< ಯೆರೆಮೀಯನು 13 >
1 ೧ ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು.
Sɛɛ na Awurade ka kyerɛɛ me: “Kɔ na kɔtɔ nwera abɔso bɔ wʼasen, nanso mma no nka nsu.”
2 ೨ ಆಗ ನಾನು ಯೆಹೋವನ ಮಾತಿನಂತೆ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡೆನು.
Enti metɔɔ abɔso sɛnea Awurade kyerɛe no, na mede bɔɔ mʼasen.
3 ೩ ಆ ಮೇಲೆ ಯೆಹೋವನ ಮಾತು ಎರಡನೆಯ ಬಾರಿ ನನಗೆ ಕೇಳಿ ಬಂತು.
Afei, Awurade asɛm baa me nkyɛn ne mprenu so se,
4 ೪ ಅವನು ನನಗೆ, “ನೀನು ಕೊಂಡುಕೊಂಡು ಸೊಂಟಕ್ಕೆ ಬಿಗಿದ ನಡುಕಟ್ಟನ್ನು ತೆಗೆದುಕೊಂಡು ಹೊರಟು ಯೂಫ್ರೆಟಿಸ್ ನದಿಗೆ ಹೋಗಿ, ಅದನ್ನು ಅಲ್ಲಿ ಬಂಡೆಯ ಸಂದಿನೊಳಗೆ ಬಚ್ಚಿಡು” ಎಂಬುದಾಗಿ ನುಡಿದನು.
“Fa abɔso a wotɔe a ɛbɔ wʼasen no kɔ Eufrate ho mprempren ara na fa kosie ɔbotan tokuru bi mu.”
5 ೫ ಆಗ ಯೆಹೋವನ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆನು.
Enti mede kosiee Eufrate ho, sɛnea Awurade ka kyerɛɛ me no.
6 ೬ ಬಹು ದಿನಗಳ ಮೇಲೆ ಯೆಹೋವನು ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ” ಎಂದು ಹೇಳಿದನು.
Nna bebree akyi no, Awurade ka kyerɛɛ me se, “Afei kɔ Eufrate ho na kɔfa abɔso a meka kyerɛɛ wo se fa kosie hɔ no.”
7 ೭ ನಾನು ಯೂಫ್ರೆಟಿಸ್ ನದಿಗೆ ಹೋಗಿ ಅಗೆದು, ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು, ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.
Enti mekɔɔ Eufrate ho kotuu abɔso no wɔ beae a mede siei no, nanso na asuw atetew a so nni mfaso biara.
8 ೮ ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Afei Awurade asɛm baa me nkyɛn se,
9 ೯ “ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.
“Sɛɛ na Awurade se, ‘Saa ara na mɛsɛe Yuda ahantan ne Yerusalem ahantankyɛnee no.
10 ೧೦ ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.
Saa amumɔyɛfo yi a wɔmpɛ sɛ wotie mʼasɛm na wodi wɔn komaden akyi na wodi anyame afoforo akyi som wɔn, sɔre wɔn no, bɛyɛ sɛ saa abɔso yi, na wɔn so remma mfaso biara!
11 ೧೧ ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ.
Sɛnea abɔso kyekyere onipa asen no, saa ara na mede Israelfi ne Yudafi nyinaa bataa me ho sɛ wɔnyɛ me nkurɔfo a wɔbɛma me din so, aka mʼayeyi na wɔahyɛ me anuonyam, nanso wɔantie me,’ nea Awurade se ni.
12 ೧೨ “ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ, “ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು ನಮಗೆ ಗೊತ್ತಿಲ್ಲವೋ” ಎಂದು ಹೇಳುವರು.
“Ka kyerɛ wɔn se, ‘Nea Awurade, Israel Nyankopɔn se ni, Wɔmfa nsa nhyɛ nsa kotoku biara ma.’ Na sɛ wɔka kyerɛ wo se, ‘Yenim sɛ ɛsɛ sɛ wɔde nsa hyɛ nsa kotoku biara ma a,’
13 ೧೩ ಆಗ ನೀನು ಅವರಿಗೆ, “ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ,
afei ka kyerɛ wɔn se, ‘Nea Awurade se ni: Mede nsabow bɛhyɛ wɔn a wɔtete asase yi so nyinaa ma, a ahemfo a wɔte Dawid ahengua so, asɔfo, adiyifo ne wɔn a wɔtete Yerusalem nyinaa ka ho bi.
