< ಯೆರೆಮೀಯನು 11 >

1 ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
הַדָּבָר֙ אֲשֶׁ֣ר הָיָ֣ה אֶֽל־יִרְמְיָ֔הוּ מֵאֵ֥ת יְהוָ֖ה לֵאמֹֽר׃
2 “ಈ ನಿಬಂಧನವಚನಗಳನ್ನು ಕೇಳಿ ಯೆಹೂದ್ಯರಿಗೂ ಹಾಗೂ ಯೆರೂಸಲೇಮಿನ ನಿವಾಸಿಗಳಿಗೂ,
שִׁמְע֕וּ אֶת־דִּבְרֵ֖י הַבְּרִ֣ית הַזֹּ֑את וְדִבַּרְתָּם֙ אֶל־אִ֣ישׁ יְהוּדָ֔ה וְעַל־יֹשְׁבֵ֖י יְרוּשָׁלָֽ͏ִם׃
3 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.
וְאָמַרְתָּ֣ אֲלֵיהֶ֔ם כֹּֽה־אָמַ֥ר יְהוָ֖ה אֱלֹהֵ֣י יִשְׂרָאֵ֑ל אָר֣וּר הָאִ֔ישׁ אֲשֶׁר֙ לֹ֣א יִשְׁמַ֔ע אֶת־דִּבְרֵ֖י הַבְּרִ֥ית הַזֹּֽאת׃
4 ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.
אֲשֶׁ֣ר צִוִּ֣יתִי אֶת־אֲבֹֽותֵיכֶ֡ם בְּיֹ֣ום הֹוצִיאִֽי־אֹותָ֣ם מֵאֶֽרֶץ־מִצְרַיִם֩ מִכּ֨וּר הַבַּרְזֶ֜ל לֵאמֹ֗ר שִׁמְע֤וּ בְקֹולִי֙ וַעֲשִׂיתֶ֣ם אֹותָ֔ם כְּכֹ֥ל אֲשֶׁר־אֲצַוֶּ֖ה אֶתְכֶ֑ם וִהְיִ֤יתֶם לִי֙ לְעָ֔ם וְאָ֣נֹכִ֔י אֶהְיֶ֥ה לָכֶ֖ם לֵאלֹהִֽים׃
5 ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು.
לְמַעַן֩ הָקִ֨ים אֶת־הַשְּׁבוּעָ֜ה אֲשֶׁר־נִשְׁבַּ֣עְתִּי לַאֲבֹֽותֵיכֶ֗ם לָתֵ֤ת לָהֶם֙ אֶ֣רֶץ זָבַ֥ת חָלָ֛ב וּדְבַ֖שׁ כַּיֹּ֣ום הַזֶּ֑ה וָאַ֥עַן וָאֹמַ֖ר אָמֵ֥ן ׀ יְהוָֽה׃ ס
6 ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.
וַיֹּ֤אמֶר יְהוָה֙ אֵלַ֔י קְרָ֨א אֶת־כָּל־הַדְּבָרִ֤ים הָאֵ֙לֶּה֙ בְּעָרֵ֣י יְהוּדָ֔ה וּבְחֻצֹ֥ות יְרוּשָׁלַ֖͏ִם לֵאמֹ֑ר שִׁמְע֗וּ אֶת־דִּבְרֵי֙ הַבְּרִ֣ית הַזֹּ֔את וַעֲשִׂיתֶ֖ם אֹותָֽם׃
7 ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.
כִּי֩ הָעֵ֨ד הַעִדֹ֜תִי בַּאֲבֹֽותֵיכֶ֗ם בְּיֹום֩ הַעֲלֹותִ֨י אֹותָ֜ם מֵאֶ֤רֶץ מִצְרַ֙יִם֙ וְעַד־הַיֹּ֣ום הַזֶּ֔ה הַשְׁכֵּ֥ם וְהָעֵ֖ד לֵאמֹ֑ר שִׁמְע֖וּ בְּקֹולִֽי׃
8 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.
