< ಯಾಕೋಬನು ಬರೆದ ಪತ್ರಿಕೆ 1 >
1 ೧ ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”
U Yakobo, usontezi wa Ngulubhi nu wa ngosi uYesu Kilisti, huvikholo kumi na mbili vye vili nu gabhanyo imbalamuha.
2 ೨ ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.
Mubhazye aje huhusungwe hani bha holo bhau lemshila mmanyimba gogonti,
3 ೩ ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
lwe mwamanya aje hulwitiho lwinu mujelwa hubhapela ugulilizyo.
4 ೪ ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.
Muleshe ugulilizyo bhukalisye imbombo yakwe, huje mke mugomehau mgande apotwe hulyolyonti.
5 ೫ ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
Lelo nku muntu kati yuyahwanza ihekima alabhe hwa Nguluvhi, uwene afunyabila hubhajile bhoutobhebha hunabha ihekima.
6 ೬ ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.
Lelo labha hulwitiho, ugadi isaje ya saga abha ndeshe amawimbi munsumbi ahamvurundwi hahuntaga uhunuhu.
7 ೭ ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ.
Imanya umuntu unu asahasibhe aje Ungulubhi ayiposhela impta zyakwe;
8 ೮ ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.
umuntu iwimadala gabhili semwinza humadala gakwe gonti.
9 ೯ ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.
Umuntu umpina ahwanziwa huyitime hugorosu wakwe uwapamwanya,
10 ೧೦ ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
Umuda bhunuwo uholo untabhazi ahwishe hwakwe pipo ayiyepa ndeshe iua ilya mkodeni mgunda gwashila.
11 ೧೧ ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.
Isaaya lifuma ni lyoto lyahubhapemba na hwumisye amasole na maua gagwa nu winza wakwe bhufwa. Sheshinisho abhantu abhatabhazi bhamalishiwa ni mbombo zyabho.
12 ೧೨ ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.
Asayiwaje umuntu ula yajimbilila injelo, nkushelo ajimbilila injelo abhapate insushe iyi wumi. Yabhasubhizizye bhebhahugana Ungulubhi.
13 ೧೩ ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.
Umuntu wowonti sa hwanziwa ayanje la jelwa, “Ajelwe uhu lufuma hwa Ngulubhi pipo Ungulubhi sajelwa ni mbibhi antele Ungulubhi sahujijala Umuntu wowonti.
14 ೧೪ ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
Umuntu wouti ajelwa ni nyonywo zyakwe imbibhi zyezihusushili zya afume apatali.
15 ೧೫ ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.
Nkushe afume hunyonywo iyi mbibhi, abhusya ivyanda vyi mbibhi, zipapwa imbibhi nkezyagoma wuhwinza ufwe.
16 ೧೬ ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.
Bhaholo bhani bhaganwa, musahagobelwe.
17 ೧೭ ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
Impesya ye nyinza na impesya ya fumule humwanya, ahwishe pansi afume hwa Daada uwilukhozyo.
18 ೧೮ ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
Ungulubhi ahasaluye hutipele ati uwomi hwi zwi ilyi lyolinke tibhe ndeshe upapwo uwahwande kati yi vintu vyakwe vyabhumbile.
19 ೧೯ ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
Muminye izi, bhaholo bhani bhaganwa. Umuntu wonti ahwanziwa abhe mpupusu wa hwa nvwe asahabhe mpupusu wayanje,
20 ೨೦ ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
pipo inkumi ya muntu sibhomba aminza aga Ngulubhi.
21 ೨೧ ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.
Ishi mubhishe apatali uchafu wi dhambi mu bhibhi wonti we bhuli apatali ponti na hwa hwishe, mliposhele izwi lyalitotuwe muhati yinyu lyelilinuuwezo uwahwo kole amoyo ginyu.
22 ೨೨ ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
Mulyitishe izwi msahalyanvwe lwene mugobelwe mumoyo ginyu.
23 ೨೩ ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು.
Huje wowonti yahulyimvwa izwi sahulibhombela imbombo alingana nu muntu yahuyenya humaso gakwe yuyo mwigalasi.
24 ೨೪ ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.
Ahuyenya amaso gakwe asoigola, pamandi hadodo ahwiwa shalingana.
25 ೨೫ ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.
Shi umuntu yahuyenya shinza indajizyo zyiwawushe abhalilila ahwitihse se hwahuje ntejelezi, yahwiwa, umuntu umaisaiwa nahu yibhomba.
26 ೨೬ ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.
Nkumuntu wowonti abhasibhe yuyo aje muntu wa shibhanza ulumili lwakwe ahugobela umwoyo wakwe ni shibhanza shakwe shilwene.
27 ೨೭ ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.
Ishibhanza ishinza shesashinanjiha hwa Ngulubhi wetu nu Daada shimishi hubhavwe a yatima na huyidime mwimmwinu bhibhi wunsi ini.