< ಯೆಶಾಯನು 9 >
1 ೧ ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು, ಆತನು ಅವಮಾನಕ್ಕೆ ಗುರಿಮಾಡಿದನು. ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ.
১যন্ত্রণাত থকা জনীৰ পৰা আন্ধাৰ দূৰ হ’ব, তেওঁ প্রথম অৱস্থাত জবূলূন আৰু নপ্তালী দেশক অপদস্থ কৰিছিল, কিন্তু পৰবর্তী সময়ত সমুদ্ৰলৈ যোৱা পথ, যৰ্দ্দনৰ সিপাৰে, গালীল দেশৰ লোকসকলক গৌৰৱাম্বিত কৰিব।
2 ೨ ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.
২আন্ধাৰত ফুৰা সকলে মহাজ্যোতি দেখিলে; মৃত্যু ছাঁয়াৰ দেশত বাস কৰা সকলৰ ওপৰত দীপ্তি প্ৰকাশিত হ’ল।
3 ೩ ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.
৩তুমি সেই দেশৰ লোক বহু সংখ্যক কৰিলা, তুমি তেওঁলোকৰ আনন্দ বৃদ্ধি কৰিলা; শস্য দোৱাৰ সময়ত আনন্দ কৰাৰ দৰে, আৰু লুটদ্ৰব্য ভাগ-বাঁটি লোৱাত আনন্দ কৰা দৰে, তেওঁলোকে তোমাৰ সাক্ষাতে আনন্দ কৰে।
4 ೪ ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.
৪কাৰণ তুমি মিদিয়নৰ সময়ত কৰা দৰে, তেওঁৰ ভাৰ স্বৰূপ যুৱলি, তেওঁৰ কান্ধৰ কানমাৰি, আৰু তেওঁৰ উপদ্ৰৱকাৰী দণ্ড ভাঙি পেলালা।
5 ೫ ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
৫কাৰণ ঘোৰ যুদ্ধত সুসজ্জিত থকা সৈন্যৰ সকলো প্ৰকাৰৰ সাজ, আৰু তেজেৰে লেটিপেটি হোৱা পোচাক, জুইৰ বাবে ইন্ধনৰ দৰে পোৰা যাব।
6 ೬ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.
৬কাৰণ আমালৈ এটি লৰা জন্মিল, আমালৈ এটি পুত্ৰ দান কৰা হ’ল; আৰু তেওঁৰ কান্ধত শাসন ভাৰ অৰ্পিত হ’ব, আৰু তেওঁ আশ্চৰ্য পৰামৰ্শদাতা, পৰাক্ৰমী ঈশ্বৰ, অন্তকালস্থায়ী পিতৃ, আৰু শান্তিৰাজ নামে প্ৰখ্যাত হ’ব।
7 ೭ ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
৭দায়ুদৰ সিংহাসন আৰু তেওঁৰ ৰাজ্যৰ ওপৰত শাসন কৰোঁতে তাক সুস্থিৰ আৰু দৃঢ় কৰিবলৈ, এই সময়ৰ পৰা চিৰকাললৈকে ন্যায় আৰু ধাৰ্মিকতাৰ সৈতে ৰাজ্যত তেওঁৰ শাসন আৰু শান্তি বৃদ্ধি হৈ থাকিব। বাহিনীসকলৰ যিহোৱাৰ আগ্রহে ইয়াক সিদ্ধ কৰিব।
8 ೮ ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.
৮প্ৰভুৱে যাকোবৰ বিৰুদ্ধে এটি বাক্য পঠালে; সেয়ে ইস্ৰায়েলৰ ওপৰত পৰিল,
9 ೯ ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ,
৯গর্ব্ব আৰু অহংকাৰী হৃদয়েৰে কথা কোৱা জনক সকলো লোকে জানে, এনেকি ইফ্ৰয়িম আৰু চমৰিয়াৰ লোকসকলেও জানে;
10 ೧೦ “ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.
১০“ইটাবোৰ খহি পৰিল, কিন্তু আমি কটা শিলেৰে পুনৰ নির্মাণ কৰিম; ডিমৰু গছবোৰ কটা হ’ল, কিন্তু আমি তাৰ সলনি এৰচ কাঠ লগাম।”
11 ೧೧ ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ.
