< ಯೆರೆಮೀಯನು 1 >
1 ೧ ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.
१हिल्किय्याह का पुत्र यिर्मयाह जो बिन्यामीन क्षेत्र के अनातोत में रहनेवाले याजकों में से था, उसी के ये वचन हैं।
2 ೨ ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.
२यहोवा का वचन उसके पास आमोन के पुत्र यहूदा के राजा योशिय्याह के राज्य के दिनों में उसके राज्य के तेरहवें वर्ष में पहुँचा।
3 ೩ ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.
३इसके बाद योशिय्याह के पुत्र यहूदा के राजा यहोयाकीम के राज्य के दिनों में, और योशिय्याह के पुत्र यहूदा के राजा सिदकिय्याह के राज्य के ग्यारहवें वर्ष के अन्त तक भी प्रगट होता रहा जबकि उसी वर्ष के पाँचवें महीने में यरूशलेम के निवासी बँधुआई में न चले गए।
4 ೪ ಕರ್ತನಾದ ಯೆಹೋವನು ನನಗೆ,
४तब यहोवा का यह वचन मेरे पास पहुँचा,
5 ೫ “ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.
५“गर्भ में रचने से पहले ही मैंने तुझ पर चित्त लगाया, और उत्पन्न होने से पहले ही मैंने तुझे अभिषेक किया; मैंने तुझे जातियों का भविष्यद्वक्ता ठहराया।”
6 ೬ ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.
६तब मैंने कहा, “हाय, प्रभु यहोवा! देख, मैं तो बोलना भी नहीं जानता, क्योंकि मैं कम उम्र का हूँ।”
7 ೭ ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
७परन्तु यहोवा ने मुझसे कहा, “मत कह कि मैं कम उम्र का हूँ; क्योंकि जिस किसी के पास मैं तुझे भेजूँ वहाँ तू जाएगा, और जो कुछ मैं तुझे आज्ञा दूँ वही तू कहेगा।
8 ೮ ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.
८तू उनसे भयभीत न होना, क्योंकि तुझे छुड़ाने के लिये मैं तेरे साथ हूँ, यहोवा की यही वाणी है।”
9 ೯ ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;
९तब यहोवा ने हाथ बढ़ाकर मेरे मुँह को छुआ; और यहोवा ने मुझसे कहा, “देख, मैंने अपने वचन तेरे मुँह में डाल दिये हैं।
10 ೧೦ ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.
१०“सुन, मैंने आज के दिन तुझे जातियों और राज्यों पर ठहराया है; उन्हें गिराने और ढा देने के लिये, नाश करने और काट डालने के लिये, उन्हें बनाने और रोपने के लिये।”
11 ೧೧ ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.
११यहोवा का यह वचन मेरे पास पहुँचा, “हे यिर्मयाह, तुझे क्या दिखाई पड़ता है?” मैंने कहा, “मुझे बादाम की एक टहनी दिखाई देती है।”
12 ೧೨ ಆಗ ಯೆಹೋವನು ನನಗೆ, “ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೋ” ಎಂಬುದಾಗಿ ಹೇಳಿದನು.
१२तब यहोवा ने मुझसे कहा, “तुझे ठीक दिखाई पड़ता है, क्योंकि मैं अपने वचन को पूरा करने के लिये जागृत हूँ।”
13 ೧೩ ಎರಡನೆಯ ಬಾರಿ, “ನೀನು ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, “ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ” ಅಂದೆನು.
१३फिर यहोवा का वचन दूसरी बार मेरे पास पहुँचा, और उसने पूछा, “तुझे क्या दिखाई देता है?” मैंने कहा, “मुझे उबलता हुआ एक हण्डा दिखाई देता है जिसका मुँह उत्तर दिशा की ओर से है।”
14 ೧೪ ಆಗ ಯೆಹೋವನು ನನಗೆ, “ಈ ದೇಶದ ನಿವಾಸಿಗಳೆಲ್ಲರ ಮೇಲೆ ಉತ್ತರ ದಿಕ್ಕಿನಿಂದ ಕೇಡು ಉಕ್ಕಿ ಬರುವುದು.
१४तब यहोवा ने मुझसे कहा, “इस देश के सब रहनेवालों पर उत्तर दिशा से विपत्ति आ पड़ेगी।
15 ೧೫ ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.
१५यहोवा की यह वाणी है, मैं उत्तर दिशा के राज्यों और कुलों को बुलाऊँगा; और वे आकर यरूशलेम के फाटकों में और उसके चारों ओर की शहरपनाह, और यहूदा के और सब नगरों के सामने अपना-अपना सिंहासन लगाएँगे।
16 ೧೬ ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.
१६उनकी सारी बुराई के कारण मैं उन पर दण्ड की आज्ञा दूँगा; क्योंकि उन्होंने मुझे त्याग कर दूसरे देवताओं के लिये धूप जलाया और अपनी बनाई हुई वस्तुओं को दण्डवत् किया है।
17 ೧೭ ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.
१७इसलिए तू अपनी कमर कसकर उठ; और जो कुछ कहने की मैं तुझे आज्ञा दूँ वही उनसे कह। तू उनके मुख को देखकर न घबराना, ऐसा न हो कि मैं तुझे उनके सामने घबरा दूँ।
18 ೧೮ ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.
१८क्योंकि सुन, मैंने आज तुझे इस सारे देश और यहूदा के राजाओं, हाकिमों, और याजकों और साधारण लोगों के विरुद्ध गढ़वाला नगर, और लोहे का खम्भा, और पीतल की शहरपनाह बनाया है।
19 ೧೯ ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.
१९वे तुझ से लड़ेंगे तो सही, परन्तु तुझ पर प्रबल न होंगे, क्योंकि बचाने के लिये मैं तेरे साथ हूँ, यहोवा की यही वाणी है।”