< ಯೆಶಾಯನು 9 >

1 ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು, ಆತನು ಅವಮಾನಕ್ಕೆ ಗುರಿಮಾಡಿದನು. ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ.
Бо не буде темноти для того, хто ути́скуваний. Перша пора злегкова́жила була край Завуло́нів та край Нефтали́мів, а остання просла́вить дорогу примо́рську, другий бік Йорда́ну, окру́гу поганів.
2 ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.
Наро́д, який в те́мряві ходить, Світло велике побачить, і над тими, хто сидить у краю тіні смерти, Світло зася́є над ними!
3 ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.
Ти помно́жиш наро́д цей, Ти збільши́ш йому радість. Вони перед лицем Твоїм будуть радіти, як радіють в жнива́, як ті́шаться в час, коли ділять здо́бич!
4 ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.
Бо злама́в Ти ярмо́ тягару́ його, і ки́я з раме́на його, жезло його пригноби́теля, як за днів Мадія́ма.
5 ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
Усякий бо чобіт військо́вий, що гу́пає гу́чно, та оде́жа, попля́млена кров'ю, — стане все це поже́жею, за ї́жу огню!
6 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.
Бо Дитя народи́лося нам, да́ний нам Син, і вла́да на раме́нах Його, і кликнуть ім'я́ Йому: Ди́вний Пора́дник, Бог сильний, Отець вічности, Князь миру.
7 ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
Без кінця́ буде мно́житися панува́ння та мир на троні Давида й у ца́рстві його, щоб поставити міцно його й щоб підпе́рти його правосу́ддям та правдою відтепе́р й аж навіки, — ре́вність Господа Савао́та це зробить!
8 ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.
Проти Якова слово послав був Госпо́дь, а впало воно на Ізра́їля,
9 ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ,
і пізна́є наро́д, увесь він, Єфре́м та мешканець Самарі́ї, що говорять з пихо́ю й наду́тістю се́рця:
10 ೧೦ “ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.
„Попа́дали цегли, а ми побуду́ємо з ка́меня те́саного, сікомо́ри позру́бувано, — та замінимо їх ке́драми!“
11 ೧೧ ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ.
Та над ним Господь зміцнив противників Реціна, а його ворогів нацькува́в:
12 ೧೨ ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
Арама попе́реду, а филисти́млян поза́ду, і поже́рли Ізраїля ці́лою па́щею. При цьо́му всьому не відвернувсь Його гнів, і ви́тягнена ще рука Його!
13 ೧೩ ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.
Та наро́д не зверну́вся до Того, Хто вра́зив його, і не шукали Господа Саваота.
14 ೧೪ ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.
Тому́ то Господь відсік від Ізраїля го́лову й хвіст, пальму й очерети́ну за одного дня.
15 ೧೫ ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.
Стари́й та поважа́ний — це та голова, а пророк, що навчає неправди, це хвіст.
16 ೧೬ ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.
І сталося, що повода́тарі цього наро́ду зроби́лися зві́дниками, і гинуть прова́джені ними.
17 ೧೭ ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
Тому́ то його юнака́ми радіти не буде Госпо́дь, а до сирі́т його й його вдів милосердя не матиме, бо кожен безбожний й злочи́нець, і зло́бне всі уста говорять. При цьому всьому не відверну́всь Його гнів, і ви́тягнена ще рука Його!
18 ೧೮ ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.
Бо зло́ба горить, як огонь, пожира́є терни́ну й будя́ччя, і пала́є по за́пустах лісу, і кру́тяться вверх стовпи диму.
19 ೧೯ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.
Від лютости Господа Саваота земля загори́ться, і стане наро́д, як пожи́ва огню, і не пощади́ть жоден брата свого́!
20 ೨೦ ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.
І різати буде право́руч, та бу́де голодний, і же́ртиме зліва, але не наси́титься, кожен же́ртиме тіло раме́на свого́:
21 ೨೧ ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
Манасі́я — Єфре́ма, а Єфре́м — Манасі́ю, ра́зом обоє на Юду. При цьому всьому не відверну́всь Його гнів, і ви́тягнена ще рука Його!

< ಯೆಶಾಯನು 9 >