< ಯೆರೆಮೀಯನು 14 >
1 ೧ ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:
가뭄에 대하여 예레미야에게 임한 여호와의 말씀이라
2 ೨ ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.
유다가 슬퍼하며 성문의 무리가 곤비하여 땅에 앉아 애통하니 예루살렘의 부르짖음이 위에 오르도다
3 ೩ ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
귀인들은 자기 사환들을 보내어 물을 길으라 하나 그들이 우물에 갔어도 물을 얻지 못하여 빈 그릇으로 돌아오니 부끄럽고 근심하여 그 머리를 가리우며
4 ೪ ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
땅에 비가 없어 지면이 갈라지니 밭가는 자가 부끄러워서 그 머리를 가리는도다
5 ೫ ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈದು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ.
들의 암사슴은 새끼를 낳아도 풀이 없으므로 내어버리며
6 ೬ ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.
들나귀들은 자산 위에 서서 시랑 같이 헐떡이며 풀이 없으므로 눈이 아득하여 하는도다
7 ೭ ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.
여호와여 우리의 죄악이 우리에게 대하여 증거할지라도 주는 주의 이름을 위하여 일하소서 우리의 타락함이 많으니이다 우리가 주께 범죄하였나이다
8 ೮ ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?
이스라엘의 소망이시요 곤란한 때의 구원자시여 어찌하여 이 땅에서 거류하는 자 같이, 하룻밤을 유숙하는 행인 같이 하시나이까
9 ೯ ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.
어찌하여 놀라 벙벙하는 자 같으시며 구원치 못하는 용사 같으시니이까 여호와여 주는 오히려 우리 중에 계시고 우리는 주의 이름으로 일컬음을 받는 자이오니 우리를 버리지 마옵소서
10 ೧೦ ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.
여호와께서 이 백성에 대하여 말씀하시되 그들이 어그러진 길을 사랑하여 그 발을 금하지 아니하므로 나 여호와가 그들을 받지 아니하고 이제 그들의 죄를 기억하고 그 죄를 벌하리라 하시고
11 ೧೧ ಮತ್ತು ಯೆಹೋವನು ನನಗೆ, “ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆ ಮಾಡಬೇಡ.
여호와께서 또 내게 이르시되 너는 이 백성을 위하여 복을 구하지 말라
12 ೧೨ ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.
그들이 금식할지라도 내가 그 부르짖음을 듣지 아니하겠고 번제와 소제를 드릴지라도 내가 그것을 받지 아니할 뿐 아니라 칼과 기근과 염병으로 그들을 멸하리라
13 ೧೩ ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.
이에 내가 가로되 슬프도소이다 주 여호와여 보시옵소서 선지자들이 그들에게 이르기를 너희가 칼을 보지 아니하겠고 기근은 너희에게 이르지 아니할 것이라 여호와께서 이곳에서 너희에게 확실한 평강을 주시리라 하나이다
14 ೧೪ ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.
여호와께서 내게 이르시되 선지자들이 내 이름으로 거짓 예언을 하도다 나는 그들을 보내지 아니하였고 그들에게 명하거나 이르지 아니하였거늘 그들이 거짓 계시와 복술과 허탄한 것과 자기 마음의 속임으로 너희에게 예언하도다
15 ೧೫ ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.
그러므로 내가 보내지 아니하였어도 내 이름으로 예언하여 이르기를 칼과 기근이 이 땅에 이르지 아니하리라 하는 선지자들에 대하여 나 여호와가 이같이 이르노라 그 선지자들은 칼과 기근에 멸망할 것이요
16 ೧೬ ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.
그들의 예언을 받은 백성은 기근과 칼로 인하여 예루살렘 거리에 던짐을 입을 것인즉 그들을 장사할 자가 없을 것이요 그 아내와 그 아들과 그 딸도 그렇게 되리니 이는 내가 그들의 악을 그 위에 부음이니라
17 ೧೭ ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.
너는 이 말로 그들에게 이르라 내 눈이 밤낮으로 끊치지 아니하고 눈물을 흘리리니 이는 처녀 딸 내 백성이 큰 파멸, 중한 창상을 인하여 망함이라
18 ೧೮ ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.
내가 들에 나간즉 칼에 죽은 자요 내가 성에 들어간즉 기근으로 병든 자며 선지자나 제사장이나 다 땅에 두루 다니며 어찌할 바를 알지 못하는도다
19 ೧೯ ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!
주께서 유다를 온전히 버리시나이까 주의 심령이 시온을 싫어하시나이까 어찌하여 우리를 치시고 치료하지 아니하시나이까 우리가 평강을 바라도 좋은 것이 없고 치료받기를 기다려도 놀람을 보나이다
20 ೨೦ ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.
여호와여 우리가 우리의 악과 우리 조상의 죄악을 인정하나이다 우리가 주께 범죄하였나이다
21 ೨೧ ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.
주의 이름을 위하여 우리를 미워하지 마옵소서 주의 영광의 위를 욕되게 마옵소서 우리와 세우신 주의 언약을 기억하시고 폐하지 마옵소서
22 ೨೨ ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.
열방의 허무한 것 중에 능히 비를 내리게 할 자가 있나이까 하늘이 능히 소나기를 내릴 수 있으리이까 우리 하나님 여호와여 그리하는 자가 주가 아니시니이까 그러므로 우리가 주를 앙망하옵는 것은 주께서 이 모든 것을 만드셨음이니이다