< ಯೆಶಾಯನು 8 >
1 ೧ ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ.
Jehova Nyasaye nowachone niya, “Kaw kalatas maduongʼ kendo indik wachni gi kalam mongʼongʼore ni Maher-Shalal-Hash-Baz, tiende ni yeko biro chako timore machiegni.”
2 ೨ ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು.
Kendo abiro luongo Uria jadolo kod Zekaria wuod Jeberekia mondo gibedna joneno mar adier.
3 ೩ ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು’ ಎಂದು ಹೇಳಿದನು.
Bangʼe ne ariwora gi chiega ma janabi madhako kendo ne omako ich mi onywolo wuowi kendo Jehova Nyasaye nowachona niya, “Chake wuowino ni Maher-Shalal-Hash-Baz.
4 ೪ ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು.
Kapok nyathino odongo mongʼeyo luongo ‘wuonwa’ kata ‘minwa,’ to mwandu duto mag Damaski kaachiel gi gik moyaki mag Samaria notingʼ gi ruodh Asuria.”
5 ೫ ಯೆಹೋವನು ಮತ್ತೊಂದಾವರ್ತಿ ನನಗೆ ಹೀಗೆ ನುಡಿದನು,
Jehova Nyasaye nowuoyo koda kendo kawacho niya,
6 ೬ “ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ, ರೆಮಲ್ಯನ ಮಗನನ್ನೂ ನಂಬಿ ಮೆರೆದಿದ್ದರಿಂದ,
“Nikech jogi osedagi, pi mamol mamuol kawuok Shilo, kendo gi mor mana gi Rezin kod wuod Remalia,
7 ೭ ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,
Omiyo Ruoth Nyasaye biro kelo kuomgi oula mopongʼ mag Aora, ma en ruodh Asuria gi joge mag lweny. Pi Aora nopongʼ wengene ma nomuom gengene,
8 ೮ ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”
kendo obiro muomo piny Juda mi ochop koni gi koni kokadho e diere, kendo kopongʼ thich nyaka oulano nokwak pinyu duto, yaye Imanuel!”
9 ೯ ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.
Chokreuru ne lweny, un ogendini, ka luoro omakou! Chikuru itu un ji duto manie pinje maboyo! Bende ikreuru ne lweny ka luoro omakou! Bende ikreuru ne lweny ka luoro omakou!
10 ೧೦ ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.
Kata dabed ni ungʼado rieko kuom gik mudwaro timo to ibiro thirgi; bende kata dabed ni uchano gima udwaro timo to ok notimre, nikech Nyasaye nikodwa.
11 ೧೧ ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು, ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗೆಂದನು,
Jehova Nyasaye ne owuoyo koda ka bade maratego ni kuoma, kosiema ni mondo kik awuothi e yore mag ogandani. Nowacho niya,
12 ೧೨ “ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.
“Gima jogi luongo ni andhoga Kik uluong ni andhoga; bende kik iluor gik ma giluoro kendo kik gibwogi.
13 ೧೩ ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ.
Jehova Nyasaye Maratego ema onego ikwan ka ngʼat maler, en ema onego umiye luor, kendo en ema onego kibaji mare goyi,
14 ೧೪ ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು.
kendo en ema nobed kare maler; to ne jo-Israel kod jo-Juda, enobed kidi machwanyo ji kendo lwanda mamiyo gipodho. Chutho enobed obadho ma jo-Jerusalem nomokie.
15 ೧೫ ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗಪಡುವರು, ಬಲೆಗೆ ಸಿಕ್ಕಿ ವಶವಾಗುವರು.”
Ji mangʼeny kuomgi nochwanyre mi gore piny kendo tur, nochiknegi obadho ma makgi.”
16 ೧೬ ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.
Koro twe kalatas mondikie wechego motegno kendo chan chikego e nyim jopuonjrena.
17 ೧೭ ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.
Abiro dwaro Jehova Nyasaye ma opando wangʼe ne od Jakobo. Abiro keto genona kuome.
18 ೧೮ ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.
Eri an kaachiel gi nyithindo ma Jehova Nyasaye osemiya. Wan e ranyisi kod honni e piny Israel koa kuom Jehova Nyasaye Maratego modak e got mar Sayun.
19 ೧೯ “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?
Ka ji wachonu ni manyuru rieko kuom ajuoke gi jo-nyakalondo madhum kendo jajni, to donge dhano onego penj wach kuom Nyasaye? Angʼo momiyo upenjo joma otho wach mar joma ngima?
20 ೨೦ ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.
To kar timo kamano to nonuru chike Nyasaye kod wechene! Ka ok ginyal wuoyo kaluwore gi wachni to ok ginyal konyo ngʼato.
21 ೨೧ ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.
Ginitangni e piny ka githagore kendo ka gidenyo, kendo e kindeno ma kech onurogi, igi nowangʼ matek mi gikwongʼ ruodhgi kod Nyasachgi.
22 ೨೨ ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.
Eka ginikulre ka gingʼiyo piny, to chandruok gi mudho kod chuny malit ema ginine kendo noriembgi mawitgi e mudho mandiwa.