< ಯೆರೆಮೀಯನು 2 >
1 ೧ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Och Herrans ord skedde till mig, och sade:
2 ೨ “ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.
Gack bort, och predika uppenbarliga i Jerusalem, och säg: Så säger Herren: Jag tänker uppå den välgerning, som dig skedde i dinom ungdom, och den kärlek, som jag dig beviste, då du vast dägelig, då du följde mig i öknene, uti det land der man intet sår;
3 ೩ ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿ.’”
Då Israel Herrans egen var, och hans första, frukt; den honom fräta ville, han måste få skuld, och olycka öfver honom komma, säger Herren.
4 ೪ ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;
Hörer Herrans ord, I af Jacobs hus, och all slägte af Israels hus.
5 ೫ ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?
Detta säger Herren: Hvad hafver edra fäder fattats uppå mig, att de trädde ifrå mig, och föllo intill de onyttiga afgudar, der de dock intet förvärfde;
6 ೬ ‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.
Och tänkte icke ens: Hvar är Herren, den oss utur Egypti land förde, och ledde oss i öknene, uti en öde vildmark, uti en torro och mörko mark, uti de mark der ingen vistades, eller någor menniska bodde?
7 ೭ ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.
Och jag hade eder in uti ett godt land, att I dess frukt och dess goda äta skullen; och då I der inkommen, orenaden I mitt land, och gjorden mitt arf till en styggelse.
8 ೮ ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.
Presterna tänkte intet: Hvar är Herren? Och de lärde aktade mig intet; och herdarna förde folket ifrå mig, och Propheterna propheterade om Baal, och föllo intill de onyttiga afgudar.
9 ೯ ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ.
Jag måste ju alltid träta med eder, och edrom barnabarnom, säger Herren.
10 ೧೦ “ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.
Går bort till Chittims öar, och ser till, och sänder till Kedar, och märker granneliga, och skåder till, om det går så der till;
11 ೧೧ ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.
Om Hedningarna omskifta sina gudar, ändock de inga gudar äro, och mitt folk hafver likväl omskift sina härlighet uti en onyttig afgud.
12 ೧೨ ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ.
Måtte dock himmelen gifva sig dervid, förskräckas och bäfva, säger Herren.
13 ೧೩ “ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.
Ty mitt folk gör en dubbel synd: Mig, som är en lefvande källa, öfvergifva de, och göra sig brunnar, ja, usla brunnar; ty de gifva intet vatten.
14 ೧೪ ಇಸ್ರಾಯೇಲ್ ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ?
Är då Israel en träl eller lifegen, att han hvars mans rof vara måste?
15 ೧೫ ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.
Ty lejonen ryta öfver honom, och ropa, och föröda hans land, och förbränna hans städer, så att der bor ingen uti.
16 ೧೬ ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.
De af Noph och Thahpanhes förkrossa dig hufvudet.
17 ೧೭ ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.
Detta gör du dig sjelf, i det att du öfvergifver Herran din Gud, så ofta han dig den rätta vägen leda vill.
18 ೧೮ ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?
Hvad hjelper dig det, att du far in uti Egypten, och vill dricka af det vattnet Sihor? Och hvad hjelper dig det, att du far till Assyrien, och vill dricka af älfvene ( Phrath )?
19 ೧೯ ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.
Det är dine ondskos skull, att du så plågad varder, och dine olydnos, att du så näpst varder: Alltså, måste du få veta och förfara, hvad jämmer och sorg det med sig hafver, att du öfvergifver Herran din Gud, och icke fruktar mig, säger Herren, Herren Zebaoth.
20 ೨೦ ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.
Ty du hafver af ålder sönderbrutit ditt ok, och sönderslitit din band, och sagt: Jag vill icke så undertryckt vara; utan uppå all hög berg och under all grön trä lopp du efter horeri.
21 ೨೧ “ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?
Men jag hade planterat dig till ett sött vinträ, och till en ganska rättsinnig säd; huru äst du då nu mig vorden till ett bittert vildt vinträ?
22 ೨೨ ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.
