< ಯೆರೆಮೀಯನು 15 >

1 ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
And Jehovah said unto me, Though Moses and Samuel stood before me, my soul [would] not [turn] toward this people. Send [them] out of my sight, and let them go forth.
2 ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.
And it shall come to pass, if they say unto thee, Whither shall we go forth? then thou shalt tell them, Thus saith Jehovah: Such as are for death, to death; and such as are for the sword, to the sword; and such as are for the famine, to the famine; and such as are for captivity, to captivity.
3 “ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.
For I will visit them with four kinds [of punishments], saith Jehovah: the sword to slay, and dogs to tear, and the fowl of the heavens, and the beasts of the earth, to devour and to destroy.
4 “ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
And I will give them over to be driven hither and thither amongst all the kingdoms of the earth, because of Manasseh the son of Hezekiah, king of Judah, for that which he did in Jerusalem.
5 ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?
For who shall have pity upon thee, Jerusalem? and who shall bemoan thee? and who shall turn aside to ask after thy welfare?
6 ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.
Thou hast cast me off, saith Jehovah, thou art gone backward; and I have stretched out my hand against thee, and will destroy thee: I am become weary of repenting.
7 ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.
And I will fan them with a fan in the gates of the land; I will bereave of children [and] destroy my people: they have not returned from their ways.
8 ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.
Their widows are increased to me more than the sand of the seas; I have brought upon them, against the mother of the young men, a spoiler at noonday; I have caused anguish and terror to fall upon her suddenly.
9 ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಳುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ. ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು’” ಇದು ಯೆಹೋವನ ನುಡಿ.
She that hath borne seven languisheth, she hath given up the ghost; her sun is gone down while it is yet day; she is put to shame and confounded. And the residue of them will I give up to the sword before their enemies, saith Jehovah.
10 ೧೦ ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.
Woe is me, my mother, that thou hast borne me a man of strife and a man of contention to the whole land! I have not lent on usury, nor have they lent to me on usury; [yet] every one of them doth curse me.
11 ೧೧ ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.
Jehovah said, Verily I will set thee free for [thy] good; verily I will cause the enemy to meet thee kindly in the time of evil and in the time of affliction.
12 ೧೨ ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ತಾಮ್ರವನ್ನು ಮುರಿಯುವುದು ಯಾರಿಂದಾದೀತು?” ಎಂದು ಹೇಳಿದನು.
Will iron break? iron from the north? and bronze?
13 ೧೩ “ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಮತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ,
Thy substance and thy treasures will I give to the spoil without price, and that for all thy sins, and in all thy borders;
14 ೧೪ ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.”
and I will make [them] to pass with thine enemies into a land that thou knowest not: for a fire is kindled in mine anger; it shall burn upon you.
15 ೧೫ ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.
Jehovah, thou knowest: remember me, and visit me, and avenge me of my persecutors; in thy long-suffering take me not away: know that for thy sake I bear reproach.
16 ೧೬ ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!
Thy words were found, and I did eat them, and thy words were unto me the joy and rejoicing of my heart; for I am called by thy name, O Jehovah, God of hosts.
17 ೧೭ ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ. ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.
I sat not in the assembly of the mockers, nor exulted: I sat alone because of thy hand; for thou hast filled me with indignation.
18 ೧೮ ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು.
Why is my pain perpetual, and my wound incurable? It refuseth to be healed. Wilt thou be altogether unto me as a treacherous [spring], [as] waters that fail?
19 ೧೯ ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.
Therefore thus saith Jehovah: If thou return, then will I bring thee again, thou shalt stand before me; and if thou take forth the precious from the vile, thou shalt be as my mouth. Let them return unto thee; but return not thou unto them.
20 ೨೦ ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.
And I will make thee unto this people a strong brazen wall; and they shall fight against thee, but they shall not prevail against thee: for I am with thee, to save thee and to deliver thee, saith Jehovah;
21 ೨೧ ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು” ಎಂದಿದ್ದಾನೆ.
yea, I will deliver thee out of the hand of the wicked, and I will redeem thee out of the hand of the terrible.

< ಯೆರೆಮೀಯನು 15 >