kiun vi timas pro ĝiaj du reĝoj.
17 ೧೭ ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”
La Eternulo venigos sur vin kaj sur vian popolon kaj sur la domon de via patro tiajn tagojn, kiuj ne venis de post la tempo, kiam Efraim defalis de Jehuda; Li venigos la reĝon de Asirio.
18 ೧೮ ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ, ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು.
En tiu tago la Eternulo alvokos la muŝojn de la randoj de la lagoj de Egiptujo kaj la abelojn de la lando Asiria;
19 ೧೯ ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.
kaj ili venos kaj sidiĝos ĉiuj en la dezertigitaj valoj kaj en la fendoj de la rokoj kaj sur ĉiuj arbustoj kaj sur ĉiuj pikarbetaĵoj.
20 ೨೦ ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.
En tiu tempo la Eternulo razos per dungita razilo, per la transriveranoj, per la reĝo de Asirio, la kapon kaj la harojn de la piedoj, kaj forigos eĉ la barbon.
21 ೨೧ ಆ ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
En tiu tempo homo nutros junan bovinon kaj du ŝafojn;
22 ೨೨ ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.
kaj pro la abundo de lakto li manĝos buteron; ĉar buteron kaj lakton manĝos ĉiu, kiu restos en la lando.
23 ೨೩ ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.
En tiu tempo ĉiu loko, kie estis mil vinberbranĉoj, havantaj la prezon de mil arĝentaj moneroj, kovriĝos per dornoj kaj pikarbustoj.
24 ೨೪ ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.
Kun sagoj kaj pafarkoj oni venos tien, ĉar la tuta lando kovriĝos per dornoj kaj pikarbustoj.
25 ೨೫ ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ. ಆದರೆ ಅದು ದನಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.
Kaj sur ĉiujn montojn, kiujn oni prilaboradis per pioĉoj, oni ne povos supreniri pro timo antaŭ la dornoj kaj pikarbustoj; oni sendos tien bovojn, oni irigos tien ŝafojn.