וְלֹ֤א שָֽׁמְעוּ֙ וְלֹֽא־הִטּ֣וּ אֶת־אָזְנָ֔ם וַיֵּ֣לְכ֔וּ אִ֕ישׁ בִּשְׁרִיר֖וּת לִבָּ֣ם הָרָ֑ע וָאָבִ֨יא עֲלֵיהֶ֜ם אֶֽת־כָּל־דִּבְרֵ֧י הַבְּרִית־הַזֹּ֛את אֲשֶׁר־צִוִּ֥יתִי לַעֲשֹׂ֖ות וְלֹ֥א עָשֽׂוּ׃ ס
9 ಯೆಹೋವನು ನನಗೆ, “ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
וַיֹּ֥אמֶר יְהוָ֖ה אֵלָ֑י נִֽמְצָא־קֶ֙שֶׁר֙ בְּאִ֣ישׁ יְהוּדָ֔ה וּבְיֹשְׁבֵ֖י יְרוּשָׁלָֽ͏ִם׃
10 ೧೦ ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.
שָׁ֩בוּ֩ עַל־עֲוֹנֹ֨ת אֲבֹותָ֜ם הָרִֽאשֹׁנִ֗ים אֲשֶׁ֤ר מֵֽאֲנוּ֙ לִשְׁמֹ֣ועַ אֶת־דְּבָרַ֔י וְהֵ֣מָּה הָלְכ֗וּ אַחֲרֵ֛י אֱלֹהִ֥ים אֲחֵרִ֖ים לְעָבְדָ֑ם הֵפֵ֤רוּ בֵֽית־יִשְׂרָאֵל֙ וּבֵ֣ית יְהוּדָ֔ה אֶת־בְּרִיתִ֕י אֲשֶׁ֥ר כָּרַ֖תִּי אֶת־אֲבֹותָֽם׃ ס
11 ೧೧ ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.
לָכֵ֗ן כֹּ֚ה אָמַ֣ר יְהוָ֔ה הִנְנִ֨י מֵבִ֤יא אֲלֵיהֶם֙ רָעָ֔ה אֲשֶׁ֥ר לֹֽא־יוּכְל֖וּ לָצֵ֣את מִמֶּ֑נָּה וְזָעֲק֣וּ אֵלַ֔י וְלֹ֥א אֶשְׁמַ֖ע אֲלֵיהֶֽם׃
12 ೧೨ ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’
וְהָֽלְכ֞וּ עָרֵ֣י יְהוּדָ֗ה וְיֹשְׁבֵי֙ יְר֣וּשָׁלַ֔͏ִם וְזָֽעֲקוּ֙ אֶל־הָ֣אֱלֹהִ֔ים אֲשֶׁ֛ר הֵ֥ם מְקַטְּרִ֖ים לָהֶ֑ם וְהֹושֵׁ֛עַ לֹֽא־יֹושִׁ֥יעוּ לָהֶ֖ם בְּעֵ֥ת רָעָתָֽם׃
13 ೧೩ ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.
כִּ֚י מִסְפַּ֣ר עָרֶ֔יךָ הָי֥וּ אֱלֹהֶ֖יךָ יְהוּדָ֑ה וּמִסְפַּ֞ר חֻצֹ֣ות יְרוּשָׁלַ֗͏ִם שַׂמְתֶּ֤ם מִזְבְּחֹות֙ לַבֹּ֔שֶׁת מִזְבְּחֹ֖ות לְקַטֵּ֥ר לַבָּֽעַל׃ ס
14 ೧೪ ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು.
וְאַתָּ֗ה אַל־תִּתְפַּלֵּל֙ בְּעַד־הָעָ֣ם הַזֶּ֔ה וְאַל־תִּשָּׂ֥א בַעֲדָ֖ם רִנָּ֣ה וּתְפִלָּ֑ה כִּ֣י אֵינֶ֣נִּי שֹׁמֵ֗עַ בְּעֵ֛ת קָרְאָ֥ם אֵלַ֖י בְּעַ֥ד רָעָתָֽם׃ ס
15 ೧೫ ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?
