< ಯೆರೆಮೀಯನು 20 >

1 ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.
וַיִּשְׁמַ֤ע פַּשְׁחוּר֙ בֶּן־אִמֵּ֣ר הַכֹּהֵ֔ן וְהֽוּא־פָקִ֥יד נָגִ֖יד בְּבֵ֣ית יְהוָ֑ה אֶֽת־יִרְמְיָ֔הוּ נִבָּ֖א אֶת־הַדְּבָרִ֥ים הָאֵֽלֶּה׃
2 ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.
וַיַּכֶּ֣ה פַשְׁח֔וּר אֵ֖ת יִרְמְיָ֣הוּ הַנָּבִ֑יא וַיִּתֵּ֨ן אֹת֜וֹ עַל־הַמַּהְפֶּ֗כֶת אֲשֶׁ֨ר בְּשַׁ֤עַר בִּנְיָמִן֙ הָֽעֶלְי֔וֹן אֲשֶׁ֖ר בְּבֵ֥ית יְהוָֽה׃
3 ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು, “ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ಮಿಸ್ಸಾಬೀಬ್ ಎಂದು ಹೇಳಿದ್ದಾನೆ.
וַֽיְהִי֙ מִֽמָּחֳרָ֔ת וַיֹּצֵ֥א פַשְׁח֛וּר אֶֽת־יִרְמְיָ֖הוּ מִן־הַמַּהְפָּ֑כֶת וַיֹּ֨אמֶר אֵלָ֜יו יִרְמְיָ֗הוּ לֹ֤א פַשְׁחוּר֙ קָרָ֤א יְהוָה֙ שְׁמֶ֔ךָ כִּ֖י אִם־מָג֥וֹר מִסָּבִֽיב׃ פ
4 ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.
כִּ֣י כֹ֣ה אָמַ֣ר יְהוָ֡ה הִנְנִי֩ נֹתֶנְךָ֨ לְמָג֜וֹר לְךָ֣ וּלְכָל־אֹהֲבֶ֗יךָ וְנָֽפְל֛וּ בְּחֶ֥רֶב אֹיְבֵיהֶ֖ם וְעֵינֶ֣יךָ רֹא֑וֹת וְאֶת־כָּל־יְהוּדָ֗ה אֶתֵּן֙ בְּיַ֣ד מֶֽלֶךְ־בָּבֶ֔ל וְהִגְלָ֥ם בָּבֶ֖לָה וְהִכָּ֥ם בֶּחָֽרֶב׃
5 ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.
וְנָתַתִּ֗י אֶת־כָּל־ חֹ֙סֶן֙ הָעִ֣יר הַזֹּ֔את וְאֶת־כָּל־יְגִיעָ֖הּ וְאֶת־כָּל־יְקָרָ֑הּ וְאֵ֨ת כָּל־אוֹצְר֜וֹת מַלְכֵ֣י יְהוּדָ֗ה אֶתֵּן֙ בְּיַ֣ד אֹֽיְבֵיהֶ֔ם וּבְזָזוּם֙ וּלְקָח֔וּם וֶהֱבִיא֖וּם בָּבֶֽלָה׃
6 ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬಿಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ.
וְאַתָּ֣ה פַשְׁח֗וּר וְכֹל֙ יֹשְׁבֵ֣י בֵיתֶ֔ךָ תֵּלְכ֖וּ בַּשֶּׁ֑בִי וּבָבֶ֣ל תָּב֗וֹא וְשָׁ֤ם תָּמוּת֙ וְשָׁ֣ם תִּקָּבֵ֔ר אַתָּה֙ וְכָל־אֹ֣הֲבֶ֔יךָ אֲשֶׁר־נִבֵּ֥אתָ לָהֶ֖ם בַּשָּֽׁקֶר׃ ס
7 ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.
פִּתִּיתַ֤נִי יְהוָה֙ וָֽאֶפָּ֔ת חֲזַקְתַּ֖נִי וַתּוּכָ֑ל הָיִ֤יתִי לִשְׂחוֹק֙ כָּל־הַיּ֔וֹם כֻּלֹּ֖ה לֹעֵ֥ג לִֽי׃
8 ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.
כִּֽי־מִדֵּ֤י אֲדַבֵּר֙ אֶזְעָ֔ק חָמָ֥ס וָשֹׁ֖ד אֶקְרָ֑א כִּֽי־הָיָ֨ה דְבַר־יְהוָ֥ה לִ֛י לְחֶרְפָּ֥ה וּלְקֶ֖לֶס כָּל־הַיּֽוֹם׃
9 “ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.
