< ಯೆರೆಮೀಯನು 19 >

1 ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.
כֹּ֚ה אָמַ֣ר יְהוָ֔ה הָל֛וֹךְ וְקָנִ֥יתָ בַקְבֻּ֖ק יוֹצֵ֣ר חָ֑רֶשׂ וּמִזִּקְנֵ֣י הָעָ֔ם וּמִזִּקְנֵ֖י הַכֹּהֲנִֽים׃
2 ನೀನು ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು.
וְיָצָ֙אתָ֙ אֶל־גֵּ֣יא בֶן־הִנֹּ֔ם אֲשֶׁ֕ר פֶּ֖תַח שַׁ֣עַר החרסות וְקָרָ֣אתָ שָּׁ֔ם אֶת־הַדְּבָרִ֖ים אֲשֶׁר־אֲדַבֵּ֥ר אֵלֶֽיךָ׃
3 ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.
וְאָֽמַרְתָּ֙ שִׁמְע֣וּ דְבַר־יְהוָ֔ה מַלְכֵ֣י יְהוּדָ֔ה וְיֹשְׁבֵ֖י יְרֽוּשָׁלִָ֑ם כֹּֽה־אָמַר֩ יְהוָ֨ה צְבָא֜וֹת אֱלֹהֵ֣י יִשְׂרָאֵ֗ל הִנְנִ֨י מֵבִ֤יא רָעָה֙ עַל־הַמָּק֣וֹם הַזֶּ֔ה אֲשֶׁ֥ר כָּל־שֹׁמְעָ֖הּ תִּצַּ֥לְנָה אָזְנָֽיו׃
4 “‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.
יַ֣עַן ׀ אֲשֶׁ֣ר עֲזָבֻ֗נִי וַֽיְנַכְּר֞וּ אֶת־הַמָּק֤וֹם הַזֶּה֙ וַיְקַטְּרוּ־בוֹ֙ לֵאלֹהִ֣ים אֲחֵרִ֔ים אֲשֶׁ֧ר לֹֽא־יְדָע֛וּם הֵ֥מָּה וַאֲבֽוֹתֵיהֶ֖ם וּמַלְכֵ֣י יְהוּדָ֑ה וּמָֽלְא֛וּ אֶת־הַמָּק֥וֹם הַזֶּ֖ה דַּ֥ם נְקִיִּֽם׃
5 ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
וּבָנ֞וּ אֶת־בָּמ֣וֹת הַבַּ֗עַל לִשְׂרֹ֧ף אֶת־בְּנֵיהֶ֛ם בָּאֵ֖שׁ עֹל֣וֹת לַבָּ֑עַל אֲשֶׁ֤ר לֹֽא־צִוִּ֙יתִי֙ וְלֹ֣א דִבַּ֔רְתִּי וְלֹ֥א עָלְתָ֖ה עַל־לִבִּֽי׃ פ
6 ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವುದು.
לָכֵ֞ן הִנֵּֽה־יָמִ֤ים בָּאִים֙ נְאֻם־יְהוָ֔ה וְלֹא־יִקָּרֵא֩ לַמָּק֨וֹם הַזֶּ֥ה ע֛וֹד הַתֹּ֖פֶת וְגֵ֣יא בֶן־הִנֹּ֑ם כִּ֖י אִם־גֵּ֥יא הַהֲרֵגָֽה׃
7 ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.
וּ֠בַקֹּתִי אֶת־עֲצַ֨ת יְהוּדָ֤ה וִירוּשָׁלִַ֙ם֙ בַּמָּק֣וֹם הַזֶּ֔ה וְהִפַּלְתִּ֤ים בַּחֶ֙רֶב֙ לִפְנֵ֣י אֹֽיְבֵיהֶ֔ם וּבְיַ֖ד מְבַקְשֵׁ֣י נַפְשָׁ֑ם וְנָתַתִּ֤י אֶת־נִבְלָתָם֙ לְמַֽאֲכָ֔ל לְע֥וֹף הַשָּׁמַ֖יִם וּלְבֶהֱמַ֥ת הָאָֽרֶץ׃
8 ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
וְשַׂמְתִּי֙ אֶת־הָעִ֣יר הַזֹּ֔את לְשַׁמָּ֖ה וְלִשְׁרֵקָ֑ה כֹּ֚ל עֹבֵ֣ר עָלֶ֔יהָ יִשֹּׁ֥ם וְיִשְׁרֹ֖ק עַל־כָּל־מַכֹּתֶֽהָ׃
9 ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.’”