14 ೧೪ ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.
Mɛtotow wɔn abobɔ wɔn ho wɔn ho, agyanom ne mmabarima nyinaa, Awurade na ose. Meremma ahummɔbɔ anaa ayamye anaa ayamhyehye nsiw ɔsɛe a merebɛsɛe wɔn no ho kwan.’”
15 ೧೫ ಕಿವಿಗೊಟ್ಟು ಕೇಳಿರಿ, ಹೆಮ್ಮೆಪಡಬೇಡಿರಿ; ಯೆಹೋವನೇ ಮಾತನಾಡಿದ್ದಾನೆ.
Muntie na monyɛ aso, na monnyɛ ahantan, efisɛ Awurade akasa.
16 ೧೬ ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.
Monhyɛ Awurade, mo Nyankopɔn, anuonyam ansa na wama sum aduru, ansa na mo anan ahintihintiw wɔ nkoko a ɛso reduru sum no so. Mo ani da hann so, nanso ɔbɛdan no sum kusuu na wɔasesa ayɛ no sum kabii.
17 ೧೭ ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.
Nanso sɛ moantie a, mesu wɔ kokoa mu esiane mo ahantan nti; mʼani bɛtaataa nsu, na nusu aguare me, efisɛ wɔbɛfa Awurade nguankuw no akɔ nnommum mu.
18 ೧೮ ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.
Monka nkyerɛ ɔhene ne ɔhemmea se, “Mumfi mo ahengua so nsi fam, na mo anuonyam ahenkyɛw befi mo ti so.”
19 ೧೯ ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.
Wɔbɛtoto Negeb nkuropɔn apon mu, na obiara nni hɔ a obebuebue. Wɔbɛsoa Yudafo akɔ nnommum mu wobetwa wɔn asu koraa.
20 ೨೦ ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ?
Mo mpagyaw mo ani nhwɛ wɔn a wofi atifi fam reba no. Nguankuw a wɔde hyɛɛ mo nsa no, nguan a mode wɔn hoahoaa mo ho no wɔ he?
21 ೨೧ ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ.
Sɛ Awurade de wɔn a wɔyɛ mo nnamfonom yɛ mo so atitiriw a, dɛn na mobɛka? Na ɛrenyɛ mo yaw te sɛnea ɔbea ɔreko awo ana?
22 ೨೨ “ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.
Na sɛ wubebisa wo ho se, “Adɛn nti na eyi aba me so a?” Na efi wʼamumɔyɛ bebrebe no nti na wɔatetew wo fam atade mu ayɛ wo nipadua basaa no.
23 ೨೩ ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.
Etiopiani betumi asesa nʼahosu ana? Na ɔsebɔ nso betumi asesa ne ho nsisimu no? Saa ara na worentumi nyɛ papa, wo a bɔneyɛ akokwaw wo no.
24 ೨೪ ಆದಕಾರಣ ಬಿರುಗಾಳಿಯು ಬಡಿದುಕೊಂಡು ಹೋಗುವ ಒಣ ಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು.
“Mɛbɔ mo ahwete sɛ ntɛtɛ a, nweatam so mframa rebɔ no.
25 ೨೫ ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ನುಡಿಯುತ್ತಾನೆ.
Eyi ne nea mubenya, mo kyɛfa a mahyɛ ama mo,” Awurade na ose, “efisɛ mo werɛ afi me na mode mo ho ato anyame huhuw so.
26 ೨೬ ನಿನ್ನ ಉಡುಗೆಯನ್ನು ನಿನ್ನ ಕಣ್ಣಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವುದು.
Mɛtwe mo fam ntade abua mo anim na wɔahu mo ahohora.
27 ೨೭ ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?
Mo aguamammɔ ne mo akɔnnɔ bɔne, mo aguamammɔ a momfɛre ho! Mahu mo nneyɛe bɔne no wɔ nkoko ne sare so. Due, Yerusalem! Wobɛyɛ fi akosi da bɛn?”