< ಯಾಕೋಬನು ಬರೆದ ಪತ್ರಿಕೆ 4 >
1 ೧ ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ?
What is the cause of wars and fighting among you? is it not in your desires which are at war in your bodies?
2 ೨ ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.
You are burning with desire, and have not your desire, so you put men to death; you are full of envy, and you are not able to get your desire, so you are fighting and making war; you have not your desire, because you do not make request for it.
3 ೩ ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.
You make your request but you do not get it, because your request has been wrongly made, desiring the thing only so that you may make use of it for your pleasure.
4 ೪ ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.
O you who are false to God, do you not see that the friends of this world are not God's friends? Every man desiring to be a friend of this world makes himself a hater of God.
5 ೫ ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?
Or does it seem to you that it is for nothing that the holy Writings say, The spirit which God put into our hearts has a strong desire for us?
6 ೬ ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.
But he gives more grace. So that the Writings say, God is against the men of pride, but he gives grace to those who make themselves low before him.
7 ೭ ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.
For this cause be ruled by God; but make war on the Evil One and he will be put to flight before you.
8 ೮ ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.
Come near to God and he will come near to you. Make your hands clean, you evil-doers; put away deceit from your hearts, you false in mind.
9 ೯ ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ.
Be troubled, with sorrow and weeping; let your laughing be turned to sorrow and your joy to grief.
10 ೧೦ ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.
Make yourselves low in the eyes of the Lord and you will be lifted up by him.
11 ೧೧ ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.
Do not say evil against one another, my brothers. He who says evil against his brother or makes himself his brother's judge, says evil against the law and is judging the law: and in judging the law you become, not a doer of the law but a judge.
12 ೧೨ ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ ನಾಶಮಾಡುವುದಕ್ಕೂ ಸಮರ್ಥನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?
There is only one judge and law-giver, even he who has the power of salvation and of destruction; but who are you to be your neighbour's judge?
13 ೧೩ “ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.
How foolish it is to say, Today or tomorrow we will go into this town, and be there for a year and do business there and get wealth:
14 ೧೪ ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.
When you are not certain what will take place tomorrow. What is your life? It is a mist, which is seen for a little time and then is gone.
15 ೧೫ ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.
But the right thing to say would be, If it is the Lord's pleasure and if we are still living, we will do this and that.
16 ೧೬ ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ.
But now you go on glorying in your pride: and all such glorying is evil.
17 ೧೭ ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.
The man who has knowledge of how to do good and does not do it, to him it is sin.