১১এই হেতুকে যিহোৱাই তেওঁৰ বিৰুদ্ধে ৰচীন, আৰু তেওঁৰ বিৰোধী সকলক উন্নত কৰিব, আৰু তেওঁৰ শত্রুবোৰক উত্তেজিত কৰিব।
12 ೧೨ ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
১২পূব দিশত অৰাম, আৰু পশ্চিম দিশত পলেষ্টীয়াসকল, তেওঁলোকে মুখ মেলি ইস্ৰায়েলক গ্ৰাস কৰিব। কাৰণ তেওঁলোকৰ ক্রোধ যিহোৱাই ক্ষান্ত নকৰিব; কিন্তু আঘাত কৰিবলৈ তেওঁলোকৰ হাত উদ্যত হৈ থাকিব।
13 ೧೩ ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.
১৩তথাপিও যিহোৱাই যিসকল লোকক প্ৰহাৰ কৰিব সেই লোকসকল তেওঁলৈ নুঘুৰিব, নাইবা তেওঁলোকে বাহিনীসকলৰ যিহোৱাক নিবিচাৰিব।
14 ೧೪ ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.
১৪এই হেতুকে যিহোৱাই একে দিনাই ইস্ৰায়েলৰ আৰম্ভণীৰ পৰা শেষলৈকে, খাজুৰ পাত আৰু খাগৰি কাটি পেলাব।
15 ೧೫ ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.
১৫মুখ্য আৰু সম্ভ্রান্ত লোকসকল নেতৃত্বত থাকিব; আৰু মিছা শিক্ষা দিওঁতা ভাববাদীসকল শেষত থাকিব।
16 ೧೬ ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.
১৬নেতৃত দিয়া লোকসকলে তেওঁলোকক বিপথে নিয়ে, আৰু তেওঁলোকৰ দ্বাৰাই চালিত হোৱা লোকসকল বিনষ্ট হ’ব।
17 ೧೭ ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
১৭প্ৰভুৱে সেই কাৰণে তেওঁলোকৰ যুবক সকলৰ ওপৰত আনন্দ নকৰিব, আৰু তেওঁলোকৰ পিতৃহীন আৰু বিধবাসকলক দয়া নকৰিব; কিয়নো তেওঁলোকৰ প্ৰত্যেক জনেই অধৰ্মি আৰু কুকৰ্মী, আৰু প্ৰত্যেকেই জ্ঞানহীন কথা কয়। এই সকলোৰ বাবে তেওঁৰ ক্ৰোধ শান্ত নহ’ব; কিন্তু তেওঁৰ হাত দণ্ড দিবলৈ উদ্যত হৈ থাকিব।
18 ೧೮ ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.
১৮দুষ্টতা জুইৰ দৰে পুৰিব, ই কাঁইটীয়া বননী আৰু কাঁইটীয়া হাবি গ্রাস কৰিব; এনে কি, ই ঘন হাবিও পুৰিব, যাৰ ধোঁৱা স্তম্ভ হৈ ওপৰলৈ উঠিব।
19 ೧೯ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.
১৯বাহিনীসকলৰ যিহোৱাৰ ক্ৰোধত দেশ দগ্ধ হ’ল; আৰু লোকসকল জুইৰ ইন্ধন স্বৰূপ হ’ল; কোনো লোকে নিজৰ ভায়েকক ক্ষমা নকৰিব।
20 ೨೦ ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.
২০তেওঁলোকে সোঁ হাতেৰে মাংস টুকুৰা কৰিব, তথাপিও ভোকত থাকিব; তেওঁলোকে বাঁও হাতেৰে মাংস ভোজন কৰিব, কিন্তু সন্তুষ্ট নহ’ব; তেওঁলোক প্ৰতিজনে নিজৰ বাহুৰ মাংস খাব।
21 ೨೧ ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
২১মনচিয়ে ইফ্ৰয়িমক, আৰু ইফ্ৰয়িমে মনচিক ধ্বংস কৰিব, আৰু দুয়ো একেলগে যিহূদাক আক্ৰমণ কৰিব। এই সকলোৰ কাৰণে যিহোৱাৰ ক্ৰোধ শান্ত নহ’ব; কিন্তু দণ্ড দিবৰ বাবে তেওঁৰ হাত উদ্যত হৈ থাকিব।