Och om du än tvådde dig med lut, och toge der mycken såpo till, så synes dock din ondsko dessmer för mig, säger Herren Herren.
23 ೨೩ “ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.
Huru tör du då säga: Jag är intet oren: jag håller mig icke intill Baalim? Se till, huru du hafver bedrifvit det i dalenom, och betänk, huru du gjort hafver; du lopp omkring såsom en camelinna uti sinom hetta;
24 ೨೪ ನೀನು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿ ನೋಡುವ ಅಡವಿಯ ಹೆಣ್ಣು ಕಾಡುಕತ್ತೆಯ ಹಾಗಿದ್ದಿ; ಅದಕ್ಕೆ ಬೆದೆ ಏರಿದಾಗ ಯಾವ ಗಂಡು ಕತ್ತೆಯೂ ಅದನ್ನು ಬದಿಗೆ ನೂಕುವುದಿಲ್ಲ. ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.
Och såsom vildåsnen plägar i öknene, då han af stor hetta så oförvägen löper, att ingen kan stilla honom. Den som det veta vill, han torf icke vida löpa; på vexledagomen ser man det väl.
25 ೨೫ “ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ.
Käre, håll dock stilla, och löp icke så oförvägen; men du sade: Der varder intet af; jag måste bola med de främmande, och löpa efter dem.
26 ೨೬ ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.
Lika som en tjuf kommer till skam, då han gripen varder; alltså skall Israels hus på skam komma, samt med deras Konungar, Förstar, Prester och Propheter;
27 ೨೭ ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.
Hvilke till trät säga: Du äst min fader; och till stenen: Du hafver födt mig; ty de vände ryggen till mig, och icke ansigtet; men när nöd är på, så säga de: Upp, och hjelp oss.
28 ೨೮ ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.
Hvar äro då dine gudar, som du dig gjort hafver? Bed dem stå upp; låt se, om de kunna hjelpa dig i dine nöd; ty så många städer, så många gudar hafver du, Juda.
29 ೨೯ ಯೆಹೋವನು ಹೀಗೆನ್ನುತ್ತಾನೆ, “ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀರಿ? ನೀವೆಲ್ಲರೂ ನನಗೆ ದ್ರೋಹಿಗಳು.
Hvad viljen I ännu gå till rätta med mig? I ären alle ifrå mig fallne, säger Herren.
30 ೩೦ ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
All hugg äro förgäfves på edor barn, de låta dock intet tukta sig; ty edart svärd uppfräter likväl edra Propheter, såsom ett grymt lejon.
31 ೩೧ ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
Du onda art, gif akt uppå Herrans ord: Är jag nu vorden Israel till en öken eller ödemark? Hvi säger då mitt folk: Vi äre herrar, och vilje intet löpa efter dig?
32 ೩೨ ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.
En jungfru förgäter dock icke sin krans, eller en brud sina hedersgåfvo; men mitt folk förgäter mig evinnerliga.
33 ೩೩ ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದುವರೆದಿದ್ದಿ! ಇದರಿಂದ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಹೊಂದಿಸಿಕೊಂಡಿದ್ದಿ.
Hvad bepryder du mycket ditt väsende, att jag skall vara dig nådelig? Under sådana sken bedrifver du ju mer och mer ondt.
34 ೩೪ ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.
Dertill finner man de fattigas och oskyldigas själars blod när dig i all rum; och det är icke hemligit, utan uppenbart uti de samma rum.
35 ೩೫ ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.
Och du säger ännu: Jag är oskyldig; han vände sina vrede ifrå mig; si, jag vill gå till rätta med dig om det du säger: Jag hafver icke syndat.
36 ೩೬ ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.
Hvi hvekar du så mycket, och faller nu hit och nu dit? Men du skall till skam varda med Egypten, lika som du med Assyrien till skam vorden äst.
37 ೩೭ ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.
Ty du måste ock dädan draga, och slå dina händer tillhopa uppå hufvudet; ty Herren skall låta ditt hopp fela, och intet skall lyckas dig när dem.