וְהַֽאֲכַלְתִּ֞ים אֶת־בְּשַׂ֣ר בְּנֵיהֶ֗ם וְאֵת֙ בְּשַׂ֣ר בְּנֹתֵיהֶ֔ם וְאִ֥ישׁ בְּשַׂר־רֵעֵ֖הוּ יֹאכֵ֑לוּ בְּמָצוֹר֙ וּבְמָצ֔וֹק אֲשֶׁ֨ר יָצִ֧יקוּ לָהֶ֛ם אֹיְבֵיהֶ֖ם וּמְבַקְשֵׁ֥י נַפְשָֽׁם׃
10 ೧೦ ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಮಡಿಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು,
וְשָׁבַרְתָּ֖ הַבַּקְבֻּ֑ק לְעֵינֵי֙ הָֽאֲנָשִׁ֔ים הַהֹלְכִ֖ים אוֹתָֽךְ׃
11 ೧೧ “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.
וְאָמַרְתָּ֨ אֲלֵיהֶ֜ם כֹּה־אָמַ֣ר ׀ יְהוָ֣ה צְבָא֗וֹת כָּ֣כָה אֶשְׁבֹּ֞ר אֶת־הָעָ֤ם הַזֶּה֙ וְאֶת־הָעִ֣יר הַזֹּ֔את כַּאֲשֶׁ֤ר יִשְׁבֹּר֙ אֶת־כְּלִ֣י הַיּוֹצֵ֔ר אֲשֶׁ֛ר לֹֽא־יוּכַ֥ל לְהֵרָפֵ֖ה ע֑וֹד וּבְתֹ֣פֶת יִקְבְּר֔וּ מֵאֵ֥ין מָק֖וֹם לִקְבּֽוֹר׃
12 ೧೨ ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಹೀಗೆ ನಾಶಪಡಿಸಿ, ಈ ಪಟ್ಟಣವನ್ನು ತೋಫೆತಿನ ಸ್ಥಿತಿಗೆ ತರುವೆನು.
כֵּֽן־אֶעֱשֶׂ֞ה לַמָּק֥וֹם הַזֶּ֛ה נְאֻם־יְהוָ֖ה וּלְיֽוֹשְׁבָ֑יו וְלָתֵ֛ת אֶת־הָעִ֥יר הַזֹּ֖את כְּתֹֽפֶת׃
13 ೧೩ ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”
וְהָי֞וּ בָּתֵּ֣י יְרוּשָׁלִַ֗ם וּבָתֵּי֙ מַלְכֵ֣י יְהוּדָ֔ה כִּמְק֥וֹם הַתֹּ֖פֶת הַטְּמֵאִ֑ים לְכֹ֣ל הַבָּתִּ֗ים אֲשֶׁ֨ר קִטְּר֜וּ עַל־גַּגֹּֽתֵיהֶם֙ לְכֹל֙ צְבָ֣א הַשָּׁמַ֔יִם וְהַסֵּ֥ךְ נְסָכִ֖ים לֵאלֹהִ֥ים אֲחֵרִֽים׃ פ
14 ೧೪ ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು,
וַיָּבֹ֤א יִרְמְיָ֙הוּ֙ מֵֽהַתֹּ֔פֶת אֲשֶׁ֨ר שְׁלָח֧וֹ יְהוָ֛ה שָׁ֖ם לְהִנָּבֵ֑א וַֽיַּעֲמֹד֙ בַּחֲצַ֣ר בֵּית־יְהוָ֔ה וַיֹּ֖אמֶר אֶל־כָּל־הָעָֽם׃ ס
15 ೧೫ “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.
כֹּֽה־אָמַ֞ר יְהוָ֤ה צְבָאוֹת֙ אֱלֹהֵ֣י יִשְׂרָאֵ֔ל הִנְנִ֨י מבי אֶל־הָעִ֤יר הַזֹּאת֙ וְעַל־כָּל־עָרֶ֔יהָ אֵ֚ת כָּל־הָ֣רָעָ֔ה אֲשֶׁ֥ר דִּבַּ֖רְתִּי עָלֶ֑יהָ כִּ֤י הִקְשׁוּ֙ אֶת־עָרְפָּ֔ם לְבִלְתִּ֖י שְׁמ֥וֹעַ אֶת־דְּבָרָֽי׃

< ಯೆರೆಮೀಯನು 19 >