מֶ֣ה לִֽידִידִ֞י בְּבֵיתִ֗י עֲשֹׂותָ֤הּ הַֽמְזִמָּ֙תָה֙ הָֽרַבִּ֔ים וּבְשַׂר־קֹ֖דֶשׁ יַעַבְר֣וּ מֵֽעָלָ֑יִךְ כִּ֥י רָעָתֵ֖כִי אָ֥ז תַּעֲלֹֽזִי׃
16 ೧೬ ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.
זַ֤יִת רַֽעֲנָן֙ יְפֵ֣ה פְרִי־תֹ֔אַר קָרָ֥א יְהוָ֖ה שְׁמֵ֑ךְ לְקֹ֣ול ׀ הֲמוּלָּ֣ה גְדֹלָ֗ה הִצִּ֥ית אֵשׁ֙ עָלֶ֔יהָ וְרָע֖וּ דָּלִיֹּותָֽיו׃
17 ೧೭ ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.
וַיהוָ֤ה צְבָאֹות֙ הַנֹּוטֵ֣עַ אֹותָ֔ךְ דִּבֶּ֥ר עָלַ֖יִךְ רָעָ֑ה בִּ֠גְלַל רָעַ֨ת בֵּֽית־יִשְׂרָאֵ֜ל וּבֵ֣ית יְהוּדָ֗ה אֲשֶׁ֨ר עָשׂ֥וּ לָהֶ֛ם לְהַכְעִסֵ֖נִי לְקַטֵּ֥ר לַבָּֽעַל׃ ס
18 ೧೮ ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ.
וַֽיהוָ֥ה הֹֽודִיעַ֖נִי וָֽאֵדָ֑עָה אָ֖ז הִרְאִיתַ֥נִי מַעַלְלֵיהֶֽם׃
19 ೧೯ ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.
וַאֲנִ֕י כְּכֶ֥בֶשׂ אַלּ֖וּף יוּבַ֣ל לִטְבֹ֑וחַ וְלֹֽא־יָדַ֜עְתִּי כִּֽי־עָלַ֣י ׀ חָשְׁב֣וּ מַחֲשָׁבֹ֗ות נַשְׁחִ֨יתָה עֵ֤ץ בְּלַחְמֹו֙ וְנִכְרְתֶ֙נּוּ֙ מֵאֶ֣רֶץ חַיִּ֔ים וּשְׁמֹ֖ו לֹֽא־יִזָּכֵ֥ר עֹֽוד׃
20 ೨೦ ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.
וַֽיהוָ֤ה צְבָאֹות֙ שֹׁפֵ֣ט צֶ֔דֶק בֹּחֵ֥ן כְּלָיֹ֖ות וָלֵ֑ב אֶרְאֶ֤ה נִקְמָֽתְךָ֙ מֵהֶ֔ם כִּ֥י אֵלֶ֖יךָ גִּלִּ֥יתִי אֶת־רִיבִֽי׃ ס
21 ೨೧ ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.
לָכֵ֗ן כֹּֽה־אָמַ֤ר יְהוָה֙ עַל־אַנְשֵׁ֣י עֲנָתֹ֔ות הַֽמְבַקְשִׁ֥ים אֶֽת־נַפְשְׁךָ֖ לֵאמֹ֑ר לֹ֤א תִנָּבֵא֙ בְּשֵׁ֣ם יְהוָ֔ה וְלֹ֥א תָמ֖וּת בְּיָדֵֽנוּ׃ ס
22 ೨೨ ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.
לָכֵ֗ן כֹּ֤ה אָמַר֙ יְהוָ֣ה צְבָאֹ֔ות הִנְנִ֥י פֹקֵ֖ד עֲלֵיהֶ֑ם הַבַּֽחוּרִים֙ יָמֻ֣תוּ בַחֶ֔רֶב בְּנֵיהֶם֙ וּבְנֹ֣ותֵיהֶ֔ם יָמֻ֖תוּ בָּרָעָֽב׃
23 ೨೩ ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ.
וּשְׁאֵרִ֕ית לֹ֥א תִֽהְיֶ֖ה לָהֶ֑ם כִּֽי־אָבִ֥יא רָעָ֛ה אֶל־אַנְשֵׁ֥י עֲנָתֹ֖ות שְׁנַ֥ת פְּקֻדָּתָֽם׃ ס

< ಯೆರೆಮೀಯನು 11 >