< ಯಾಕೋಬನು ಬರೆದ ಪತ್ರಿಕೆ 4 >

1 ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ?
第四項 惡慾及び種々の缺點に對する意見。 汝等の中に於る軍と争とは何處よりか來れる、汝等が五體の中に戰へる其慾よりに非ずや。
2 ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.
汝等が貪りて得ず、殺し妬みて取る事能はず、争ひ戰ひて得る事なきは願はざるが故なり。
3 ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.
願ひて受けざるは、慾の為に費さんとして惡く願ふが故なり。
4 ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.
姦淫者よ、此世に對する愛情は神の仇となるを知らずや、然れば誰にもあれ、此世の友たらんとする人は皆神の仇となる。
5 ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?
汝等聖書の云へる事を徒なりと思ふか、神は汝等に宿らせ給ひし霊を妬むまでに望み給ふ、
6 ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.
尚大いなる恩寵を賜へばこそ、「神は傲慢なる者に逆らひ、謙遜なる者に恩寵を賜ふ」とは云へるなれ。
7 ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.
此故に汝等神に歸服して惡魔に逆らへ、然らば惡魔は汝等より退くべし。
8 ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.
神に近づき奉れ、然らば神は汝等に近づき給はん。罪人よ、手を潔めよ、二心の者よ、心を清らかにせよ。
9 ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ.
痛悔して歎き且泣け、汝等の笑は歎となり、汝等の喜は悲と成れ、
10 ೧೦ ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.
主の御前に謙れ、然らば主汝等を高め給はん。
11 ೧೧ ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.
兄弟等よ、相譏る事勿れ、兄弟を譏る者或は兄弟を是非するものは、律法を譏り律法を是非する者なり。若律法を是非せば、是律法の履行者に非ずして、其審判者たるなり。
12 ೧೨ ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ ನಾಶಮಾಡುವುದಕ್ಕೂ ಸಮರ್ಥನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?
抑救ひ得べく亡ぼし得べき立法者審判者は唯一にて在す、
13 ೧೩ “ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.
然るに汝誰なれば近き者をば是非するぞ。然て今、我等今日明日何某の町に往き、一年の間其處に留り、商売して利を得んと言ふ者よ、
14 ೧೪ ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.
汝等は明日何事のあるべきかを知らざるに非ずや。
15 ೧೫ ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.
蓋汝等の生命は何ぞや、暫く見ゆる靄にして、終には消失するものなり。汝等宜しく之に代へて、我等若主の思召ならば又は生くるならば、此彼を為さんと言ふべし。
16 ೧೬ ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ.
然るに汝等は今驕りて自ら誇れり、斯の如き誇は総て惡事なり。
17 ೧೭ ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.
故に人、善の行ふべきを知りて之を行はざれば罪と成るなり。

< ಯಾಕೋಬನು ಬರೆದ ಪತ್ರಿಕೆ 4 >