< ಯೆಶಾಯನು 1 >
1 ೧ ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.
Утвара Исаије сина Амосовог, коју виде за Јуду и за Јерусалим за времена Озије, Јоатама, Ахаза и Језекије, царева Јудиних.
2 ೨ ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
Чујте, небеса, и слушај, земљо; јер Господ говори: Синове одгојих и подигох, а они се окренуше од мене.
3 ೩ ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.
Во познаје господара свог и магарац јасле господара свог, а Израиљ не познаје, народ мој не разуме.
4 ೪ ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
Да грешног народа! Народа огрезлог у безакоњу! Семена зликовачког, синова покварених! Оставише Господа, презреше Свеца Израиљевог, одступише натраг.
5 ೫ ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
Што бисте још били бијени кад се све више одмећете? Сва је глава болесна и све срце изнемогло.
6 ೬ ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.
Од пете до главе нема ништа здраво, него убој и модрице и ране гнојаве, ни исцеђене ни завијене ни уљем заблажене.
7 ೭ ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.
Земља је ваша пуста, градови ваши огњем попаљени; ваше њиве једу туђини на ваше очи, и пустош је као што опустошавају туђини.
8 ೮ ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.
И оста кћи сионска као колиба у винограду, као сеница у градини од краставаца, као град опкољен.
9 ೯ ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
Да нам Господ над војскама није оставио мало остатка, били бисмо као Содом, изједначили бисмо се с Гомором.
10 ೧೦ ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.
Чујте реч Господњу, кнезови содомски, послушајте закон Бога нашег, народе гоморски!
11 ೧೧ ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
Шта ће ми мноштво жртава ваших? Вели Господ. Сит сам жртава паљеница од овнова и претилине од гојене стоке, и не марим за крв јунчију и јагњећу и јарећу.
12 ೧೨ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?
Кад долазите да се покажете преда мном, ко иште то од вас, да газите по мом трему?
13 ೧೩ ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
Не приносите више жртве залудне; на кад гадим се; а о младинама и суботама и о сазивању скупштине не могу подносити безакоња и светковине.
14 ೧೪ ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.
На младине ваше и на празнике ваше мрзи душа моја, досадише ми, додија ми подносити.
15 ೧೫ ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
Зато кад ширите руке своје, заклањам очи своје од вас; и кад множите молитве, не слушам; руке су ваше пуне крви.
16 ೧೬ ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
Умијте се, очистите се, уклоните злоћу дела својих испред очију мојих, престаните зло чинити.
17 ೧೭ ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
Учите се добро чинити, тражите правду, исправљајте потлаченог, дајите правицу сиротој, браните удовицу.
18 ೧೮ “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
Тада дођите, вели Господ, па ћемо се судити: ако греси ваши буду као скерлет, постаће бели као снег; ако буду црвени као црвац, постаће као вуна.
19 ೧೯ ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.
Ако хоћете слушати, добро земаљско јешћете.
20 ೨೦ ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.
Ако ли нећете, него будете непокорни, мач ће вас појести, јер уста Господња рекоше.
21 ೨೧ ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
Како поста курва верни град? Пун беше правице, правда наставаше у њему, а сада крвници.
22 ೨೨ ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು.
Сребро твоје поста троска, вино твоје помеша се с водом.
23 ೨೩ ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
Кнезови су твоји одметници и другови лупежима; сваки милује мито и иде за даровима; сиротој не дају правице, и парница удовичка не долази пред њих.
24 ೨೪ ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.
Зато говори Господ, Господ над војскама, силни Израиљев: Аха! Разрачунаћу се са противницима својим, и осветићу се непријатељима својим.
25 ೨೫ ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.
И окренућу руку своју на те, и сажећи ћу троске твоје да те пречистим, и уклонићу све олово твоје.
26 ೨೬ ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”
И поставићу ти опет судије као пре, и саветнике као испочетка; тада ћеш се звати град праведни, град верни.
27 ೨೭ ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.
Сион ће се откупити судом, и правдом они који се у њ врате.
28 ೨೮ ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.
А одметници и грешници сви ће се сатрти, и који остављају Господа, изгинуће.
29 ೨೯ “ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
Јер ћете се посрамити од гајева које желесте, и застидети се од вртова које изабрасте.
30 ೩೦ ಎಲೆ ಒಣಗಿದ ಏಲಾ ಮರದಂತೆಯೂ, ನೀರಿಲ್ಲದ ವನದ ಹಾಗೂ ಇರುವಿರಿ.
Јер ћете бити као храст коме опада лишће и као врт у коме нема воде.
31 ೩೧ ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”
И биће јунак као кучине и дело његово као искра, и обоје ће се запалити, и неће бити никога да угаси.