< ಯೆಶಾಯನು 8 >

1 ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ.
خداوند به من فرمود که لوحی بزرگ بگیرم و با خط درشت روی آن بنویسم: «مهیر شلال حاش بز»
2 ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು.
من از اوریای کاهن و زکریا (پسر یبرکیا) که مردانی امین هستند خواستم هنگام نوشتن حاضر باشند و شهادت دهند که من آن را نوشته‌ام.
3 ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು’ ಎಂದು ಹೇಳಿದನು.
پس از چندی، همسرم حامله شد و هنگامی که پسرمان به دنیا آمد خداوند فرمود: «نام او را مهیر شلال حاش بز بگذار.
4 ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು.
پیش از آنکه این پسر بتواند”پدر“و”مادر“بگوید، پادشاه آشور به دمشق و سامره یورش خواهد برد و اموال آنها را غارت خواهد کرد.»
5 ಯೆಹೋವನು ಮತ್ತೊಂದಾವರ್ತಿ ನನಗೆ ಹೀಗೆ ನುಡಿದನು,
پس از آن، باز خداوند به من فرمود:
6 “ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ, ರೆಮಲ್ಯನ ಮಗನನ್ನೂ ನಂಬಿ ಮೆರೆದಿದ್ದರಿಂದ,
«حال که مردم یهودا آبهای ملایم نهر شیلوه را خوار می‌شمارند و دلشان با رصین پادشاه و فقح پادشاه خوش است،
7 ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,
من سیلابی نیرومند از رود فرات، یعنی پادشاه آشور را با تمامی شکوهش، بر آنها خواهم آورد. این سیلاب بر تمامی آبراههای خود طغیان کرده،
8 ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”
به سوی یهودا پیش خواهد رفت و آن را تا به گردن خواهد پوشاند؛ و بالهایش را باز کرده، سرتاسر سرزمین تو را، ای عِمانوئیل، پر خواهد ساخت.»
9 ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.
ای قومها هر کاری از دستتان برمی‌آید بکنید، ولی بدانید که موفق نخواهید شد و شکست خواهید خورد. ای همهٔ دشمنان گوش دهید: برای جنگ آماده شوید، ولی بدانید که پیروز نخواهید شد.
10 ೧೦ ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.
با هم مشورت کنید و نقشهٔ حمله را بکشید، اما بدانید که نقشهٔ شما عملی نخواهد شد، زیرا خدا با ما است!
11 ೧೧ ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು, ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗೆಂದನು,
خداوند به تأکید به من امر کرد که راه مردم یهودا را در پیش نگیرم، و فرمود:
12 ೧೨ “ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.
«هر آنچه این قوم توطئه می‌نامند، شما نپذیرید، و از آنچه می‌ترسند شما از آن بیم و هراس نداشته باشید.
13 ೧೩ ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ.
بدانید که خداوند لشکرهای آسمان، مقدّس است و تنها از او باید بترسید.
14 ೧೪ ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು.
او برای شما پناهگاه است. اما برای یهودا و اسرائیل سنگی خواهد بود که سبب لغزش شود و صخره‌ای که باعث سقوط گردد. او برای ساکنان اورشلیم دامی پنهان خواهد بود.
15 ೧೫ ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗಪಡುವರು, ಬಲೆಗೆ ಸಿಕ್ಕಿ ವಶವಾಗುವರು.”
بسیاری از آنان لغزیده، خواهند افتاد و خرد خواهند شد و بسیاری دیگر در دام افتاده، گرفتار خواهند گردید.»
16 ೧೬ ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.
ای شاگردان من، شما باید کلام و دستورهایی را که خدا به من داده است مهر و موم کرده، حفظ کنید.
17 ೧೭ ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.
من منتظرم تا خداوند ما را یاری کند، هر چند اکنون خود را از قوم خویش پنهان کرده است. بر او امیدوار خواهم بود.
18 ೧೮ ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.
من و فرزندانی که خداوند به من داده است، از طرف خداوند لشکرهای آسمان که در اورشلیم ساکن است برای اسرائیل علامت و نشانه هستیم.
19 ೧೯ “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?
وقتی مردم به شما می‌گویند که با فالگیران و جادوگرانی که زیر لب ورد می‌خوانند مشورت کنید، شما در جواب بگویید: «آیا از مردگان دربارهٔ زندگان مشورت بخواهیم؟ چرا از خدای خود مشورت نخواهیم؟»
20 ೨೦ ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.
مردم موافق کلام و دستورهای خدا سخن نمی‌گویند و کلامشان عاری از نور حقیقت است.
21 ೨೧ ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.
ایشان در تنگی و گرسنگی قرار خواهند گرفت و آواره خواهند شد. از شدت گرسنگی و پریشانی پادشاه و خدای خود را نفرین خواهند کرد. به آسمان خواهند نگریست
22 ೨೨ ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.
و به زمین نگاه خواهند کرد، ولی چیزی جز تنگی و پریشانی و تاریکی نخواهند دید، و به سوی تاریکی محض رانده خواهند شد.

< ಯೆಶಾಯನು 8 >