< ಯಾಕೋಬನು ಬರೆದ ಪತ್ರಿಕೆ 3 >

1 ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.
Брати мої, хай не буде [серед вас] багато вчителів, бо ви знаєте, що ми отримаємо суворіший суд.
2 ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
Адже всі ми часто спотикаємося. Якщо хтось не спотикається в слові, це людина досконала, спроможна приборкати все тіло.
3 ಕುದುರೆಗಳು ನಮ್ಮ ಇಚ್ಚೆಯಂತೆ ನಡೆಯುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ.
Ось і коням ми вкладаємо вудила в рот, щоб нам корилися, та керуємо усім [їхнім] тілом.
4 ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ.
Подібно й з кораблями: хоч які великі й гнані сильними вітрами, але скеровуються малим кермом, куди бажає керманич.
5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ.
Так само і язик: маленький орган та великими [речами] вихваляється. Ось який малий вогонь, а запалює такий великий ліс.
6 ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ. (Geenna g1067)
Язик також є вогнем. Язик – це світ неправди, встановлений між нашими органами. [Він] опоганює все тіло й запалює коло життя, [сам] підпалюючись від Геєни. (Geenna g1067)
7 ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು.
Адже кожен вид звірів і птахів, плазунів і морських тварин може бути приборканий і приборкується людиною.
8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ.
А язика ніхто з людей приборкати не може: він – невгамовне зло, повне смертоносної отрути.
9 ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
Ним благословляємо Господа й Отця і ним же проклинаємо людей, створених за Божою подобою.
10 ೧೦ ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,
З того ж рота виходить благословення й прокляття. Брати мої, не годиться, щоб так воно було.
11 ೧೧ ಒಂದೇ ಬುಗ್ಗೆಯಿಂದ ಸಿಹಿ ನೀರು ಮತ್ತು ಕಹಿ ನೀರು ಎರಡು ಹೊರಡುವುದುಂಟೇ?
Хіба з одного джерела тече солодка й гірка вода?
12 ೧೨ ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ.
Брати мої, чи може смоковниця родити оливки, а виноградна лоза – смокви? Так само й солончак [не може] давати солодкої води.
13 ೧೩ ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
Хто є мудрий і досвідчений між вами? Нехай він покаже своєю гідною поведінкою, що його вчинки [зроблені] з лагідністю, [яку дає] мудрість.
14 ೧೪ ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
Якщо ж ви маєте у вашому серці гірку заздрість і суперництво, не вихваляйтеся й не брешіть проти істини.
15 ೧೫ ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು.
Це не та мудрість, яка сходить згори, а земна, плотська, бісівська.
16 ೧೬ ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.
Бо де є заздрість і суперництво, там безладдя й усяке зле діло.
17 ೧೭ ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.
А мудрість, [яка сходить] згори, насамперед чиста, потім мирна, лагідна, слухняна, повна милосердя й добрих плодів, неупереджена, нелицемірна.
18 ೧೮ ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.
Бо плід праведності сіється в мирі тими, хто творить мир.

< ಯಾಕೋಬನು ಬರೆದ ಪತ್ರಿಕೆ 3 >