וְאָמַרְתִּ֣י לֹֽא־אֶזְכְּרֶ֗נּוּ וְלֹֽא־אֲדַבֵּ֥ר עוֹד֙ בִּשְׁמ֔וֹ וְהָיָ֤ה בְלִבִּי֙ כְּאֵ֣שׁ בֹּעֶ֔רֶת עָצֻ֖ר בְּעַצְמֹתָ֑י וְנִלְאֵ֥יתִי כַּֽלְכֵ֖ל וְלֹ֥א אוּכָֽל׃
10 ೧೦ “ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.
כִּ֣י שָׁמַ֜עְתִּי דִּבַּ֣ת רַבִּים֮ מָג֣וֹר מִסָּבִיב֒ הַגִּ֙ידוּ֙ וְנַגִּידֶ֔נּוּ כֹּ֚ל אֱנ֣וֹשׁ שְׁלוֹמִ֔י שֹׁמְרֵ֖י צַלְעִ֑י אוּלַ֤י יְפֻתֶּה֙ וְנ֣וּכְלָה ל֔וֹ וְנִקְחָ֥ה נִקְמָתֵ֖נוּ מִמֶּֽנּוּ׃
11 ೧೧ ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.
וַֽיהוָ֤ה אוֹתִי֙ כְּגִבּ֣וֹר עָרִ֔יץ עַל־כֵּ֛ן רֹדְפַ֥י יִכָּשְׁל֖וּ וְלֹ֣א יֻכָ֑לוּ בֹּ֤שׁוּ מְאֹד֙ כִּֽי־לֹ֣א הִשְׂכִּ֔ילוּ כְּלִמַּ֥ת עוֹלָ֖ם לֹ֥א תִשָּׁכֵֽחַ׃
12 ೧೨ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ.
וַיהוָ֤ה צְבָאוֹת֙ בֹּחֵ֣ן צַדִּ֔יק רֹאֶ֥ה כְלָי֖וֹת וָלֵ֑ב אֶרְאֶ֤ה נִקְמָֽתְךָ֙ מֵהֶ֔ם כִּ֥י אֵלֶ֖יךָ גִּלִּ֥יתִי אֶת־רִיבִֽי׃ ס
13 ೧೩ ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ.
שִׁ֚ירוּ לַֽיהוָ֔ה הַֽלְל֖וּ אֶת־יְהוָ֑ה כִּ֥י הִצִּ֛יל אֶת־נֶ֥פֶשׁ אֶבְי֖וֹן מִיַּ֥ד מְרֵעִֽים׃ ס
14 ೧೪ ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ!
אָר֣וּר הַיּ֔וֹם אֲשֶׁ֥ר יֻלַּ֖דְתִּי בּ֑וֹ י֛וֹם אֲשֶׁר־יְלָדַ֥תְנִי אִמִּ֖י אַל־יְהִ֥י בָרֽוּךְ׃
15 ೧೫ “ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ!
אָר֣וּר הָאִ֗ישׁ אֲשֶׁ֨ר בִּשַּׂ֤ר אֶת־אָבִי֙ לֵאמֹ֔ר יֻֽלַּד־לְךָ֖ בֵּ֣ן זָכָ֑ר שַׂמֵּ֖חַ שִׂמֳּחָֽהוּ׃
16 ೧೬ ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!
וְהָיָה֙ הָאִ֣ישׁ הַה֔וּא כֶּֽעָרִ֛ים אֲשֶׁר־הָפַ֥ךְ יְהוָ֖ה וְלֹ֣א נִחָ֑ם וְשָׁמַ֤ע זְעָקָה֙ בַּבֹּ֔קֶר וּתְרוּעָ֖ה בְּעֵ֥ת צָהֳרָֽיִם׃
17 ೧೭ ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು.
אֲשֶׁ֥ר לֹא־מוֹתְתַ֖נִי מֵרָ֑חֶם וַתְּהִי־לִ֤י אִמִּי֙ קִבְרִ֔י וְרַחְמָ֖הֿ הֲרַ֥ת עוֹלָֽם׃
18 ೧೮ ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?
לָ֤מָּה זֶּה֙ מֵרֶ֣חֶם יָצָ֔אתִי לִרְא֥וֹת עָמָ֖ל וְיָג֑וֹן וַיִּכְל֥וּ בְּבֹ֖שֶׁת יָמָֽי׃ פ

< ಯೆರೆಮೀಯನು 20 >